ನಾವು ಪ್ರತಿನಿತ್ಯ ಹತ್ತು ಹಲವು ಘಟನೆಗಳನ್ನು ನೋಡುತ್ತೇವೆ, ಸುದ್ದಿ ವಾಹಿನಿಗಳಲ್ಲಿ ಒಂದಲ್ಲ ಒಂದು ನೆಗೆಟಿವ್ ವಿಚಾರಗಳು ಪ್ರಸಾರ ಆಗುತ್ತಲೇ ಇವೆ. ಈ ನಡುವೆ ಹಿರಿಯ ನಟಿ ಅದೇ ರೀತಿ ನಟಿ ಮೇಘನಾ ರಾಜ್ ಅವರ ತಾಯಿ ಪ್ರಮೀಳಾ ಜೋಷಾಯಿ ಹೆಣ್ಣು ಮಕ್ಕಳ ಮೇಲಿನ ದೌರ್ಜ-ನ್ಯದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ದೌರ್ಜನ್ಯ ಗಳಲ್ಲಿ ಬೇರೆ ಬೇರೆ ಇದೆ ಆದರೆ ಅದರಲ್ಲಿ ದೊಡ್ಡದಾದ ದೌ-ರ್ಜನ್ಯ ಅಂದರೆ ಅದು ಹೆಣ್ಣು ಮಕ್ಕಳ ಮೇಲೆ ನಡೆಯುವಂತದ್ದು ಎಂದು ಹೇಳಿಕೊಂಡಿದ್ದಾರೆ. ಪ್ರಮೀಳಾ ಜೋಷಾಯ್ ಅವರು ಈ ರೀತಿ ಹೇಳಲು ಕಾರಣ ಆಗಿದ್ದು ಒಂದು ಸಿನಿಮಾ.
ಹೌದು, ‘ಮೂಕಹಕ್ಕಿ’ ಸಿನಿಮಾ ಖ್ಯಾತಿಯ ನಿರ್ದೇಶಕ ನೀನಾಸಂ ಮಂಜು ನಿರ್ದೇಶನದ ಮತ್ತೊಂದು ಚಿತ್ರ ‘ಕನ್ನೇರಿ’ ಸಿನಿಮಾದ ಪ್ರಮೋಷನ್ ಕಾರ್ಯಕ್ರಮ ಸಮಯದಲ್ಲಿ ಪ್ರಮೀಳಾ ಜೋಷಾಯ್ ಅವರು ಈ ರೀತಿ ಹೇಳಿದ್ದಾರೆ. ಯಾಕಂದರೆ ಕನ್ನೇರಿ’ ನೈಜ ಘಟನೆಯಾಧಾರಿತ ಮಹಿಳಾ ಪ್ರಧಾನ ಚಿತ್ರವಾಗಿದೆ. ಕೊಡಗಿನಲ್ಲಿ ಭಾರೀ ಸದ್ದು ಮಾಡಿದ್ದ ದಿಡ್ಡಳ್ಳಿ ಸಂತ್ರಸ್ತರ ಹೋರಾಟ ಹಾಗು ಕ್ಷೀರಸಾಗರ ಅವರ ‘ಜೇನು: ಆಕಾಶದ ಅರಮನೆ’ ಕಾದಂಬರಿಯ ಎಳೆಯನ್ನು ಆಧರಿಸಿ ಸಿನಿಮಾದ ಕಥೆ ಹೆಣೆಯಲಾಗಿದೆ. ಪ್ರಕೃತಿಯ ಮಡಿಲಲ್ಲಿ ಬದುಕು ಕಟ್ಟಿಕೊಂಡಿದ್ದ ಬುಡಕಟ್ಟು ಜನಾಂಗವನ್ನು ಒಕ್ಕಲೆಬ್ಬಿಸಿದ ನಂತರ ಏನಾಯಿತು.
