ಬಾಲಿವುಡ್ ಬೆಡಗಿ ಕರೀನಾ ಕಪೂರ್ ಮತ್ತೊಮ್ಮೆ ಗರ್ಭಿಣಿಯಾಗಿದ್ದಾರೆ ಎಂಬ ಸುದ್ದಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಇದು ಬಿ-ಟೌನ್ ವಲಯದಲ್ಲಿ ದಿಢೀರ್ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಕರೀನಾ ಪ್ರತಿಕ್ರಿಯಿಸಿದ್ದಾರೆ.
ಸಿನಿಮಾ ಸೆಲೆಬ್ರಿಟಿಗಳ ಪ್ರೀತಿ, ಮದುವೆ ಮತ್ತು ಗರ್ಭಧಾರಣೆಯ ಸುದ್ದಿಗಳು ಯಾವಾಗಲೂ ಸಾಮಾಜಿಕ ಜಾಲತಾಣಗಳಲ್ಲಿ ಸ್ಥಾನ ಪಡೆದಿರುತ್ತವೆ. ಸದಾ ಒಂದಿಲ್ಲೊಂದು ಸುದ್ದಿಗಳು ಹರಿದಾಡುತ್ತಿರುತ್ತದೆ.ಸದ್ಯ ಬಾಲಿವುಡ್ ಸ್ಟಾರ್ ಹೀರೋಯಿನ್ ಕರೀನಾ ಕಪೂರ್ ಬಗ್ಗೆ ಕೆಲವು ಸುದ್ದಿಗಳು ಹರಿದಾಡುತ್ತಿದ್ದು, ಈ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.
ಬಾಲಿವುಡ್ ಬೆಡಗಿ ಕರೀನಾ ಕಪೂರ್ ಮತ್ತೊಮ್ಮೆ ಗರ್ಭಿಣಿಯಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಲವು ಸುದ್ದಿಗಳು ಹರಿದಾಡುತ್ತಿವೆ. ಇದು ಬಿ-ಟೌನ್ ವಲಯದಲ್ಲಿ ದಿಢೀರ್ ಚರ್ಚೆಗೆ ಗ್ರಾಸವಾಗಿದೆ.ಕರೀನಾ ಕಪೂರ್ ಪ್ರಸ್ತುತ ತಮ್ಮ ಕುಟುಂಬದೊಂದಿಗೆ ಯುರೋಪ್ ಪ್ರವಾಸವನ್ನು ಆನಂದಿಸುತ್ತಿದ್ದಾರೆ. ಈ ಪ್ರವಾಸಕ್ಕೆ ಸಂಬಂಧಿಸಿದ ಫೋಟೋವನ್ನು ನೋಡಿ ಎಲ್ಲರೂ ಗೊಂದಲಕ್ಕೊಳಗಾಗಿದ್ದರು. ಕರೀನಾ ಅವರ ಹೊಟ್ಟೆ ಸ್ವಲ್ಪ ದೊಡ್ಡದಾಗಿದೆ ಕಾಣುತ್ತಿದೆ ಎನ್ನಲಾಗುತ್ತಿತ್ತು.ಕರೀನಾ ಕಪೂರ್ ಮೂರನೇ ಬಾರಿಗೆ ಗರ್ಭಿಣಿ ಎಂಬ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಅವರು ಪ್ರತಿಕ್ರಿಯಿಸಿದ್ದಾರೆ. ತಾನು ಗರ್ಭಿಣಿ ಎಂದು ದೃಢಪಡಿಸಿದ್ದಾರೆ.
ಕರೀನಾ ಕಪೂರ್ 16 ಅಕ್ಟೋಬರ್ 2012 ರಂದು ಸೈಫ್ ಅಲಿ ಖಾನ್ ಅವರನ್ನು ವಿವಾಹವಾದರು. ಇವರಿಬ್ಬರು ಮುಂಬೈನ ಬಾಂದ್ರಾದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದದ್ರು. ಅಂದಿನಿಂದ ಸೆಲೆಬ್ರಿಟಿ ಜೋಡಿ ವೈವಾಹಿಕ ಜೀವನವನ್ನು ಎಂಜಾಯ್ ಮಾಡುತ್ತಿದ್ದಾರೆ.