ಕನ್ನಡ ಚಿತ್ರರಂಗದ ಅದ್ಭುತ ನಟ ಯಶ್ ಅವರು ಇದೀಗ ಕೇವಲ ಕನ್ನಡ ಸಿನಿಮಾರಂಗಕ್ಕೆ ಮಾತ್ರವಲ್ಲದೆ ಇಡೀ ಭಾರತ ಚಿತ್ರರಂಗದಲ್ಲಿ ದೊಡ್ಡ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ನಟ ಯಶ್ ಅವರ ಕೆಜಿಎಫ್, ಕೆಜಿಎಫ್ 2 ಸಿನಿಮಾಗಳ ನಂತರ ಅವರ ಬೇಡಿಕೆ ವಿದೇಶದವರೆಗೂ ತಲುಪಿದೆ ಎಂದರೆ ತಪ್ಪಾಗುವುದಿಲ್ಲ. ಯಶ್ ಅವರ ಕುರಿತು ಒಂದೆಲ್ಲಾ ಒಂದು ಸುದ್ದಿ ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಲೆ ಇರುತ್ತದೆ.
ಇತೀಚೆಗೆ ನಟ ಯಶ್ ಅವರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಥೈಲ್ಯಾಂಡ್ ಗೆ ಹೋಗಿದ್ದರು. ಇನ್ನು ಅಲ್ಲಿನ ಕೆಲವು ಫೋಟೋ ಮತ್ತು ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇನ್ನು ನಟ ಯಶ್ ಅವರ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಸೇರಿದಂತೆ ಚಿತ್ರರಂಗದ ಅನೇಕ ಕಲಾವಿದರು ಯಶ್ ಅವರಿಗೆ ಶುಭ ಕೋರಿದ್ದರು.
ಇನ್ನು ಯಶ್ ಅವರ ಕೆಜಿಎಫ್ ಸಿನಿಮಾ ಬ್ಲಾಕ್ ಬಾಸ್ಟರ್ ಹಿಟ್ ಆದ ನಂತರ ಅವರ ಮುಂದಿನ ಸಿನಿಮಾ ಯಾವುದು ಎನ್ನುವುದರ ಬಗ್ಗೆ ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳು ನಡೆಯುತ್ತಲೇ ಇರುತ್ತದೆ. ಇನ್ನು ಯಶ್ ಅವರ ಮುಂದಿನ ಸಿನಿಮಾದ ಅಪ್ಡೇಟ್ ಗಾಗಿ ಅವರ ಅಭಿಮಾನಿಗಳು ಬಹಳ ಕಾತುರದಿಂದ ಕಾದು ಕುಳಿತಿದ್ದಾರೆ.
ಇನ್ನು ನಟ ಯಶ್ ಹಾಗೂ ನಟಿ ರಾಧಿಕಾ ಯಶ್ ಇಬ್ಬರೂ ಸಹ ಒಟ್ಟಾಗಿ ಸಿನಿಮಾ ಮಾಡಿಲಿದ್ದಾರೆ ಎನ್ನುವ ಮಾತುಗಳು ಸಹ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಕೇಳಿ ಬಂದಿತ್ತು. ಇನ್ನು ಇವೆಲ್ಲದರ ನಡುವೆ ನಟಿ ರಾಧಿಕಾ ಪಂಡಿತ್ ಹಾಗೂ ಯಶ್ ಇದೀಗ ತಮ್ಮ ಮೂರನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನುವ ಮಾತುಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸುದ್ದಿಯಾಗಿತ್ತು.
ನಟಿ ರಾಧಿಕಾ ಪಂಡಿತ್ ಹಾಗೂ ನಟ ಯಶ್ ಅವರು ತಮ್ಮ ಮೂರನೇ ಮಗುವನ್ನು ಬರ ಮಾಡಿಕೊಳ್ಳುವ ಯೋಚನೆಯಲ್ಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಲೇ. ಈ ವಿಷಯದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಸಾಕಷ್ಟು ಚರ್ಚೆಗಳನ್ನು ಮಾಡಲು ಶುರು ಮಾಡಿದರು. ಇನ್ನು ಇದೀಗ ಈ ವಿಷಯದ ಬಗ್ಗೆ ಮತ್ತೊಂದು ಅಪ್ಡೇಟ್ ಸಿಕ್ಕಿದೆ.
ಹೌದು ನಟ ಯಶ್ ಅವರ ತಾಯಿ ಅವರನ್ನು ನಟ ಯಶ್ ಹಾಗೂ ನಟಿ ರಾಧಿಕಾ ಅವರ ಮೂರನೇ ಮಗುವಿನ ಬಗ್ಗೆ ಪ್ರಶ್ನೆಯನ್ನು ಕೇಳಲಾಗಿತ್ತು. ಇನ್ನು ಇದೀಗ ಯಶ್ ಅವರ ತಾಯಿ ಈ ಪ್ರಶ್ನೆಗೆ ಏನು ಉತ್ತರಿಸದೆ ನಕ್ಕು ಸುಮ್ಮನಾಗಿದ್ದಾರೆ. ಸದ್ಯ ಅವರ ಈ ರಿಯಾಕ್ಷನ್ ಅಭಿಮಾನಿಗಳನ್ನು ಗೊಂದಲಕ್ಕೆ ಹಾಕಿದೆ ಎಂದರೆ ತಪ್ಪಾಗುವುದಿಲ್ಲ.
ಇನ್ನು ನಟ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ಅವರು ಮೂರನೇ ಮಗು ಮಾಡಿಕೊಳ್ಳುತ್ತಾರೋ, ಇಲ್ಲವೋ ಎನ್ನುವುದನ್ನು ಕಾದು ನೋಡಬೇಕಿದೆ. ಇನ್ನು ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಒಂದು ಲೈಕ್ ಕೊಟ್ಟು ಶೇರ್ ಮಾಡಿ ಹಾಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ.