
ಮುರುಘಾ ಮಠದ ರಾಜಾಂಗಣದಲ್ಲಿದ್ದ ಶಿವಮೂರ್ತಿ ಮುರುಘಾ ಶರಣರ ಫೋಟೊ ಕಳವು ಮಾಡಿದ ಪ್ರಕರಣದಲ್ಲಿ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಅವರನ್ನು ಗ್ರಾಮಾಂತರ ಠಾಣೆಯ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ದಸರಾ ಉತ್ಸವದ ಅಂಗವಾಗಿ ನಡೆದ ಪೀಠಾರೋಹಣದ ಹಿಂದಿನ ದಿನ ಅ.5ರ ಮಧ್ಯರಾತ್ರಿ ವೇಳೆ ರಾಜಾಂಗಣದಲ್ಲಿ ಗೋಡೆಗೆ ಹಾಕಿದ್ದ 47 ಫೋಟೋಗಳು ಕಳ್ಳತನವಾಗಿದ್ದವು. ಧಾರ್ಮಿಕ ಮುಖಂಡರು, ರಾಷ್ಟ್ರಪತಿ, ಪ್ರಧಾನಿ, ಹಾಗೂ ರಾಜ್ಯದ ಸಿಎಂಗಳ ಜೊತೆಗಿನ ಮುರುಘಾಶ್ರೀ ಫೋಟೋಗಳನ್ನು ಕಳ್ಳರು ಕದ್ದೊಯ್ದಿದ್ದರು. ಆ ಬಳಿಕ ವಿಚಾರಣೆ ಆರಂಭಿಸಿದ ಪೊಲೀಸರು ನ.7ರಂದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ವಿಚಾರಣೆ ವೇಳೆ ಬಸವರಾಜನ್ ಫೋಟೋವನ್ನು ಕಳವು ಮಾಡುವಂತೆ ಪ್ರಚೋದನೆ ನೀಡಿದ್ದರು ಎಂಬ ಸತ್ಯ ಒಪ್ಪಿಕೊಂಡಿದ್ದರು.
ಹಾಗಾಗಿ ಪೊಲೀಸರು ಬಸವರಾಜನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ಮೊದಲ ಬಾರಿಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಮುರುಘಾಶ್ರೀ ಕ್ಷಮಿಸಲಾರದ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂತಾ ನಿರೀಕ್ಷೆ ಮಾಡಿರಲಿಲ್ಲ. ಇದನ್ನು ಎಲ್ಲರೂ ಖಂಡಿಸಬೇಕು. ಚಿತ್ರದುರ್ಗ ಮುರುಘಾ ಮಠದ ಶ್ರೀಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಪ್ರತಿಕ್ರಿಯಿಸಿದ್ದಾರೆ.
ಇಂದು ಗದಗ ಜಿಲ್ಲೆ ಶಿರಹಟ್ಟಿಯಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳಲು ಉಡುಪಿಯಿಂದ ಶಿರಹಟ್ಟಿಗೆ ತೆರಳಿದ ಸಂದರ್ಭದಲ್ಲಿ ಉಡುಪಿಯ ಹೆಲಿಪ್ಯಾಡ್ ನಲ್ಲಿ ಬಿಎಸ್ವೈ ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಎಸ್ವೈ ಜತೆ ಸಿಎಂ ಬೊಮ್ಮಾಯಿ ಮತ್ತು ಕಾರಜೋಳ ಸಹ ಶಿರಹಟ್ಟಿಗೆ ಪ್ರಯಾಣ ಮಾಡಿದರು.
Comments are closed.