ನಟ ಡಾಲಿ ಧನಂಜಯ ಹಾಗೂ ರಚಿತಾ ರಾಮ್ ರವರ ನಟನೆಯ ಮಾನ್ಸೂನ್ ರಾಗ ಸಿನಿಮಾದ ಟ್ರೈಲರ್ ರಿಲೀಸ್ ಆಗುತ್ತಿದೆ ಎಂದು ಹೇಳಲು ಈ ಚಿತ್ರತಂಡ ಸಣ್ಣ ಟೀಸರ್ ರಿಲೀಸ್ ಮಾಡಿದ್ದು ಆ ಟೀಸರ್‌ಗೆ ಅದ್ಭುತವಾದ ಪ್ರತಿಕ್ರಿಯೆ ಸಿಕ್ಕಿದ್ದು ಸಿನಿಮಾ ನೋಡಲು ಪ್ರೇರೇಪಿಸಿದೆ ಎನ್ನಬಹುದು.
ಬಹುನಿರೀಕ್ಷಿತ ಮಾನ್ಸೂನ್ ರಾಗ ಸಿನಿಮಾ ಟ್ರೈಲರ್ ರಿಲೀಸ್ ಆಗಿದ್ದು ರಾಜ್ಯಾದ್ಯಂತ ಆಗಸ್ಟ್ 19ಕ್ಕೆ ಸಂಪೂರ್ಣ ಸಿನಿಮಾ ಥಿಯೇಟರ್‌ನಲ್ಲಿ ರಿಲೀಸ್ ಆಗುತ್ತಿದೆ.
ಅಂದಹಾಗೆ ಇದು ಭಾವನಾತ್ಮಕವಾಗಿರುವ ಮ್ಯೂಸಿಕಲ್ ಸಿನಿಮಾವಾಗಿದ್ದು ನಟ ರಾಕ್ಷಸ ಎಂದೇ ಖ್ಯಾತಿ ಪಡೆದಿರುವ ನಟ ಡಾಲಿ ಧನಂಜಯ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಮೊದಲ ಬಾರಿಗೆ ಈ ಸಿನಿಮಾದಲ್ಲಿ ಒಟ್ಟಾಗಿ ನಟಿಸಿರುವುದು ವಿಶೇಷವಾಗಿದೆ. ಇನ್ನು ಪತ್ರಿಕಾಗೋಷ್ಠಿ ಸಂದರ್ಭದಲ್ಲಿ ಒಂದು ಘಟನೆ ನಡೆದಿದ್ದು ಈ ಸಂಧರ್ಭದಲ್ಲಿ ಡಾಲಿ ನೋಡಿ ನಾಚಿ ನೀರಾಗಿದ್ದಾರೆ ರಚಿತಾ ರಾಮ್. ಏನಿದು ಸುದ್ದಿ ತಿಳಿಯೋಣ ಬನ್ನಿ.
ಟ್ರೈಲರ್ ರಿಲೀಸ್ ಬಳಿಕ ಈ ಚಿತ್ರದ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿರುವ ರಚಿತಾ ರಾಮ್ ರವರು ಡಾಲಿ ಧನಂಜಯ ಅವರು ನಿಜಕ್ಕೂ ನಟ ರಾಕ್ಷಸ. ಅವರ ಜೊತೆ ನಟಿಸೋದು ನನಗೂ ಚಾಲೆಂಜಿಂಗ್ ಆಗಿದ್ದು ಈ ಚಿತ್ರದ ಸಂಭಾಷಣೆ ತುಂಬ ಚೆನ್ನಾಗಿದೆ. ಇಡೀ ಸಿನಿಮಾ ತುಂಬ ಚೆನ್ನಾಗಿ ಮೂಡಿಬಂದಿದ್ದು ನಾನು ಈ ಚಿತ್ರದಲ್ಲಿ ಕಾಲ್ ಗರ್ಲ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಆ ರೀತಿಯ ಕಾರ್ಯಕರ್ತೆ ಪಾತ್ರವನ್ನು ತುಂಬ ನೀಟ್ ಆಗಿ ಚೆನ್ನಾಗಿ ತೋರಿಸಿದ್ದಾರೆ.
