Two Wheeler Bike Scheme: ದ್ವಿಚಕ್ರ ವಾಹನಗಳಿಗೆ ಹಾಗೂ ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇದೀಗ ಸಿಹಿ ಸುದ್ದಿ ಕೇಳಿ ಬಂದಿದೆ ಸಮಾಜ ಕಲ್ಯಾಣ ಇಲಾಖೆಯಿಂದ ಇತ್ತೀಚಿಗೆ ನಡೆದ ಕಾರ್ಯಕ್ರಮದ ಸಮಯದಲ್ಲಿ ದ್ವಿಚಕ್ರ ವಾಹನಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅವುಗಳನ್ನ ವಿತರಣೆ ಮಾಡುವ ಕಾರ್ಯಕ್ರಮವನ್ನು ಪ್ರಾರಂಭ ಮಾಡಲಾಯಿತು.
ಇದೆ ಮಾರ್ಚ್ 9ನೇ ತಾರೀಕಿನಂದು ಹಮ್ಮಿಕೊಳ್ಳಲಾದ ಸಮಾಜ ಕಲ್ಯಾಣ ಇಲಾಖೆಯ ಕಾರ್ಯಕ್ರಮದಲ್ಲಿ ಗಂಗಾ ಕಲ್ಯಾಣ ಯೋಜನೆಯ ಕಾರ್ಯಕ್ರಮವನ್ನು e- RUPI ಮುಖಾಂತರ ಅನುಷ್ಠಾನಕ್ಕೆ ತರಲಾಯಿತು ಇದರ ಜೊತೆಗೆ ಈ ಕಾರ್ಯಕ್ರಮದಲ್ಲಿ ವಿವಿಧ ನಿಯಮಗಳ ಫಲಾನುಭವಿಗಳ ಆಧಾರಿತ ಸವಲತ್ತುಗಳನ್ನು ಸಹ ವಿತರಣೆ ಮಾಡಲಾಯಿತು.
ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಭೋವಿ ಅಭಿವೃದ್ಧಿ ನಿಗಮ, ತಾಂಡ ಅಭಿವೃದ್ಧಿ ನಿಗಮಗಳ ವತಿಯಿಂದ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ ಡಾ. ಬಾಬು ಗಜಜೀವನ್ ರಾಮ್ ಸ್ವಉದ್ಯೋಗ ಯೋಜನೆಯ ಅಡಿಯಲ್ಲಿ 28,000 ದ್ವಿಚಕ್ರ ವಾಹನ ವಿತರಣೆಗಾಗಿ ಗುರಿ ನಿಗದಿಪಡಿಸಲಾಗಿತ್ತು ಈ ವಿನೂತನ ಕಾರ್ಯಕ್ರಮಕ್ಕೆ ಇದೀಗ ಚಾಲನೆ ನೀಡಲಾಯಿತು.ಈ ಯೋಜನೆಯ ಮುಂಬರುವ ದಿನಗಳಲ್ಲಿ ಯಶಸ್ವಿಯಾಗಿ ನಡೆಯಲಿದ್ದು ಉತ್ತಮ ಸಮಾಜದ ನಿರ್ಮಾಣಕ್ಕೆ ನಾಂದಿಯಾಗಿದೆ.