ಫ್ರೀ ಬಸ್ ಕಂಡಕ್ಟರ್ ನ ಮುಸ್ಲಿಂ ಟೋಪಿ ತೆಗೆಸಿದ ಮಹಿಳೆ,ಇದು ಸರೀನಾ ತಪ್ಪಾ ನಿಮ್ಮ ಅನಿಸಿಕೆಯನ್ನು ತಿಳಿಸಿ

Entertainment/ಮನರಂಜನೆ

ಬಿಎಂಟಿಸಿ ಬಸ್ಸಿನಲ್ಲಿ ಸಂಚರಿಸುವ ವೇಳೆ ಮಹಿಳೆಯೊಬ್ಬರು ಕರ್ತವ್ಯದ ವೇಳೆ ಕಂಡಕ್ಟರ್​ ಟೋಪಿ ಧರಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಅದನ್ನು ತೆಗೆಸಿರುವ ಘಟನೆ ನಡೆದಿದೆ.ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್​ ಆಗಿದ್ದು, ಮಹಿಳೆ ಹಿರಿಯ ಅಧಿಕಾರಿಗಳಿಗೆ ದೂರು ನೀಡುವುದಾಗಿ ಕಂಡಕ್ಟರ್​ಗೆ ಹೇಳುತ್ತಿರುವುದು ಕಂಡು ಬರುತ್ತದೆ. ಬಿಎಂಟಿಸಿ ಅಧಿಕಾರಿಗಳು ಹೇಳುವ ಪ್ರಕಾರ ಸುಮಾರು 10-12 ದಿನಗಳ ಹಿಂದೆ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.

ವೈರಲ್​ ಆಗಿರುವ ವಿಡಿಯೋದಲ್ಲಿ ಮಹಿಳೆಯೊಬ್ಬರು ನಿರ್ವಾಹಕನಿಗೆ ಕರ್ತವ್ಯದ ವೇಳೆ ಟೋಪಿ ಧರಿಸಲು ನಿಮಗೆ ಅನುಮತಿ ಇದೆಯಾ ಎಂದು ಮೊದಲಿಗೆ ಕೇಳಿದ್ದಾರೆ. ಅದಕ್ಕೆ ಉತ್ತರಿಸಿದ ಕಂಡಕ್ಟರ್​ ಧರಿಸಬಹುದು ಧರಿಸದೆ ಇರಬಹುದು ಎಂದು ಹೇಳಿದ್ದಾರೆ

ನೀವು ಸರ್ಕಾರಿ ಅಧಿಕಾರಿಯಾಗಿದ್ದು, ಧರ್ಮವನ್ನು ಮನೆಯಲ್ಲಿ ಪಾಲಿಸಬೇಕು ಸಾರ್ವಜನಿಕ ಸ್ಥಳಗಳಲ್ಲಿ ಅಲ್ಲ ಎಂದು ಹೇಳುತ್ತಾರೆ. ಅದಕ್ಕೆ ಪ್ರತಿಯಾಗಿ ನಾನು ಹಲವು ವರ್ಷಗಳಿಂದ ಧರಿಸುತ್ತಿದ್ದೇನೆ ಎಂದಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಮಹಿಳೆ ಈ ಬಗ್ಗೆ ಹಿರಿಯ ಅಧಿಕಾರಿಗಳಿಗೆ ದೂರು ನೀಡುವುದಾಗಿ ಹೇಳುತ್ತಾರೆ.

ಕೆಳಗೆ,ನಿಮ್ಮ ಸ್ನೇಹಿತರಿಗೆ ಹಾಗೂ ವಾಟ್ಸಪ್ಪ್ - ಫೇಸ್ಬುಕ್ ಗ್ರೂಪ್ ಗಳಿಗೆ ಶೇರ ಮಾಡಿ...ಧನ್ಯವಾದ.