ಪ್ರಿಯಕರನ ಸಾವಿನಿಂದ ಮನನೊಂದ ಯುವತಿ ಆತ್ಮಹತ್ಯೆ

Today News / ಕನ್ನಡ ಸುದ್ದಿಗಳು

ಕಲಬುರಗಿ: ಪ್ರಿಯಕರನ ಸಾವಿನಿಂದ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕ್ವಾಟರ್ಸ್‍ನಲ್ಲಿ ನಡೆದಿದೆ.

ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಶೃತಿ (18) ಆತ್ಮಹತ್ಯೆಗೆ ಶರಣಾದ ಯುವತಿ. ಒಂದು ತಿಂಗಳ ಹಿಂದೆಯಷ್ಟೇ ಆಕೆಯ ಪ್ರಿಯಕರ ಕಾಲು ಜಾರಿ ಬಾವಿಯಲ್ಲಿ ಬಿದ್ದು ಸಾವನ್ನಪ್ಪಿದ್ದ.

ಪ್ರಿಯತಮನ ಸಾವಿನಿಂದ ಮನನೊಂದು ಕೆಲವು ದಿನಗಳ ಹಿಂದೆ ಆಹಾರವನ್ನು ಶೃತಿ ತ್ಯಜಿಸಿದ್ದಳು ಎಂದು ಆಕೆಯ ಪೋಷಕರು ಹೇಳಿದ್ದಾರೆ.ಈಕೆಯ ಹಳೆ ನೆನಪನ್ನು ಮರೆಸುವ ಸಲುವಾಗಿ ಮನೆಯವರು ಸಂಬಂಧಿಕ ಯುವಕನೊಂದಿಗೆ ಮದುವೆ ಮಾಡಲು ನಿಶ್ಚಯಿಸಿದ್ದರು. ಕೋಪಗೊಂಡ ಯುವತಿ ನಿನ್ನೆ ಸಂಜೆ ಮನೆಯಲ್ಲಿ ಯಾರು ಇಲ್ಲದಿರುವ ಸಂದರ್ಭವನ್ನು ನೋಡಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈ ಕುರಿತು ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸ್ನೇಹಿತರಿಗೆ ಹಾಗು ವಾಟ್ಸಪ್ಪ್ / ಫೇಸ್ಬುಕ್ ಗ್ರೂಪ್ ಗಳಿಗೆ ಶೇರ ಮಾಡಿ...