ಪುನೀತ್ ಮತ್ತು ಮಕ್ಕಳ ಹೆಸರನ್ನು ಎದೆಯ ಮೇಲೆ ಅಚ್ಚೆ ಹಾಕಿಸಿಕೊಂಡ ರಾಘವೇಂದ್ರ ರಾಜಕುಮಾರ್! ತುಂಬಾ ವೈರಲ್ ಆಗುತ್ತಿವೆ ಫೋಟೋಸ್ ನೋಡಿ!!

Entertainment/ಮನರಂಜನೆ

ಕನ್ನಡ ಚಿತ್ರರಂಗದ ಮರೆಯದ ಮಾಣಿಕ್ಯ ಪುನೀತ್ ರಾಜಕುಮಾರ್ ಮರೆಯಾಗಿ ಕೆಲವು ವರ್ಷಗಳೇ ಕಳೆದಿವೆ ಆದರೂ ಅವರ ನೆನಪುಗಳು ಎಂದಿಗೂ ಕನ್ನಡಿಗರ ಮನಸ್ಸಿನಲ್ಲಿ ಮಾಸದೇ ಹಾಗೆ ಉಳಿದುಕೊಂಡಿದೆ. ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಕೊಡುಗೆಗಳು ನೀಡಿ ಸಮಾಜಮುಖಿ ಕೆಲಸಗಳಲ್ಲಿ ತನ್ನನ್ನು ನಿರಂತರವಾಗಿ ತೊಡಿಸಿಕೊಂಡ ಅಪರೂಪದ ಮಾಣಿಕ್ಯ ಪುನೀತ್ ರಾಜಕುಮಾರ್ ಅವರು

ಪುನೀತ್ ರಾಜಕುಮಾರ್ ಅಗಲಿದ ಕೆಲವು ವರ್ಷಗಳಲ್ಲಿ ಸಾಕಷ್ಟು ಬದಲಾವಣೆಗಳು ಸಮಾಜದಲ್ಲಿ ಆಗಿವೆ, ಪುನೀತ್ ರಾಜಕುಮಾರ್ ಅವರ ಅಣ್ಣನಾದ ರಾಘವೇಂದ್ರ ರಾಜಕುಮಾರ್ ಅಪ್ಪು ಎಂದರೆ ಪಂಚಪ್ರಾಣ. ಅಪ್ಪು ಅಗಲಿದ ನಂತರ ರಾಘವೇಂದ್ರ ರಾಜಕುಮಾರ್ ಅವರು ಅಪ್ಪು ಅವರ ನೆನಪಿನಿಂದ ಹೊರಬರಲು ಆಗುತ್ತಿಲ್ಲ.

ಪುನೀತ್ ಹೆಸರಿನಲ್ಲಿ ಕೆಲ ದಿನಗಳ ಹಿಂದೆ ಹೊಸಪೇಟೆಯಲ್ಲಿ ಅಪ್ಪು ಮಾಲೆ ಧರಿಸಿ ಅಭಿಮಾನಿಗಳು ವ್ರತ ಮಾಡಿ ಪೂಜೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಇದೀಗ ರಾಘವೇಂದ್ರ ರಾಜಕುಮಾರ್ ಅವರು ಅಪ್ಪು ನೆನಪಿಗಾಗಿ ತಮ್ಮ ಎದೆಯ ಮೇಲೆ ಪುನೀತ್ ರಾಜಕುಮಾರ್ ಅವರ ಹೆಸರು ಹಾಗೂ ಅವರ ಇಬ್ಬರು ಹೆಣ್ಣು ಮಕ್ಕಳ ಹೆಸರನ್ನು ಅಚ್ಚೆ ಹಾಕಿಸಿಕೊಳ್ಳುವ ಮೂಲಕ ಅವರ ಹೃದಯದಲ್ಲಿರುವ ಪ್ರೀತಿಯನ್ನು ಹೊರ ಜಗತ್ತಿಗೆ ತೋರಿಸಿದ್ದಾರೆ.

PhotoGrid Site 1685332182380

ಈ ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಮೆಚ್ಚುಗೆ ಪಡೆದುಕೊಂಡು ತುಂಬಾ ವೈರಲ್ ಆಗುತ್ತಿವೆ. ಈ ಹಿಂದೆ ನಟ ದರ್ಶನ್ ಕೂಡ ತಮ್ಮ ಅಭಿಮಾನಿಗಳಿಗೋಸ್ಕರ ತಮ್ಮ ಎದೆಯ ಮೇಲೆ ನನ್ನ ಸೆಲೆಬ್ರಿಟಿಸ್ ಎಂದು ಅಚ್ಚೆ ಹಾಕಿಸಿಕೊಂಡಿದ್ದರು. ಇದೀಗ ರಾಘವೇಂದ್ರ ರಾಜಕುಮಾರ್ ಅವರು ಪುನೀತ್ ಮತ್ತು ಅವರ ಮಕ್ಕಳ ಹೆಸರುಗಳನ್ನು ಹಚ್ಚೆ ಹಾಕಿಸಿಕೊಂಡು ತಮ್ಮ ಪ್ರೀತಿ ತೋರಿಸಿದ್ದಾರೆ.

ಕೆಳಗೆ,ನಿಮ್ಮ ಸ್ನೇಹಿತರಿಗೆ ಹಾಗೂ ವಾಟ್ಸಪ್ಪ್ - ಫೇಸ್ಬುಕ್ ಗ್ರೂಪ್ ಗಳಿಗೆ ಶೇರ ಮಾಡಿ...ಧನ್ಯವಾದ.