ಪುಷ್ಪಕ ವಿಮಾನ ಸಿನಿಮಾದಲ್ಲಿ ನಾನು ನಟಿಸಿದ್ದು ಆ ಚಿತ್ರದ ಕೆಲಸ ಹೇಗೆ ಅಂತ ಗೊತ್ತಿದೆ. ಅದೇ ತಂಡ ಈ ಸಿನಿಮಾ ಮಾಡಿದ್ದು ಮತ್ತೆ ಅವರ ಜೊತೆ ಕೆಲಸ ಮಾಡಿದ್ದು ತುಂಬ ಖುಷಿ ಕೊಟ್ಟಿದೆ. ಮಾನ್ಸೂನ್ ಸಮಯದಲ್ಲಿ ನಮ್ಮ ಈ ಸಿನಿಮಾ ಶೂಟಿಂಗ್ ಮಾಡಿದ್ದೆವು ಆದರೆ ಮಾನ್ಸೂನ್ ಸಮಯದಲ್ಲಿ ರಿಲೀಸ್ ಆಗತ್ತೆ ಅಂತ ಗೊತ್ತಿರಲಿಲ್ಲ. ಈ ಸಿನಿಮಾ ಹಾಡುಗಳನ್ನು ಕೇಳಿದರೆ ಮೈ ರೋಮಾಂಚನವಾಗುವುದು. ಇದರಲ್ಲಿ ಪ್ರತಿ ಪಾತ್ರವನ್ನು ಕೂಡ ತುಂಬ ಅದ್ಭುತವಾಗಿ ತೋರಿಸಿದ್ದಾರೆ ಎಂದಿದ್ದಾರೆ.
ತದ ನಂತರ ಮಾತನಾಡಿದ ಡಾಲಿ ಧನಂಜಯ ಅವರು ಸಿನಿಮಾ ತುಂಬ ಚೆನ್ನಾಗಿ ಬಂದಿದೆ. ರಚಿತಾ ರಾಮ್ ಜೊತೆ ಮೊದಲ ಬಾರಿಗೆ ನಟಿಸಿದ್ದು ಸ್ಯಾಂಡಲ್‌ವುಡ್‌ನಲ್ಲಿ ಬ್ಯುಸಿ ಇರುವ ನಟಿ ರಚಿತಾ ಅವರು ನನ್ನ ಜೊತೆ ಅದ್ಭುತವಾಗಿ ಆರಾಮಾಗಿ ನಟಿಸಿದ್ದಾರೆ. ಸುಹಾಸಿನಿ ಯಶಾ ಶಿವಕುಮಾರ್ ಅವರು ಕೂಡ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾವನ್ನು ದಯವಿಟ್ಟು ನೋಡಿ.
ಇಲ್ಲಿ ಮುಜುಗರ ಆಗುವಂತಹ ದೃಶ್ಯ ಇಲ್ಲ. ಇಡೀ ಕುಟುಂಬ ಕೂತು ಈ ಸಿನಿಮಾ ನೋಡಬಹುದು. ಇಡೀ ರಾತ್ರಿಯೆಲ್ಲ ಮಳೆಯಲ್ಲಿ ಸಿನಿಮಾ ಶೂಟಿಂಗ್ ಮಾಡಿದ್ದೇವೆ. ರಚಿತಾ ರಾಮ್ ಕಣ್ಣುಗಳಲ್ಲಿ ವಿಷಯ ಇದೆ ಅಂತ ನಾವು ಮಾತನಾಡಿಕೊಳ್ಳುತ್ತಿರುತ್ತೇವೆ. ಆ ಬಗ್ಗೆಯೂ ಸಿನಿಮಾದಲ್ಲಿದೆ ಎಂದಿದ್ದಾರೆ. ಇನ್ನು ಹೀಗೆ ಮಾತು ಮುಗುಸಿ ಮೇಲೆದ್ದ ಕೂಡಲೇ ನಟಿಸಿದ್ದು ಡಾಲಿಯ ಪಂಚೆ ಬಿಚ್ಚಿಕೊಂಡಿದ್ದು ಈ ವೇಳೆ ರಚಿತಾ ನಾಚಿ ನಾರಾಗಿ ಹೇಳಿದ್ದೇನು ಗೊತ್ತಾ? ವಿಡಿಯೋ ನೋಡಿ.