ಕನ್ನಡ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟಿಯಾಗಿ ಕನ್ನಡ ಚಿತ್ರರಂಗವನ್ನು ಆಳಿದವರಲ್ಲಿ ಸುಧಾರಾಣಿ ಕೂಡ ಒಬ್ಬರು. ಸುಧಾರಾಣೆ ಅವರು ಜನಿಸಿದ್ದು 14 ಆಗಸ್ಟ್ 1970 ರಲ್ಲಿ. ತಂದೆ ಗೋಪಾಲಕೃಷ್ಣ ತಾಯಿ ನಾಗಲಕ್ಷ್ಮಿ.ತಮ್ಮ ಚಿಕ್ಕ ವಯಸ್ಸಿನಲ್ಲಿಯೇ ಸಿನೆಮಾರಂಗವನ್ನು ಪ್ರವೇಶ ಮಾಡಿ ಚಿತ್ರರಂಗದಲ್ಲಿ ಸಕ್ರಿಯರಾಗಿ ಕಾರ್ಯನಿವಹಿಸಿದ್ದಾರೆ. ಇತ್ತೀಚಿಗೆ ನಟಿ ಸುಧಾರಾಣಿ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿದ್ದಾರೆ. ಆಗಾಗ ಫೋಟೋ ಹಾಗೂ ವಿಡಿಯೋಗಳನ್ನು ಶೇರ್ ಮಾಡುತ್ತಲೇ ಇರುತ್ತಾರೆ.
ಅವರು ಕಿಲಾಡಿ ಕಿಟ್ಟು, ಕುಳ್ಳ ಕುಳ್ಳಿ, ಅನುಪಮ ಸೇರಿದಂತೆ ಇನ್ನು ಕೆಲ ಸಿನಿಮಾಗಳಲ್ಲಿ ಬಾಲ ನಟಿಯಾಗಿ ನಟಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.1986 ರಲ್ಲಿ ತೆರೆಕಂಡ ಶಿವರಾಜ್ ಕುಮಾರ್ ಅವರ ಮುಖ್ಯ ಭೂಮಿಕೆಯ “ಆನಂದ” ಚಿತ್ರದ ಮೂಲಕ ನಾಯಕಿಯಾಗಿ ಬೆಳ್ಳಿತೆರೆ ಮೇಲೆ ಕಾಣಿಸಿಕೊಂಡರು. ನಂತರ ಇವರು “ಮನ ಮೆಚ್ಚಿದ ಹುಡುಗಿ, ಆಸೆಗೊಬ್ಬ ಮೀಸೆಗೊಬ್ಬ, ಅಣ್ಣ ತಂಗಿ, ಮಿಡಿದ ಶೃತಿ” ಸೇರಿದಂತೆ ಇನ್ನು ಹಲವು ಕನ್ನಡ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇವರು ಕೇವಲ ಕನ್ನಡ ಸಿನಿಮಾಗಳಲ್ಲಿ ಅಷ್ಟೇ ಅಲ್ಲದೆ ಕೆಲ ತಮಿಳು ಸಿನಿಮಾಗಳಲ್ಲಿ ನಟಿಸಿ ತಮಿಳು ಚಿತ್ರರಂಗದಲ್ಲಿಯೂ ಗುರುತಿಸಿಕೊಂಡಿದ್ದಾರೆ.
