ಕಿಚ್ಚ ಸುದೀಪ್ ಪತ್ನಿಗೆ ಖಾ-ಸಗಿ ವಿಡಿಯೋ ಕಳುಹಿಸುವುದಾಗಿ ಎಚ್ಚರಿಕೆ ಕೊಟ್ಟಿದ್ದು ಯಾರು ಗೊತ್ತಾ

ನಟ ಸುದೀಪ್ ರಾಜಕೀಯ ಸೇರ್ಪಡೆ ಬಗ್ಗೆ ಸಾಕಷ್ಟು ವಿಚಾರಗಳು ಹರಡುತ್ತಿದೆ. ಸುದೀಪ್ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಕೂಡ ಹರಡಿತ್ತು. ಬಿಜೆಪಿ ಮುಖಂಡರು ನಟ ಸುದೀಪ್ ಅವರ ಮನೆ ಮುಂದೆ ಹೋಗಿ ಅವರಿಗೆ ಪಕ್ಷ ಸೇರ್ಪಡೆ ಬಗ್ಗೆ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ನಟ ಕಿಚ್ಚ ಸುದೀಪ್ ಅವರು ಸ್ಪಷ್ಟನೆ ನೀಡಿದ್ದಾರೆ. ನಾನು ಈ ಬಾರಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ಬದಲಾಗಿ 2028 ರಲ್ಲಿ ಸ್ಪರ್ಧಿಸುತ್ತೇನೆ ಎಂದಿದ್ದಾರೆ. ಇದೀಗ ನಟ ಕಿಚ್ಚ ಸುದೀಪ್ ಬಿಜೆಪಿ ಪ್ರಚಾರ ಮಾಡುತ್ತೇನೆ ಎಂದಿದ್ದಾರೆ.

ಬಿಜೆಪಿ ಪ್ರಚಾರಕ್ಕೆ ನಟ ಸುದೀಪ್ ಮುಂದಾಗಿದ್ದಾರೆ ಎನ್ನುವ ಸುದ್ದಿ ಹರಡಿದೆ. ಇದರ ಬಗ್ಗೆ ಸಹ ನಟ ಸುದೀಪ್ ಅವರು ಮಾತನಾಡಿದ್ದಾರೆ. ನನ್ನ ನಿಲುವಿನಲ್ಲಿ ರಾಜಕೀಯ ಅಂತ ಬರುವುದಿಲ್ಲ. ನನ್ನ ಕಷ್ಟದ ಸಮಯದಲ್ಲಿ ಕೆಲವೇ ಕೆಲವು ವ್ಯಕ್ತಿಗಳು ನಿಂತಿದ್ದು, ಅದರಲ್ಲಿ ಮುಖ್ಯವಾಗಿ ನಿಂತಿದ್ದು ನನ್ನ ಮಾಮ ಬಸವರಾಜ ಬೊಮ್ಮಾಯಿ. ನಾನು ಈಗ ಅವರ ಜೊತೆ ನಿಂತುಕೊಳ್ಳುತ್ತೇನೆ ಅಂತ ಹೇಳಲು ಇಲ್ಲಿಗೆ ಬಂದೆ ಎನ್ನುವ ಮೂಲಕ ಬಿಜೆಪಿ ಪರ ಪ್ರಚಾರ ಮಾಡುವುದಾಗಿ ನಟ ಸುದೀಪ್ ಹೇಳಿದ್ದಾರೆ.

ನನ್ನ ಜೀವನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಒಳ್ಳೆಯ ಸ್ಥಾನ ನೀಡಿದ್ದೇನೆ. ಬಸವರಾಜ ಬೊಮ್ಮಾಯಿ ಎಲ್ಲಿ ಹೇಳುತ್ತಾರೆ ನಾನು ಅಲ್ಲಿ ಕೆಲಸ ಮಾಡುವುದಕ್ಕೆ ರೆಡಿ ಇದ್ದೇನೆ ಎಂದು ನಟ ಸುದೀಪ್ ಹೇಳಿದ್ದಾರೆ. ಬೇರೆ ಪಕ್ಷದ ನಾಯಕರು ಯಾರಾದರೂ ಹಿಂದೆ ನನ್ನ ಕಷ್ಟಕ್ಕೆ ಆಗಿದ್ದರೆ, ಖಂಡಿತವಾಗಿಯೂ ಅವರ ಪರವಾಗಿ ನಾನು ಪ್ರಚಾರ ಮಾಡುತ್ತೇನೆ ಎಂದು ಸುದೀಪ್ ಹೇಳಿದ್ದಾರೆ. ಆದರೆ ಅವರು ಈ ಹೇಳಿಕೆಗಳನ್ನು ನೀಡಿದ ಬೆನ್ನಲ್ಲೇ ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್​ ಅವರಿಗೆ ಬೆದರಿಕೆ ಪತ್ರ ಬಂದಿದೆ.

ಬಹುಭಾಷಾ ನಟ, ಅಭಿನಯ ಚಕ್ರವರ್ತಿಗೆ ಬೆದರಿಕೆ ಒಡ್ಡಿ ಪತ್ರವನ್ನು ಕಳುಹಿಸಲಾಗಿದೆ. ಇದು ಕಿಚ್ಚನ ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಸಿದೆ. ಹೌದು. ಅವರ ಖಾ-ಸಗಿ ಚಿತ್ರಗಳನ್ನು ಅವರ ಹೆಂಡತಿ ಪ್ರಿಯಾ ಅವರಿಗೆ ಕಳಿಸುತ್ತೇವೆ ಎಂದು ಬೆದರಿಕೆ ಒಡ್ಡಿದ್ದಾರೆ ಎನ್ನಲಾಗ್ತಿದೆ. ಈ ಕಾರಣದಿಂದ ಕಿಚ್ಚ ಸುದೀಪ್ ಮ್ಯಾನೇಜರ್ ಜಾಕ್ ಮಂಜು ಅವರು ಠಾಣೆಗೆ ಬಂದು ದೂರು ನೀಡಿದ್ದಾರೆ. ಜಾಕ್ ಮಂಜು ದೂರಿನನ್ವಯ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

You might also like

Comments are closed.