Indian Postal

Indian Postal: SSLC ಪಾಸಾದ ಅಭ್ಯರ್ಥಿಗಳಿಗೆ ಅಂಚೆ ಇಲಾಖೆಯಲ್ಲಿದೆ ಭರ್ಜರಿ ಉದ್ಯೋಗಾವಕಾಶ

Free Govt Schemes/ಸರ್ಕಾರಿ ಉಚಿತ ಯೋಜನೆಗಳು

Indian postal recruitment 2023: ಕರ್ನಾಟಕ ರಾಜ್ಯ ಸರ್ಕಾರದಿಂದ (Karnataka Govt) ಕರ್ನಾಟಕ ಅಂಚೆ ಇಲಾಖೆಯಿಂದ 38926 ಗ್ರಾಮೀಣ ಡಾಕ್ ಸೇವಾಕ್ ಹುದ್ದೆಗಳ ಬರ್ತಿದೆ ಅರ್ಜಿಗೆ ಆಹ್ವಾನ ಮಾಡಿದ್ದಾರೆ. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

indian postal recruitment 2023

SSLC ಪಾಸಾದ ಅಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕದ 2410 ಹುದ್ದೆಗಳು ಸೇರಿದಂತೆ ದೇಶಾದ್ಯಂತ 38926 ಗ್ರಾಮೀಣ ಡಾಕ್ ಸೇವಾಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಂಚೆ ಇಲಾಖೆಯಲ್ಲಿ ಬ್ರಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್, ಡಾಕ್ಟರ್ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಹುದ್ದೆಯ ಹೆಸರು: ಗ್ರಾಮೀಣ ಡಾಕ್ ಸೇವಾಕ್
ಕರ್ನಾಟಕದಲ್ಲಿ ಒಟ್ಟು: 2410
ಹುದ್ದೆಗಳು ಒಟ್ಟು ಹುದ್ದೆಗಳು: 38926

ವಿದ್ಯಾರ್ಹತೆ: ಗ್ರಾಮೀಣ ಡಾಟ್ ಸೇವಾ ಪೂಜೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಾಸಾಗಿರಬೇಕು. ಐಟಿಐ, ಡಿಪ್ಲೋಮೋ ಪಡೆದವರು ಅರ್ಜಿ ಸಲ್ಲಿಸಬಹುದು. ಕನ್ನಡ ಓದಲು ಬರೆಯಲು ಹಾಗೂ ಮಾತನಾಡಲು ಬರಬೇಕು.

ವಯಸ್ಸು:ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆ ದಿನಾಂಕಕ್ಕೆ ಸರಿಯಾಗಿ ಅಭ್ಯರ್ಥಿಗಳು ಕನಿಷ್ಠ 18 ವರ್ಷ ತುಂಬಿರಬೇಕು ಗರಿಷ್ಠ 40 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಐದು ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ.

ಅರ್ಜಿಯ ಶುಲ್ಕ: ಅಜ್ಜಿ ಹಾಕುವಾಗ ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳು ನೂರು ರೂಪಾಯಿ ಶುಲ್ಕವನ್ನು ಪಾವತಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ ಶುಲ್ಕದಿಂದ ವಿನಾಯಿತಿಯಿದೆ.

Online ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನಿಯಮಾನುಸಾರ ಸ್ವಯಂಚಾಲಿತ ಮೆರಿಟ್ ಪಟ್ಟಿ ತಯಾರು ಮಾಡುವ ಮೂಲಕ ನೇಮಕಾತಿ ಆಯ್ಕೆ ಪಟ್ಟಿ ಸಿದ್ದಪಡಿಸಿ ನೇಮಕ ಮಾಡಲಾಗುವುದು.

ಅಭ್ಯರ್ಥಿಗಳು Online ನಲ್ಲಿ ಅರ್ಜಿ ಸಲ್ಲಿಸಲು ಈ https://indiapostgdsonline.gov.in/ವೆಬ್ ಸೈಟ್ ಗೆ ಹೋಗಬೇಕಾಗುತ್ತದೆ. ಆನ್ಲೈನಲ್ಲಿ ಅರ್ಜಿ ಸಲ್ಲಿಸಲು ರಿಜಿಸ್ಟರ್ ಮೇಲೆ ಕ್ಲಿಕ್ ಮಾಡಬೇಕು ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಇಲ್ಲಿ ಅಭ್ಯರ್ಥಿಗಳು ಮೊಬೈಲ್ ನಂಬರ್, ಇ-ಮೇಲ್, ಎಸ್ ಎಸ್ ಎಲ್ ಸಿ ಅಂಕಪಟ್ಟಿಯಲ್ಲಿರುವಂತಹ ಹೆಸರು, ಹುಟ್ಟಿದ ದಿನಾಂಕ, ಜಾತಿ, ಭರ್ತಿ ಮಾಡಿ ಸಬ್ಮಿಟ್ ಬಟನ್ ಕ್ಲಿಕ್ ಮಾಡಬೇಕು.

ಅಭ್ಯರ್ಥಿಗಳು ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಖಾಲಿಯಿವೆ ಎಂಬುದನ್ನು ನೋಡಲು ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು ನಂತರ ಜಿಲ್ಲೆ ಆಯ್ಕೆ ಮಾಡಿಕೊಂಡು ವೀವ್ ಪೋಸ್ಟ್ ಹುದ್ದೆಗಳು ಖಾಲಿಯಿವೆ ಎಂಬುದನ್ನು ನೋಡಬಾಹುದು. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಮೇ 2 ರಿಂದ ಅರ್ಜಿ ಸ್ವೀಕಾರ ಆರಂಭವಾಗಿದೆ ಜೂನ್ 5 ರವರೆಗೆ ಅಭ್ಯರ್ಥಿಗಳು ಆನ್ಲೈನ್ ಆಗಿ ಸಲ್ಲಿಸಬಹುದು.

ಕೆಳಗೆ,ನಿಮ್ಮ ಸ್ನೇಹಿತರಿಗೆ ಹಾಗೂ ವಾಟ್ಸಪ್ಪ್ - ಫೇಸ್ಬುಕ್ ಗ್ರೂಪ್ ಗಳಿಗೆ ಶೇರ ಮಾಡಿ...ಧನ್ಯವಾದ.