ಮಾರ್ಚ್ 31ರಂದು ಕನಕಪುರ ತಾಲ್ಲೂಕಿನ ಸಾತನೂರು ಪೊಲೀಸ್ ಠಾಣೆ ಬಳಿ ಆರೋಪಿಗಳು ಜಾನುವಾರು ಸಾಗಣೆ ಮಾಡುತ್ತಿದ್ದ ವಾಹನವನ್ನು ತಡೆದಿದ್ದರು. ವಾಹನದಲ್ಲಿ ಇದ್ದವರ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ.
ಏ.1ರಂದು ಬೆಳಿಗ್ಗೆ 8ರ ಸುಮಾರಿಗೆ ಘಟನೆ ನಡೆದ ನೂರು ಮೀಟರ್ ನಷ್ಟು ದೂರದಲ್ಲಿ ಇದ್ರೀಷ್ ಪಾಷ ಅವರ ಶವ ಪತ್ತೆಯಾಗಿತ್ತು. ಪುನೀತ್ ಮತ್ತು ಅವರ ಗೆಳೆಯರು ಹಲ್ಲೆ ನಡೆಸಿ ಇದ್ರೀಷ್ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಯುನುಸ್ ಪಾಷ ಎಂಬುವರು ಪೊಲೀಸರಿಗೆ ದೂರು ನೀಡಿದ್ದರು. ದೂರು ಆಧರಿಸಿ ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 341, 504, 506, 324, 302, 304 ಅಡಿ ಪ್ರಕರಣ ದಾಖಲಿಸಿದ್ದರು.