ರಾಜಕೀಯಕ್ಕೆ ಅದ್ದೂರಿಯಾಗಿ ಕಿಚ್ಚ ಸುದೀಪ್ ಎಂಟ್ರಿ ಕೊಡಲಿದ್ದಾರೆ! ಯಾವ ಪಕ್ಷಕ್ಕೆ ಸೇರಲಿದ್ದಾರೆ ಗೊತ್ತಾ?…

ಸಾಮಾನ್ಯವಾಗಿ ತಮ್ಮ ಪಕ್ಷವನ್ನು ಅಧಿಕಾರಕ್ಕೆ ತರಲು ಹಾಗೂ ಎಲೆಕ್ಷನ್ ನಲ್ಲಿ ಗೆಲ್ಲಲು ರಾಜಕೀಯದವರು ಸಿನಿಮಾ ರಂಗದ ಕೆಲವು ಸ್ಟಾರ್ ನಟರನ್ನು ತಮ್ಮ ಪಕ್ಷಕ್ಕೆ ಸೇರುವಂತೆ ಸಾಕಷ್ಟು ಬಾರಿ ವಿನಂತಿಸಿಕೊಳ್ಳುವುದನ್ನು ನಾವು ನೋಡಿದ್ದೇವೆ. ಇನ್ನು ಅದರಂತೆ ಕೆಲವು ಸ್ಟಾರ್ ನಟ ನಟಿಯರು ರಾಜಕೀಯಕ್ಕೆ ಸಹ ಎಂಟ್ರಿ ಕೊಟ್ಟಿದ್ದಾರೆ. ಇನ್ನು ಕೆಲವು ಸ್ಟಾರ್ ನಟ ನಟಿಯರು ತಮಗೆ ರಾಜಕೀಯದ ಮೇಲೆ ಆಸಕ್ತಿ ಇಲ್ಲ ಎಂದು ನೇರವಾಗಿ ಹೇಳಿದ್ದು ಉಂಟು.

ಇನ್ನು ಇದೀಗ ಎಲೆಕ್ಷನ್ ಗೆ 4 5 ತಿಂಗಳು ಬಾಕಿ ಇದ್ದು ಈಗಲೇ ರಾಜಕೀಯ ಪಕ್ಷಗಳು ತಮಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಇನ್ನು ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕೆಂದು ಆ ಪಕ್ಷದ ಮುಖಂಡರು ನಿರ್ಧರಿಸಿದ್ದಾರೆ. ಇನ್ನು ಇದಕ್ಕಾಗಿ ಸಾಕಷ್ಟು ತಯಾರಿಗಳನ್ನು ಮಾಡಿಕೊಳ್ಳುತ್ತಿರುವ ಅವರು, ಕನ್ನಡದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ಅವರ ಪಕ್ಷಕ್ಕೆ ಕರೆತರುವ ಪ್ರಯತ್ನ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.

ಹೌದು ಈಗಾಗಲೇ ಸ್ಯಾಂಡಲ್ ವುಡ್ ಪದ್ಮಾವತಿ ನಟಿ ರಮ್ಯಾ ಅವರು ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದಾರೆ. ಇನ್ನು ಇದೀಗ ನಟ ಕಿಚ್ಚ ಸುದೀಪ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಳ್ಳುವಂತೆ ಕಾಂಗ್ರೆಸ್ ಪಕ್ಷದ ಮುಖಂಡರು ವಿನಂತಿ ಮಾಡಿಕೊಂಡಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಇನ್ನು ಇದಕ್ಕೆ ಕಿಚ್ಚ ಸುದೀಪ್ ಅವರು ಏನೆಂದು ಉತ್ತರಿಸಿದ್ದಾರೆ ಎಂದು ಇನ್ನೂ ತಿಳಿದುಬಂದಿಲ್ಲ.

ಈ ಹಿಂದೆ ಕೂಡ ಕಿಚ್ಚ ಸುದೀಪ್ ಅವರನ್ನು ಸಾಕಷ್ಟು ರಾಜಕೀಯ ಪಕ್ಷಗಳು ತಮ್ಮ ಪಕ್ಷಕ್ಕೆ ಸೇರುವಂತೆ ಆಹ್ವಾನಿಸಿದ್ದರು. ನಟ ಕಿಚ್ಚ ಸುದೀಪ್ ಅವರು ತಮಗೆ ರಾಜಕೀಯದ ಮೇಲೆ ಯಾವುದೇ ಆಸಕ್ತಿ ಇಲ್ಲ ಎಂದು ನೇರವಾಗಿ ಉತ್ತರಿಸಿದ್ದರು. ಇನ್ನು ಇದೀಗ ಕಿಚ್ಚ ಸುದೀಪ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ. ಇನ್ನು ಈ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ.

You might also like

Comments are closed.