ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಡಿಂಗ್ರಿ ನಾಗರಾಜ್ ವಿರುದ್ಧ ನಟಿ ರಾಣಿ ಗಂಭೀರ ಆರೋಪವೊಂದನ್ನ ಮಾಡಿದ್ದಾರೆ. ಡಿಂಗ್ರಿ ನಾಗರಾಜ್ ನಟಿಯರಿಗೆ ಅ-ಶ್ಲೀಲ ಮೆಸೇಜ್ಗಳನ್ನು ಕಳುಹಿಸುತ್ತಾರೆ ಮತ್ತು ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ನಟಿ ಮತ್ತು ಸಂಘದ ಉಪಾಧ್ಯಕ್ಷರಾದ ರಾಣಿ ಆರೋಪಿಸಿದ್ದಾರೆ.
ಹಿಳೆಯರನ್ನು ಅಗೌರವದಿಂದ ಇವರು ನಡೆಸಿಕೊಳ್ಳುತ್ತಾರೆ. ಅದರಲ್ಲೂ ಸಂಘದ ಕಾರ್ಯದರ್ಶಿಗಳೇ ಸಂಘದಲ್ಲಿ ಇರುವಂತಹ ಮಹಿಳೆಯರಿಗೆ ಅಶ್ಲೀಲ ವಿಡಿಯೋ ಕಳುಹಿಸುತ್ತಾರೆ ಎಂದು ಆರೋಪ ಮಾಡಿದ್ದಾರೆ. ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ಅಧ್ಯಕ್ಷ ಡಿಂಗ್ರಿ ನಾಗರಾಜ್ ಮತ್ತು ಪ್ರಧಾನ ಕಾರ್ಯದರ್ಶಿ ಆಡುಗೋಡಿ ಶ್ರೀನಿವಾಸ್ ಅವರು ಮಹಿಳಾ ಕಲಾವಿದರ ಜತೆಗೆ ಅಸಭ್ಯವಾಗಿ ವರ್ತಿಸುವುದರ ಜತೆಗೆ, ಅವಾಚ್ಯ ಶಬ್ದಗಳಿಂದ ಅವಮಾನಿಸುತ್ತಿದ್ದಾರೆ. ಜತೆಗೆ, ಮಹಿಳೆಯರಿಗೆ ಅ-ಶ್ಲೀಲ ವಿಡಿಯೋ ಕಳುಹಿಸುತ್ತಾರೆ. ಈ ವಿಚಾರವಾಗಿ ಗಲಾಟೆಯೂ ಆಗಿದೆ. ಸಂಘದ ಸಭೆಯಲ್ಲಿ ಚರ್ಚೆಯೂ ಆಗಿದೆ’ ಎಂದು ಹೇಳಿದ್ದಾರೆ.