ಬಿಜೆಪಿ-ಮುಖಂಡ-ಪ್ರವೀಣ್

“ಮುಸ್ಲಿಮರ ಜೊತೆಗೆ ಅವರಿಗೆ ಒಳ್ಳೆಯ ಸಂಬಂಧವಿತ್ತು”: ಪ್ರವೀಣ್ ಪತ್ನಿ.. ! ಶೀಘ್ರವೇ ಆರೋಪಿಗಳ ಬಂಧನ…

Today News / ಕನ್ನಡ ಸುದ್ದಿಗಳು

ಬೆಳ್ಳಾರೆ: ಹತ್ಯೆಯಾದ ಬಿಜೆಪಿ ಮುಖಂಡ ಪ್ರವೀಣ್ ಅವರಿಗೆ ಮುಸ್ಲಿಮರ ಜೊತೆಗೆ ಒಳ್ಳೆಯ ಸಂಬಂಧವಿತ್ತು ಎಂದು ಪ್ರವೀಣ್ ಪತ್ನಿ ಹೇಳಿದ್ದಾರೆ.

ಮಸೂದ್ ಕೊಲೆಗೂ ಪ್ರವೀಣ್ ಗೂ ಸಂಬಂಧ ಇದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರವೀಣ್ ಅವರಿಗೂ ಆ ಕೊಲೆಗೂ ಯಾವುದೇ ಸಂಬಂಧ ಇಲ್ಲ. ಅವರು ಯಾವುದೇ ತಪ್ಪು ಮಾಡಿಲ್ಲ ಎಂದರು.ಮಂಗಳವಾರ ರಾತ್ರಿ ದುಷ್ಕರ್ಮಿಗಳು ಪ್ರವೀಣ್ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದ್ದರು.

ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಪ್ರಕರಣ: ಶೀಘ್ರವೇ ಆರೋಪಿಗಳ ಬಂಧನ- ಸಿಎಂ ಬಸವರಾಜ ಬೊಮ್ಮಾಯಿ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಪೇಟೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಎಂಬುವವರನ್ನ ದುಷ್ಕರ್ಮಿಗಳು ಹತ್ಯೆ ಮಾಡಿದ್ದು, ಈ ಬರ್ಬರ ಹತ್ಯೆಯನ್ನು ಖಂಡಿಸಿ ಪುತ್ತೂರು, ಸುಳ್ಯ, ಕಡಬ ತಾಲೂಕಿನಲ್ಲಿ ಸ್ವಯಂಪ್ರೇರಿತ ಬಂದ್‌ ಗೆ ವಿಎಚ್‌ಪಿ, ಭಜರಂಗದಳ, ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ.ಈ ಕುರಿತು ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ,  ಈ ಕುರಿತು ನಾನು ಗೃಹ ಸಚಿವರ ಜೊತೆಗೂ ಮಾತಾಡಿದ್ದೇನೆ. ಶೀಘ್ರವೇ ಆರೋಪಿಗಳನ್ನ ಬಂಧಿಸುತ್ತೇವೆ.  ಸಂಪೂರ್ಣ ತನಿಖೆ ಮಾಡಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇಂತಹ ಕೃತ್ಯ ಎಸಗುವವರನ್ನ ಮಟ್ಟ ಹಾಕುತ್ತೇವೆ ಎಂದು ಹೇಳಿದ್ದಾರೆ.

ನನ್ನ ಮುಂದಿನ ಜೀವನ ಏನು ಎಂದು ಗೊತ್ತಿಲ್ಲ: ಪ್ರವೀಣ್ ಪತ್ನಿ ನೂತನ ಕಣ್ಣೀರು – Public TV

ನನ್ನ ಮುಂದಿನ ಜೀವನ ಏನು ಎಂದು ಗೊತ್ತಿಲ್ಲ: ಪ್ರವೀಣ್ ಪತ್ನಿ ನೂತನ ಕಣ್ಣೀರು.

ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ‌ ಹಿಂದೆ ಮೇಲ್ನೋಟಕ್ಕೆ 2-3 ಕಾರಣಗಳು ಕಂಡು ಬಂದಿವೆ : ಎಡಿಜಿಪಿ ಅಲೋಕ್ ಕುಮಾರ್

ಪುತ್ತೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆಯ ತನಿಖೆ ಪ್ರಗತಿಯಲ್ಲಿದ್ದು ಹತ್ಯೆಗೆ 2- 3 ಕಾರಣಗಳು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂಬ ಸ್ಪೋಟಕ ಮಾಹಿತಿಯನ್ನು ರಾಜ್ಯದ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ನೀಡಿದ್ದಾರೆ.

