ಕೇಂದ್ರ ಸರ್ಕಾರ ಪಿಎಫ್‌ಐ ಸಂಘಟನೆಯನ್ನು ಬ್ಯಾನ್ ಮಾಡಿದೆ. ಕೇಂದ್ರ ಸರ್ಕಾರದ ಗೃಹ ಇಲಾಖೆ ಪಿಎಫ್‌ಐ ಸಂಘಟನೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಐದು ವರ್ಷ ಬ್ಯಾನ್ ಮಾಡಿದೆ.
ಕಾನೂನು ಬಾಹಿರ ಸಂಘಟನೆ ಎಂದು PFI(ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳು ಅಥವಾ ರಂಗಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಬ್ಯಾನ್ ಮಾಡಲಾಗಿದೆ ಎಂದು ಸರ್ಕಾರ ಘೋಷಿಸಿದೆ.
ಇತ್ತೀಚೆಗಷ್ಟೇ ಕರ್ನಾಟಕ ಸೇರಿದಂತೆ ದೇಶಾದ್ಯಂತ ಪಿಎಫ್‌ಐ ಕಚೇರಿಗಳ ಮೇಲೆ ದಾಳಿ ಮಾಡಿದ್ದ ಎನ್‌ಐಎ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿತ್ತು. ಅಲ್ಲದೆ, ಸಂಘಟನೆಗೆ ಸೇರಿದ ಹಲವು ಮುಖಂಡರು, ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿತ್ತು. ಈ ಬೆಳವಣಿಗೆಗಳ ಬೆನ್ನಲ್ಲೇ ಪಿಎಫ್‌ಐಗೆ ಮತ್ತೊಂದು ಶಾಕ್ ನೀಡಲಾಗಿದ್ದು, ಐದು ವರ್ಷ ಬ್ಯಾನ್ ಮಾಡಲಾಗಿದೆ.
ಕೇಂದ್ರ ಸರಕಾರ ಪಿಎಫ್‌ಐ ಸಂಘಟನೆಯನ್ನು ಐದು ವರ್ಷಗಳ ಅವಧಿಗೆ ನಿಷೇಧ ಹೇರ ಆದೇಶವನ್ನು ಹೊರಡಿಸಿದೆ. 2007 ರಲ್ಲಿ ರಚನೆಯಾದ ಪಿಎಫ್‌ಐ ಸಂಗಟನೆ ತನ್ನನ್ನು “ಅಲ್ಪಸಂಖ್ಯಾತರು, ದಲಿತರು ಮತ್ತು ಅಂಚಿನಲ್ಲಿರುವ ಸಮುದಾಯಗಳ ಹಕ್ಕುಗಳಿಗಾಗಿ ಹೋರಾಡುವ ಸಂಘಟನೆ” ಎಂದು ಹೇಳಿಕೊಂಡಿತ್ತು. ದಕ್ಷಿಣ ಭಾರತದಲ್ಲಿ ಮೂರು ಮುಸ್ಲಿಂ ಸಂಘಟನೆಗಳು, ಕೇರಳದಲ್ಲಿ ನ್ಯಾಷನಲ್ ಡೆಮಾಕ್ರಟಿಕ್ ಫ್ರಂಟ್, ಕರ್ನಾಟಕ ಫೋರಂ ಫಾರ್ ಡಿಗ್ನಿಟಿ ಮತ್ತು ತಮಿಳುನಾಡಿನ ಮನಿತಾ ನೀತಿ ಪಸರೈಗಳನ್ನು ವಿಲೀನಗೊಳಿಸಿ ಪಿಎಫ್‌ಐ ಸ್ಥಾಪನೆಯಾಗಿತ್ತು.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನೊಂದಿಗೆ ಸಂಬಂಧ ಹೊಂದಿದ್ದರು ಎನ್ನಲಾದ 170 ಕ್ಕೂ ಹೆಚ್ಚು ಜನರನ್ನು ಮಂಗಳವಾರ ಏಳು ರಾಜ್ಯಗಳಾದ್ಯಂತ ದಾಳಿಯಲ್ಲಿ ಬಂಧಿಸಲಾಗಿತ್ತು. ಉತ್ತರ ಪ್ರದೇಶ, ಕರ್ನಾಟಕ, ಗುಜರಾತ್, ದೆಹಲಿ, ಮಹಾರಾಷ್ಟ್ರ, ಅಸ್ಸಾಂ ಮತ್ತು ಮಧ್ಯಪ್ರದೇಶದಾದ್ಯಂತ ದಾಳಿಯನ್ನು ನಡೆಸಲಾಗಿತ್ತು. ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 25 ಜನರನ್ನು ಬಂಧಿಸಿದ್ದರೆ, ಉತ್ತರ ಪ್ರದೇಶದಲ್ಲಿ 57 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿಯಲ್ಲಿ 30, ಮಧ್ಯಪ್ರದೇಶದಲ್ಲಿ 21, ಗುಜರಾತ್‌ನಲ್ಲಿ 10 ಮತ್ತು ಮಹಾರಾಷ್ಟ್ರದ ಪುಣೆಯಲ್ಲಿ 6 ಬಂಧಿತರ ಸಂಖ್ಯೆ. ಅಲ್ಲದೆ, ಕರ್ನಾಟಕದಲ್ಲೂ ಹಲವರನ್ನು ಬಂಧಿಸಲಾಗಿತ್ತು.
Central Government declares PFI (Popular Front of India) and its associates or affiliates or fronts as an unlawful association with immediate effect, for a period of five years. pic.twitter.com/ZVuDcBw8EL
— ANI (@ANI) September 28, 2022