horticulturedir-karnataka

ಎಲ್ಲ ವರ್ಗದ ರೈತರಿಗೆ,ತೋಟಗಾರಿಕೆ ಇಲಾಖೆಯಿಂದ ಬಂಪರ್ ಕೊಡುಗೆ

Free Govt Schemes/ಸರ್ಕಾರಿ ಉಚಿತ ಯೋಜನೆಗಳು

ರೈತರ ಆರ್ಥಿಕ ಅಭಿವೃದ್ಧಿಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಹಲವು ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿವೆಯಾದರೂ, ಮಾಹಿತಿಯ ಕೊರತೆಯಿಂದಾಗಿ ರೈತರಿಗೆ ಯೋಜನೆಗಳ ಸೌಲಭ್ಯಗಳು ಸಿಗುತ್ತಿಲ್ಲ. ಕೃಷಿಯಲ್ಲಿ ಆಧುನಿಕತೆ ತರಲು ಕೃಷಿ ಯಂತ್ರೋಪಕರಣಗಳ ಖರೀದಿಗೆ ಸಬ್ಸಿಡಿ, ಬೀಜ, ಗೊಬ್ಬರ, ಖರೀದಿಗೆ ಪ್ರೋತ್ಸಾಹಧನ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಕೃಷಿ ಇಲಾಖೆಯಿಂದ ರೈತರಿಗೆ ದೊರೆಯುವ ಸೌಲಭ್ಯಗಳ ಮಾಹಿತಿ ಇಲ್ಲಿದೆ.

ಇದೀಗ ಕೃಷಿಯಲ್ಲಿಯೂ ಆಧುನಿಕ ತಂತ್ರಜ್ಞಾನ ಬಳಕೆಯಾಗುತ್ತಿದೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಕೃಷಿ ಯಂತ್ರೋಪಕರಣಗಳ ಬಳಕೆ ಕಡಿಮೆಯಾಗುತ್ತಿದ್ದರಿಂದ ಸರ್ಕಾರವು ರೈತರಿಗೆ ನೆರವು ನೀಡಲು ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಕೃಷಿ ಯಂತ್ರೋಪಕರಣಗಳು, ಪಂಪ್ ಸೆಟ್​ಗಳು, ಕೊಳವೆ ಬಾವಿಗಳು, ರಿಪೇರಿ ಮಾಡುವ, ಸೂಕ್ಷ್ಮ ನೀರಾವರಿ ಘಟಕಗಳ ದುರಸ್ಥಿ ಮಾಡುವ ಸೌಲಭ್ಯವನ್ನು ಗ್ರಾಮಗಳಲ್ಲಿಯೇ ನೀಡಲಾಗುತ್ತದೆ. ಈ ಕೇಂದ್ರಗಳನ್ನು ಬ್ಯಾಂಕ್ ಲೋನ್ ಆಧಾರದ ಮೇಲೆ ಒಂದು ಬಾರಿ ಸಹಾಯಧನ ನೀಡುವ ಮೂಲಕ ಗ್ರಾಮೀಣ ಕೃಷಿ ಯಂತ್ರೋಪಕರಣ ಕೇಂದ್ರ ಸ್ಥಾಪಿಸಿ ಮತ್ತು ಮುನ್ನೆಡಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ತೋಟಗಾರಿಕಾ ಇಲಾಖೆ: ನರೇಗಾ, ವಿವಿಧ ಯೋಜನೆಗಳ ಪ್ರಯೋಜನ ಪಡೆಯಿರಿ – Kundapra.com ಕುಂದಾಪ್ರ ಡಾಟ್ ಕಾಂ

ಪವರ್ ಟಿಲ್ಲರ್ ಖರೀದಿಗೆ ಸಾಮಾನ್ಯ ವರ್ಗದವರಿಗೆ ಶೇ. 50 ರಷ್ಟು ಸಹಾಯಧನ ಸಿಗಲಿದೆ. ಅದೇ ರೀತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ. 60ರಷ್ಟು ಸಹಾಯಧನ, ಗರಿಷ್ಠ 1 ಲಕ್ಷ ರೂ. ವರೆಗೆ ಸಹಾಯಧನ ದೊರೆಯಲಿದೆ. ಕೃಷಿ ಯಾಂತ್ರೀಕರಣ ಯೋಜನೆಯಡಿ ರೈತರಿಗೆ ಶೇ.90ರಷ್ಟು ಸಹಾಯಧನ ಸಿಗುತ್ತದೆ. ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯಿಂದ ಲಭ್ಯತೆ ಆಧಾರದ ಮೇಲೆ ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ನೀಡಲಾಗುತ್ತದೆ. ರೈತರ ಕೃಷಿ ಚಟುವಟಿಕೆಗೆ ಅನುಕೂಲವಾಗಲೆಂದು ಕೃಷಿ ಯಂತ್ರೋಪಕರಣಗಳಿಗೆ ಪ್ರೋತ್ಸಾಹ ಧನ ನೀಡಲಾಗುತ್ತದೆ. ಆಯಾ ಯಂತ್ರೋಪಕರಣಗಳಿಗೆ ಅನುಗುಣವಾಗಿ ಶೇ. 60, ಶೇ.50 ಮತ್ತು ಶೇ. 40 ರಷ್ಟು ಸಹಾಯಧನ ನೀಡಲಾಗುವುದು.

ಇದಕ್ಕಾಗಿ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರದಲ್ಲಿ ಅರ್ಜಿ ಸಲ್ಲಿಸಿ ಸಬ್ಸಿಡಿಯಲ್ಲಿ ಯಂತ್ರೋಪಕರಣಗಳನ್ನು ಪಡೆಯಬಹುದು ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಜಮೀನಿನ ಪಹಣಿ ಸೇರಿದಂತೆ ಜಮೀನಿನ ಜಮಾಬಂಧಿ, ಬ್ಯಾಂಕ್ ಖಾತೆ ವಿವರ, ಪಾಸ್ ಪೋರ್ಟ್ ಅಳತೆಯ ಫೋಟೋ ಸಲ್ಲಿಸಬೇಕು. ರೈತರ ಬ್ಯಾಂಕ್ ಪಾಸ್​ಬುಕ್​ನಲ್ಲಿ ರೈತರ ವಂತಿಕೆ ಸರಬರಾಜು ಸಂಸ್ಥೆಗೆ ಆರ್.ಟಿ.ಜಿ.ಎಸ್ ಜಮವಾಣೆಯಾದ ಜೆರಾಕ್ಸ್ ಪ್ರತಿ ಇರಬೇಕು. ಇನ್ನು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದರೆ ಜಾತಿ ಮತ್ತು ಆದಾಯ ಪ್ರಮಾಣಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ರೈತ ಸಂಪರ್ಕ ಕೇಂದ್ರ ಕಚೇರಿಯಲ್ಲಿ ವಿಚಾರಿಸಿ ಸಲ್ಲಿಸಬಹುದು.




ಕೆಳಗೆ,ನಿಮ್ಮ ಸ್ನೇಹಿತರಿಗೆ ಹಾಗೂ ವಾಟ್ಸಪ್ಪ್ - ಫೇಸ್ಬುಕ್ ಗ್ರೂಪ್ ಗಳಿಗೆ ಶೇರ ಮಾಡಿ...ಧನ್ಯವಾದ.