ಬೆಳ್ಳಾರೆಯಲ್ಲಿ ಮಾದ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು 15ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಹತ್ಯೆಯ ಬಗ್ಗೆ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಪ್ರಕರಣದ ಕುರಿತಾಗಿ ಮುಖ್ಯಮಂತ್ರಿಗಳು ಗೃಹಸಚಿವರು ನಿನ್ನೆಯಿಂದ ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ. ನಿನ್ನೆ ಮತ್ತು ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ನೇತ್ರತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದರು.

ಮಂಗಳೂರು ಕಮಿಷನರ್ ಉಡುಪಿ ಪೊಲೀಸರ ಸಹಾಯಪಡೆದು ಆರು ತಂಡಗಳನ್ನು ರಚನೆ ಮಾಡಿದ್ದೇವೆ. ಆರೋಪಿಗಳ ಪತ್ತೆಗೆ ಪೊಲೀಸ್ ಅಧಿಕಾರಿಗಳಿಗೆ ಅವಕಾಶ ಕೊಡಬೇಕು ಎಂದು ಅವರು ವಿನಂತಿಸಿದರು.

ಪ್ರವೀಣ್‌ ನೆಟ್ಟಾರ್‌ ಹತ್ಯೆ | ಮೃತದೇಹ ನೋಡಲು ಬಾರದ ಶಾಸಕರು, ಸಂಸದರ ವಿರು‍ದ್ಧ  ಕುಟುಂಬಸ್ಥರ ಆಕ್ರೋಶ | Eedina | ಈದಿನ

ಪೊಲೀಸರು ವಶಕ್ಕೆ ಪಡೆದವರು ಕೃತ್ಯದಲ್ಲಿ ಭಾಗಿಯಾದವರೇ ಅಥಾವ ಪರೋಕ್ಷವಾಗಿ ಸಹಕರಿಸಿದವರೇ ಎಂಬ ಬಗ್ಗೆ ಈಗಲೇ ಹೇಳಲು ಸಾಧ್ಯವಿಲ್ಲ. ಆರೋಪಿಗಳನ್ನು ದಸ್ತಗಿರಿ ಮಾಡಿದ ಮೇಲೆ ಹತ್ಯೆಗೆ ಕಾರಣ ತಿಳಿಸುತ್ತೇವೆ. ವಿಚಾರಣೆ ಹಂತದಲ್ಲಿ ನಾನು ಇಷ್ಟು ಮಾತ್ರ ಹೇಳಬಲ್ಲೆ ಎಂದು ಅಲೋಕ್ ಕುಮಾರ್ ತಿಳಿಸಿದರು.

ಅಂತಿಮ ದರ್ಶನಕ್ಕೆ ಸಂಸದರು ಸಚಿವರುಗಳು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಜ ನರು ಭಾವಾವೇಶದಿಂದ ವಾಹನವನ್ನು ತಳ್ಳಲು ಪ್ರಯತ್ನ ಮಾಡಿದ್ದಾರೆ. ಪರಿಸ್ಥಿತಿ ಹತೋಟಿಗೆ ತರಲು ಲಘುಲಾಠಿ ಪ್ರಹಾರ ಮಾಡಬೇಕಾಯಿತು ಎಂದು ಲಾಠಿ ಚಾರ್ಜ್ ಘಟನೆಯ ಬಗ್ಗೆ ವಿವರಿಸಿದರು.

ಜಿಲ್ಲಾಧಿಕಾರಿಗಳು ಸೆಕ್ಷನ್ 144 ಜಾರಿ ಮಾಡಿದ್ದಾರೆ ಪರಿಸ್ಥಿತಿ ಹತೋಟಿಯಲ್ಲಿದೆ. ಜನರು ಯಾರು ಗುಂಪು ಕಟ್ಟಿ ಓಡಾಡಬಾರದು ಎಂದು ತಿಳಿಸಿದರು.

ನಿಮ್ಮ ಸ್ನೇಹಿತರಿಗೆ ಹಾಗು ವಾಟ್ಸಪ್ಪ್ / ಫೇಸ್ಬುಕ್ ಗ್ರೂಪ್ ಗಳಿಗೆ ಶೇರ ಮಾಡಿ...