ಶಾಸಕಿ ನಯನಾ ಬಿಕಿನಿ ಫೋಟೋಸ್ ವೈರಲ್ ; ಕಿಡಿಗೇಡಿಗಳಿಗೆ ಖಡಕ್ ಉತ್ತರ ಕೊಟ್ಟ ಕೈ ಶಾಸಕಿ

Today News / ಕನ್ನಡ ಸುದ್ದಿಗಳು

ಚಿಕ್ಕಮಗಳೂರಿನ ಮೂಡಿಗೆರೆ ಮೀಸಲು ಕ್ಷೇತ್ರದಲ್ಲಿ ಗೆಲುವು ಸಾಧಿಸಿ ಶಾಸಕಿಯಾಗಿರುವ ನಯನಾ ಮೋಟಮ್ಮ ಅವರ ಖಾಸಗಿ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗಿದ್ದು, ವೈರಲ್ ಮಾಡಿದ ಕಿಡಿಗೇಡಿಗಳಿಗೆ ಮಾತಿನ ಮೂಲಕವೇ ಖಡಕ್ ಸಂದೇಶ ರವಾನಿಸಿದ್ದಾರೆ.

ಸ್ವತಃ ವಿಡಿಯೋವೊಂದನ್ನು ನಯನಾ ಮೋಟಮ್ಮ ಅವರು ಹಂಚಿಕೊಂಡಿದ್ದು, ಈ ವಿಡಿಯೋಗೆ ʼಸೋಲಿನ ಹತಾಶೆ ನಿಮ್ಮನ್ನ ಇನ್ನಷ್ಟು ಕಾಡದಿರಲಿ. ಹೌದು… ರಾಜಕೀಯ, ನಾನು, ನನ್ನತನ, ನನ್ನ ವೈಯುಕ್ತಿಕ ಜೀವನ ಇವೆಲ್ಲದರ ವ್ಯತ್ಯಾಸ ತಿಳಿಯದ ಅವಿವೇಕಿಗಳಿಗೆ ಉತ್ತರವಿದು.ʼ ಎಂದು ಶೀರ್ಷಿಕೆ ಬರೆದುಕೊಂಡಿದ್ದಾರೆ. ನಯನಾ ಅವರ ಈ ನೇರ ನಡೆ ಮತ್ತು ಧೈರ್ಯ ಅವರ ಅಭಿಮಾನಿಗಳಿಗೆ ಇಷ್ಟವಾಗಿದೆ. ನಯನ ಮೋಟಮ್ಮ ಮೊದಲಿನಿಂದಲೂ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ತಮ್ಮ ವಿರುದ್ಧ ಯಾರೇ ನೆಗೆಟಿವ್ ಅಥವಾ ಸುಳ್ಳು ಸುದ್ದಿ ಹಬ್ಬಿಸಿದಲ್ಲಿ ಸ್ವತಃ ತಾವೇ ಅವರಿಗೆ ಉತ್ತರಿಸುತ್ತಾರೆ.

Nayana motamma : ಮೂಡಿಗೆರೆ ಶಾಸಕಿ ನಯನಾ ಮೋಟಮ್ಮರ ಖಾಸಗಿ ಫೋಟೋಸ್, ವಿಡಿಯೋ ವೈರಲ್! ಏನಂದ್ರು ಗೊತ್ತಾ ನೂತನ ಶಾಸಕಿ!

ಸ್ವತಃ ತಾವೇ ತಮ್ಮ ಖಾಸಗಿ ಫೋಟೋಸ್‌ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುವ ಮೂಲಕ ತಮ್ಮ ವೈಯಕ್ತಿಯ ಜೀವನ ಮತ್ತು ರಾಜಕೀಯ ಜೀವನ ವಿಭಿನ್ನವಾಗಿರುತ್ತವೆ. ಈ ವಿಚಾರ ಅವಿವೇಕಿಗಳಿಗೆ ತಿಳಿದಿರಲಿ ಎಂದು ವಿರೋಧಿಗಳಿಗೆ ನೇರವಾಗಿ ಹೇಳಿದ್ದಾರೆ. ಸದ್ಯ ನಯನಾ ಅವರ ಧೈರ್ಯಕ್ಕೆ ಅವರ ಅಭಿಮಾನಿಗಳು ಸೇರಿದಂತೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಯನ ಮೋಟಮ್ಮ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ, ದಲಿತವಾದಿ ಹಾಗೂ ಮಾಜಿ ಸಚಿವೆ ಮೋಟಮ್ಮ ಅವರ ಪುತ್ರಿ.

ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತ ಬಣದಲ್ಲಿ ಗುರುತಿಸಿಕೊಂಡಿದ್ದ ನಯನಾ ಅವರು ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಭಾರಿ ವಿರೋಧದ ನಡುವೆಯೂ ಕಾಂಗ್ರೆಸ್‌ನಿಂದ ಟಿಕೆಟ್ ಪಡೆದು ಗೆದ್ದು ಬಂದಿದ್ದಾರೆ. ಬಿಜೆಪಿಯ ಶಾಸಕರಾಗಿದ್ದ ಎಂಪಿ ಕುಮಾರಸ್ವಾಮಿಗೆ ಟಿಕೆಟ್ ಸಿಗದ ಹಿನ್ನೆಲೆ ಅವರು ಜೆಡಿಎಸ್‌ನಿಂದ ಸ್ಪರ್ಧಿಸಿದ್ದರು. ಬಿಜೆಪಿ ದೀಪಕ್ ದೊಡ್ಡಯ್ಯ ಅವರಿಗೆ ಮಣೆ ಹಾಕಿತ್ತು. ಆದ್ರೆ ನಯನಾ ಮೊಟಮ್ಮ ಗೆಲುವು ಸಾಧಿಸಿ ಶಾಸಕಿಯಾಗಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಶಾಸಕಿ ನಯನಾ ಫೋಟೋಸ್ ವೈರಲ್; ಕಿಡಿಗೇಡಿಗಳಿಗೆ ಖಡಕ್ ಉತ್ತರ ಕೊಟ್ಟ  ಕೈ ಶಾಸಕಿ - News Malnad

ಬಿಜೆಪಿಯ ಶಾಸಕರಾಗಿದ್ದ ಎಂಪಿ ಕುಮಾರಸ್ವಾಮಿಗೆ ಟಿಕೆಟ್ ಸಿಗದ ಹಿನ್ನೆಲೆ ಅವರು ಜೆಡಿಎಸ್‌ನಿಂದ ಸ್ಪರ್ಧಿಸಿದ್ದರು. ಬಿಜೆಪಿ ದೀಪಕ್ ದೊಡ್ಡಯ್ಯ ಅವರಿಗೆ ಮಣೆ ಹಾಕಿತ್ತು. ಆದ್ರೆ ನಯನಾ ಮೊಟಮ್ಮ ಗೆಲುವು ಸಾಧಿಸಿ ಶಾಸಕಿಯಾಗಿದ್ದಾರೆ.

ಕೆಳಗೆ,ನಿಮ್ಮ ಸ್ನೇಹಿತರಿಗೆ ಹಾಗೂ ವಾಟ್ಸಪ್ಪ್ - ಫೇಸ್ಬುಕ್ ಗ್ರೂಪ್ ಗಳಿಗೆ ಶೇರ ಮಾಡಿ...ಧನ್ಯವಾದ.