ಒಂದು ಕಾಲದಲ್ಲಿ ಸ್ಯಾಂಡಲ್ವುಡ್ ನ ಎವರ್ ಗ್ರೀನ್ ನಟಿ ಆಗಿ ಮಿಂಚಿದ್ದಾರೆ ಸುಧಾರಣಿ. ಇನ್ನು ಸುಧಾರಣಿ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ನೀಡುತ್ತಿದ್ದಾರೆ ಮತ್ತೆ ಕಿರುತೆರೆಗೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಹೊಸ ಧಾರಾವಾಹಿ ಶ್ರೀರಸ್ತು ಶುಭಮಸ್ತು ಧಾರಾವಾಹಿಯ ಮೂಲಕ ಸುಧಾರಣೆಯಾವರು ಈ ಧಾರಾವಾಹಿ ನಲ್ಲಿ ಮುಖ್ಯ ಪಾತ್ರ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮೊದಲು ಜೀ ಕನ್ನಡದ ಜೊತೆ ಜೊತೆಯಲಿ ಧಾರಾವಾಹಿಯ ಕೆಲವು ಎಪಿಸೋಡ್ ಗಳಲ್ಲಿ ಕಾಣಿಸಿಕೊಂಡಿದ್ದರು.
ಮತ್ತದೇ ವಾಹಿನಿಯಲ್ಲಿ ಮತ್ತೊಂದು ಸೀರಿಯಲ್ ಮೂಲಕ ಪ್ರಮುಖ ಪಾತ್ರದಲ್ಲಿ ಮಿಂಚಾಲಿದ್ದಾರೆ ಸುಧಾರಣಿ. ಇನ್ನೇನು ಸದ್ಯದಲ್ಲೇ ಈ ಹೊಸ ಧಾರಾವಾಹಿ ಶುರುವಾಗಲಿದೆ. ಚಂದನವನದ ಹಿರಿಯ ನಟಿ ಸುಧಾರಾಣಿ ಅವರು ಅಂದು ಹೀಗೆ ತಮ್ಮ ಅಭಿನಯದ ಚರ್ಮ್ ಹೊಂದಿದ್ದರೋ ಆದೆ ಶೈಲಿಯನ್ನು ಇಂದು ಕೂಡ ಹೊಂದಿದ್ದಾರೆ. ಇನ್ನು ಅವರ ಸುಂದರ ಕುಟುಂಬದ ಜೊತೆ ಅನ್ಯೋನ್ಯವಾಗಿ ಬಾಳುತ್ತಿದ್ದಾರೆ.
ತನ್ನ ಪ್ರೀತಿಯ ಕುಟುಂಬಕ್ಕಾಗಿ ಸುಂದರವಾದ ಮನೆಯನ್ನು ಕಟ್ಟಿಸಿದ್ದಾರೆ. ಸುಧಾರಣಿ ಅವರು ಹಲವಾರು ಸಿನೆಮಾಗಳಲ್ಲಿ ಅಭಿನಯಿಸಿರುವ ಈ ನಟಿ ನಟಿಸಲು ಒಳ್ಳೆಯ ಕಥೆಗಳು ಮತ್ತು ಪಾತ್ರಗಳು ಸಿಕ್ಕರೆ ಮಾತ್ರ ಸಿನೆಮಾದಲ್ಲಿ ಅಭಿನಯಿಸಲು ಒಪ್ಪಿಗೆ ನೀಡುತ್ತಿದ್ದರು.ಇನ್ನು ನಟನೆಯಲ್ಲಿ ಎಷ್ಟೇ ಬ್ಯುಸಿಯಾಗಿದ್ದರು ತನ್ನ ಕುಟುಂಬಕ್ಕೆ ತಮ್ಮ ಸಮಯವನ್ನ ತಪ್ಪದೇ ಮೀಸಲಿಡುತ್ತಾರೆ. ಇದು ಒಬ್ಬ ನಟಿಯ ಲಕ್ಷಣ. ಸದಾ ಹೀಗೆ ಚಿತ್ರರಂಗದಲ್ಲಿ ಬ್ಯುಸಿಯಾಗಿರಲಿ ಇನ್ನು ಒಳ್ಳೇ ಒಳ್ಳೇ ಚಿತ್ರಗಳನ್ನು ಕನ್ನಡಕ್ಕೆ ಕೊಡುಗೆಯಾಗಿ ನೀಡಲಿ. ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯವನ್ನು ತಪ್ಪದೇ ಕಾಮೆಂಟ್ ಮಾಡಿ ತಿಳಿಸಿ.