ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರ ನಾನಾ ಸಮಸ್ಯೆಗಳನ್ನು ಎದುರಿಸುತ್ತಿದೆ. ಕೇಂದ್ರ ಸರ್ಕಾರದ ಅಸಹಕಾರದಿಂದ ಅಕ್ಕಿ ದೊರೆಯುತ್ತಿಲ್ಲವೆಂದು ರಾಜ್ಯ ಸರ್ಕಾರ ಆರೋಪಿಸಿದೆ.
ಅನ್ನಭಾಗ್ಯ ಯೋಜನೆ ಘೋಷಣೆ ಮಾಡಿ ಅಕ್ಕಿ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ನೆರವು ನೀಡಲು 3 ಕೇಂದ್ರೀಯ ಸಂಸ್ಥೆಗಳು ಮುಂದೆ ಬಂದಿವೆ.
ಕೇಂದ್ರೀಯ ಸ್ವಾಮ್ಯದ ಮೂರು ಸಂಸ್ಥೆಗಳಾದ ರಾಷ್ಟ್ರೀಯ ಗ್ರಾಹಕರ ಸಹಕಾರ ಒಕ್ಕೂಟ (ಎನ್ ಸಿಸಿಎಫ್), ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಮಹಾಮಂಡಳ (ನಾಫೆಡ್) ಮತ್ತು ಭಾರತೀಯ ಆಹಾರ ನಿಗಮ (ಎಫ್ ಸಿಐ) ರಾಜ್ಯ ಸರ್ಕಾರಕ್ಕೆ ಅಕ್ಕಿ ನೀಡಲು ತಾತ್ವಿಕ ಒಪ್ಪಿಗೆ ನೀಡಿವೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಸಂಪುಟ ಸಭೆ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ, ಯಾರ ಹೆಸರಿನಲ್ಲಿ ಕಾರ್ಡ್ ಇದೆಯೋ ಅವರ ಖಾತೆಗೆ ಜುಲೈ 1 ರಿಂದ ಅನ್ವಯವಾಗುವಂತೆ ಹಣ ಜಮೆ ಮಾಡುತ್ತೇವೆ. ಒಬ್ಬರಿಗೆ ಐದು ಕೆಜಿ ಅಕ್ಕಿಗೆ 170 ರೂ.ಗಳನ್ನು ನೀಡುತ್ತೇವೆ. ಅಕ್ಕಿ ಲಭ್ಯವಾಗುವವರೆಗೆ ತಾತ್ಕಾಲಿಕ ಹಾಗೂ ಪರ್ಯಾಯ.ಅದರಂತೆ ಪ್ರತಿ ಕೆಜಿ ಅಕ್ಕಿಗೆ 34 ರೂ.ಗಳಂತೆ ಪ್ರತಿ ಕುಟುಂಬಕ್ಕೆ 170 ರೂ.ಗಳನ್ನು ನೀಡಲು ತೀರ್ಮಾನಿಸಲಾಗಿದೆ. ಜು. 1ರಿಂದಲೇ ಫಲಾನುಭವಿಗಳಿಗೆ ಈ ಹಣವನ್ನು ಜಮೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಬಡವರ ಕಾರ್ಯಕ್ರಮಕ್ಕೆ ಕಲ್ಲುಹಾಕುವ ಕೆಲಸ ಮಾಡಿದ್ದಾರೆ; ಸಿದ್ದರಾಮಯ್ಯ