ಅಲ್ಲಿನ ಹೆಣ್ಣು ಮಕ್ಕಳು ಹೇಗೆ ದೌರ್ಜನ್ಯಕ್ಕೆ ಒಳಗಾಗುತ್ತಾರೆ, ಅವರ ಬದುಕು ಯಾವೆಲ್ಲ ತಿರುವು ಪಡೆಯುತ್ತೆ ಎಂಬ ಹೋರಾಟದ ಕಥೆ ಹೊಂದಿರುವ ಈ ಚಿತ್ರಕ್ಕೆ ಅರ್ಚನಾ ಮಧುಸೂಧನ್ ಮುಖ್ಯಭೂಮಿಕೆಯಲ್ಲಿ ಜೀವ ತುಂಬಿದ್ದಾರೆ. ಈ ಸಿನಿಮಾ ಇದೀಗ ರಿಲೀಸ್ ಗೂ ಮುನ್ನವೇ ಕೆಲವೊಂದು ಹಾಡಿನ ಮೂಲಕ ಭಾರೀ ಸದ್ದು ಮಾಡುತ್ತಿದೆ. ಈಗಾಗಲೇ ಈ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದ್ದು ಮಾರ್ಚ್ 4 ರಂದು ಸಿನಿಮಾ ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ಚಿತ್ರ ಕಥೆ ಕೋಟಿಗಾನಹಳ್ಳಿ ರಾಮಯ್ಯ ಅವರ ಕೈ ಚಳಕದಲ್ಲಿ ಮೂಡಿದ್ದರೆ, ಚಿತ್ರಕಥೆ ಹಾಗೂ ನಿರ್ದೇಶನದ ನೊಗವನ್ನು ನೀನಾಸಂ ಮಂಜು ಹೊತ್ತಿದ್ದಾರೆ.
‘ಬುಡ್ಡಿ ದೀಪ’ ಸಿನಿಮಾ ಹೌಸ್ ಬ್ಯಾನರ್ ನಡಿ ನಿರ್ಮಾಣವಾದ ಈ ಸಿನಿಮಾಕ್ಕೆ ಪಿ.ಪಿ ಹೆಬ್ಬಾರ್ ಬಂಡವಾಳ ಹೂಡಿದ್ದಾರೆ. ಇನ್ನುಳಿದಂತೆ ಈ ಚಿತ್ರದಲ್ಲಿ ಅನಿತಾ ಭಟ್, ಅರುಣ್ ಸಾಗರ್, ಎಂ.ಕೆ.ಮಠ, ಕರಿಸುಬ್ಬು ಒಳಗೊಂಡಂತೆ ಹಲವು ಪ್ರತಿಭಾನ್ವಿತ ಕಲಾವಿದರು ಬಣ್ಣ ಹಚ್ಚಿದ್ದು, ಚಿತ್ರದ ನೈಜತೆಗೆ ಜೀವ ತುಂಬಿದ್ದಾರೆ. ಇದಕ್ಕೆ ಗಣೇಶ್ ಹೆಗ್ಡೆ ಕ್ಯಾಮೆರಾ ವರ್ಕ್, ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಸುಜಿತ್ ನಾಯಕ್ ಅವರ ಸಂಕಲನ ಇದೆ. ಒಟ್ಟಿನಲ್ಲಿ ಈ ಸಿನಿಮಾ ನೋಡಿದರೆ ತಪ್ಪು ಮಾಡುವವರ ಮನಸ್ಸು ಪರಿವರ್ತನೆ ಆಗುತ್ತದೆ ಅನ್ನುವುದು ನಟಿ ಪ್ರಮೀಳಾ ಜೋಷಾಯ್ ಅವರ ಮಾತು. ಈ ಮಾಹಿತಿ ಬಗ್ಗೆ ನಿಮ್ಮ ಅನಿಸಿಕೆ ಏನು ಅನ್ನುವುದನ್ನು ನಮಗೆ ತಪ್ಪದೇ ಕಾಮೆಂಟ್ ಮೂಲಕ ತಿಳಿಸಿ.