soujanya-case

ಸೌಜನ್ಯ ಕೇಸ್ ನಲ್ಲಿ ಧರ್ಮಸ್ಥಳದ ಹೆಸರು ಯಾಕೆ ಕೇಳಿ ಬರುತ್ತಿದೆ, ಅನ್ಯಾಯ ಮಾಡಿದ್ದು ಯಾರು ಗೊತ್ತಾ

Entertainment/ಮನರಂಜನೆ

11 ವರ್ಷದ ಹಿಂದೆ ನಡೆದ ಉಜಿರೆ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ವಿಶೇಷ ನ್ಯಾಯಾಲಯ ಆರೋಪಿ ಸಂತೋಷ್‌ ರಾವ್‌ನನ್ನು ದೋಷಮುಕ್ತ ಎಂದು ತೀರ್ಪು ನೀಡಿದೆ.

ಬೆಂಗಳೂರು ಸಿಬಿಐ ಕೋರ್ಟ್‌ ಉಜಿರೆಯ ವಿದ್ಯಾರ್ಥಿನಿ ಸೌಜನ್ಯ ಕೊಲೆ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದೆ. ಆರೋಪಿ ಸಂತೋಷ್‌ ರಾವ್‌ ನನ್ನು ಖುಲಾಸೆ ಮಾಡಿದೆ. ಆರೋಪಿ ವಿರುದ್ಧ ಸಲ್ಲಿಕೆ ಮಾಡಲಾಗಿರುವ ಸಾಕ್ಷ್ಯಾಧಾರಗಳಲ್ಲಿ ಕೊರತೆ ಹಿನ್ನೆಲೆ ದೋಷಮುಕ್ತ ಮಾಡಿರುವುದಾಗಿ ನ್ಯಾಯಮೂರ್ತಿ ಸಿ.ಬಿ ಸಂತೋಷ್‌ ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ ಏನು?

ಮೃತ ಸೌಜನ್ಯ ಧರ್ಮಸ್ಥಳದ ನಿವಾಸಿ ಚಂದಪ್ಪ ಗೌಡ ಹಾಗೂ ಕುಸುಮಾವತಿ ದಂಪತಿ ಪುತ್ರಿ. ಈಕೆಯು ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. 2012ರ ಅಕ್ಟೋಬರ್ 9ರಂದು ಸಂಜೆ ಕಾಲೇಜಿನಿಂದ ಮನೆಗೆ ಬರುತ್ತಿದ್ದಾಗ ಈ ಘಟನೆ ನಡೆದಿತ್ತು. ಮನೆಗೆ ಹೋಗುವಾಗ ನಾಪತ್ತೆಯಾಗಿದ್ದ ಸೌಜನ್ಯ, ಮರು ದಿನ ಧರ್ಮಸ್ಥಳದ ಮಣ್ಣಸಂಕ ಬಳಿ ಶವ ಪತ್ತೆಯಾಗಿತ್ತು. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ದೋಷಮುಕ್ತನಾಗಿರುವ ಸಂತೋಷ್ ರಾವ್ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ನಿವಾಸಿ. ಸೌಜನ್ಯ ಸಾವಿನ ಬಳಿಕ ಸ್ಥಳೀಯರು ಈತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಈ ಪ್ರಕರಣವನ್ನು ಸಿಐಡಿಗೆ ನೀಡಲಾಗಿತ್ತು. ಬಳಿಕ, ಸಿಬಿಐಗೆ ಕೊಡಲಾಗಿತ್ತು.

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಸೌಜನ್ಯಾ 2012ರ ಅ.9 ರಂದು ಕಾಣೆಯಾಗಿದ್ದಳು. ಆಕೆಯ ತಂದೆ ಚಂದ್ರಪ್ಪಗೌಡ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಅ.10 ರಂದು ಸೌಜನ್ಯಾ ಶವ ಪತ್ತೆಯಾಗಿತ್ತು. ಆಕೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು.

ಕೆಳಗೆ,ನಿಮ್ಮ ಸ್ನೇಹಿತರಿಗೆ ಹಾಗೂ ವಾಟ್ಸಪ್ಪ್ - ಫೇಸ್ಬುಕ್ ಗ್ರೂಪ್ ಗಳಿಗೆ ಶೇರ ಮಾಡಿ...ಧನ್ಯವಾದ.