ನಮಸ್ಕಾರ ಸ್ನೇಹಿತರೇ, ರಾಜ್ಯ ಸರಕಾರ ಘೋಷಿಸಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಜಾರಿ ಸಂಬಂಧಿಸಿದಂತೆ ಸಾರಿಗೆ ಇಲಾಖೆ ಇದೀಗ ಕೆಲಸ ಮಾಡುತ್ತಿದ್ದು, ಇನ್ನೆರಡು ದಿನಗಳಲ್ಲಿ ಯೋಜನೆಯ ಖರ್ಚು-ವೆಚ್ಚಗಳಿಗೆ ಸಂಬಂದಿಸಿದ ಪೂರ್ಣ ವರದಿ ಸರ್ಕಾರದ ಮುಂದಿಡಲಿದ್ದು, ಮೂರು ದಿನದ ಹಿಂದೆ ಗ್ಯಾರಂಟಿಗಳ ಜಾರಿ ವಿಚಾರಣೆಗಾಗಿ ಇದೀಗ ಆಯಾ ಇಲಾಖೆಯ ಹಣಕಾಸು ಮುಖ್ಯ ಅಧಿಕಾರಿಗಳ ಜೊತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸಭೆಯನ್ನ ನಡೆಸುತ್ತಿದ್ದಾರೆ.
ಸಭೆಯಲ್ಲಿ ಈಗಾಗಲೇ ಯೋಜನೆ ಜಾರಿಗೆ ತಗಲುವ ವೆಚ್ಚ, ಅನುಷ್ಠಾನ ಮತ್ತು ಯಾವೆಲ್ಲಾ ನಿಯಮಗಳು ಹಾಗು ಯಾವೆಲ್ಲಾ ಕಂಡೀಶನ್ ಗಳು ಇವೆ ಎನ್ನುವುದರ ಬಗ್ಗೆ ಇದೀಗ ಮಾಹಿತಿಯನ್ನ ಸರಕಾರ ಸಿದ್ಧಪಡಿಸುತ್ತಿದ್ದು, ಪ್ರಮುಖವಾಗಿ ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡುವುದರ ಕುರಿತಂತೆ ಮಾಹಿತಿ ಲಭ್ಯವಾಗಿದ್ದು, ಸಾರಿಗೆ ಇಲಾಖೆಯ ಅಧಿಕಾರಿಗಳು, ಸಾರಿಗೆ ಇಲಾಖೆಗೆ ಸಧ್ಯ ಉಚಿತ ಬಸ್ ಪ್ರಯಾಣ ಸ್ಕೀಮ್ ತಗಲುವ ವೆಚ್ಚ, ಜಿಲ್ಲೆ ಹಾಗು ತಾಲೂಕುವಾರು ಪ್ರತಿನಿತ್ಯ ಸಂಚರಿಸುವ ಪ್ರಯಾಣಿಕರ ಸಂಖ್ಯೆ ಸೇರಿದಂತೆ ಈ ಎಲ್ಲ ಅಂಶಗಳ ಆಧಾರದ ಮೇಲೆ ವರದಿಯನ್ನ ಸಿದ್ದಪಡಿಸಿದ್ದಾರೆ.
ಇನ್ನು ಎರಡು-ಮೂರು ದಿನಗಳೊಳಗೆ ಸಂಪೂರ್ಣ ವರದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈಸೇರಲಿದ್ದು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮಾಡುವಾಗ ಏನೆಲ್ಲಾ ಮಾರ್ಗಸೂಚಿ ಇರುತ್ತೆ ಅಂತ ನೋಡುವುದಾದರೆ, ಐಷಾರಾಮಿ ಬಸ್ ಗಳಲ್ಲಿ ಉಚಿತ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಸರಕಾರೀ ಬಸ್ ನಲ್ಲಿ ಸಂಚರಿಸುವ ಮಹಿಳೆಯರಿಗೆ ಪ್ರತ್ಯೇಕ ಪಾಸ್ ನೀಡಲು ಚಿಂತನೆ ನಡೆದಿದ್ದು, ಉಚಿತ ಪ್ರಯಾಣ ಯೋಜನೆಗೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಉಚಿತ ಬಸ್ ಪ್ರಯಾಣಕ್ಕೆ ಮಹಿಳಾ ಫಲಾನುಭವಿಗಳಿಗೆ ಆಧಾರ್ ಕಾರ್ಡ್ ಇದ್ದಾರೆ ಸಾಕಂತೆ.
ಎಲ್ಲಾ ಪ್ರೀಮಿಯಂ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಸಾಧ್ಯತೆಯಿದೆ.ಇನ್ನು ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ನಲ್ಲಿ ಕೇವಲ ದುಡಿಯುವ ವರ್ಗದ ಮಹಿಳೆಯರಿಗಷ್ಟೇ ಉಚಿತವಿರಲಿದ್ದು, ಇತರೇ ಬಸ್ ಗಳಲ್ಲಿ ಇಂತಿಷ್ಟು ಕಿಲೋಮೀಟರ್ ಒಳಗಡೆ ಸಂಚಾರ ನಿಯಮ ಬರುವ ಸಾಧ್ಯತೆಯಿದೆ. ಬಿಎಂಟಿಸಿ, ಕೆಎಸ್ ಆರ್ ಟಿಸಿ, ವಾಯುವ್ಯ ಹಾಗು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ ತಗಲುವ ಹೊರೆಯನ್ನ ಇದೀಗ ನೂತನ ಕಾಂಗ್ರೆಸ್ ಸರ್ಕಾರ ಭರಿಸಲು ನಿರ್ದಾರ ತೆಗೆದುಕೊಂಡಿದೆ. ಹಾಗಾಗಿ ಆದಷ್ಟು ಈ ಮಾಹಿತಿಯನ್ನ ಪ್ರತಿಯೊಬ್ಬರಿಗೂ ಶೇರ್ ಮಾಡಿ.