ಸರ್ಕಾರದಿಂದ 5 ಲಕ್ಷ ರೂಪಾಯಿವರೆಗಿನ ಉಚಿತ ಚಿಕಿತ್ಸೆ ಪಡೆಯುವ,ಯಶಸ್ವಿನಿ ಕಾರ್ಡ್ ಕುರಿತು ಮಹತ್ವದ ವಿಚಾರ ಇವತ್ತೇ ತಿಳಿದುಕೊಳ್ಳಿ

Yeshaswini Health card: ಸರ್ಕಾರ ಇದೀಗ ಯಶಸ್ವಿ ಯೋಜನೆಯನ್ನು ಪರಿಷ್ಕರಿಸಿದ್ದು ರೈತರು ಮತ್ತು ಸಹಕಾರ ಸಂಸ್ಥೆಗಳು ಅವಧಿ ವಿಸ್ತರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರಿಂದ ಈ ಯೋಜನೆಯ ಕೊನೆಯ ದಿನಾಂಕವನ್ನು ಸಹ ವಿಸ್ತರಣೆ ಮಾಡಿದ್ದು 20223ನೇ ಸಾಲಿಗೆ ಮುಂಚೆ 2023ರ ಜನವರಿ 31 ಕಡೆಯ ದಿನಾಂಕವಾಗಿತ್ತು. ಇದೀಗ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯ ಹೊಸ ಸದಸ್ಯರನ್ನು ನೋಂದಾಯಿಸಿಕೊಳ್ಳುವ ಅವಧಿಯನ್ನು ಫೆಬ್ರವರಿ 28ರ ವರೆಗೆ ವಿಸ್ತರಿಸಲಾಗಿದೆ.

ಈ ಯೋಜನೆಯ ಅಡಿಯಲ್ಲಿ ಯಶಸ್ವಿನಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಒಂದು ಕುಟುಂಬಕ್ಕೆ ಸುಮಾರು 5 ಲಕ್ಷ ರೂಪಾಯಿವರೆಗಿನ ವೆಚ್ಚದಲ್ಲಿ ನಗದುರಹಿತ ಚಿಕಿತ್ಸೆಯನ್ನು ಪಡೆಯಬಹುದಾಗಿದೆ. ಇದು ಜನಸಾಮಾನ್ಯರಿಗೆ ಅತ್ಯಂತ ಉಪಯುಕ್ತ ಬದಲಾವಣೆಯಾಗಿದೆ ಹಾಗೂ ಈ ಕಾರ್ಯಕ್ಕಾಗಿ ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನಲ್ಲಿ 300 ಕೋಟಿ ರೂಪಾಯಿಗಳನ್ನು ಅನುದಾನವಾಗಿ ನಿಗದಿಪಡಿಸಿದೆ.

ಗ್ರಾಮೀಣ ಸಹಕಾರ ಸಂಘಗಳ ಅಥವಾ ಸ್ವ ಸಹಾಯ ಗುಂಪುಗಳ ಗರಿಷ್ಠ ನಾಲ್ಕು ಸದಸ್ಯರ ಕುಟುಂಬವೊಂದಕ್ಕೆ ವಾರ್ಷಿಕ ವಾಗಿ 500 ಗಳ ಒಂದಿಗೆ ಮತ್ತು ಪ್ರತಿಯೊಬ್ಬ ಹೆಚ್ಚುವರಿ ಸದಸ್ಯರಿಗೆ ನೂರು ರೂಪಾಯಿ ಧನ ಸಹಾಯವನ್ನು ಪಾವತಿಸಬೇಕು ಅಂತೆಯೇ ನಗರ ಸರಕಾರ ಸಂಘಗಳ ಗರಿಷ್ಠ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ರೂ.1000 ಮತ್ತು ಹೆಚ್ಚುವರಿ ಪ್ರತಿಯೊಬ್ಬ ಸದಸ್ಯರಿಗೆ 200 ರೂಗಳನ್ನು ಸಹಾಯಧನವನ್ನಾಗಿ ಪಾವತಿಸಬೇಕು

ಹಾಗೆಯೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರಿಗೆ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆ ಅಡಿ ಸಹಾಯಧನ ನೀಡುವ ಮೂಲಕ ಸರ್ಕಾರವೇ ಅವರ ವಾರ್ಷಿಕ ಸದಸ್ಯತ್ವದ ಒಂದಿಗೆಯನ್ನ ಭರಿಸುತ್ತದೆ.
ಯಶಸ್ವಿನಿ ಯೋಜನೆ ಎಂದೇನು ?

ಯಶಸ್ವಿನಿ ಗ್ರಾಮೀಣ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆ. ಕರ್ನಾಟಕದ ರಾಜ್ಯದ ಗ್ರಾಮೀಣ ಸಹಕಾರಿಗಳಿಗಾಗಿಯೇ ರೂಪಗೊಂಡಿರುವ ಒಂದು ಸ್ವಯಂ-ನಿಧಿ ಶಸ್ತ್ರಚಿಕಿತ್ಸಾ ಯೋಜನೆ. ಈ ಯೋಜನೆಯಡಿ ಗ್ರಾಮೀಣ ಸಹಕಾರಿಯೊಬ್ಬರು ತಿಂಗಳಿಗೆ ಇಂತಿಷ್ಟರಂತೆ ನಿಗಧಿತ ಪ್ರಮಾಣದಲ್ಲಿ ಒಂದು ವರ್ಷದ ಅವಧಿಯಲ್ಲಿ ಯೋಜನೆಯಲ್ಲಿ ಒಳಗೊಂಡ ಯಾವುದೇ ಶಸ್ತ್ರ ಚಿಕಿತ್ಸೆಯನ್ನು ನಿಗದಿತ ಮಿತಿಯೊಳಗೆ, ಷರತ್ತು ಮತ್ತು ನಿಯಮಗಳಿಗೆ ಒಳಪಟ್ಟು ಟ್ರಸ್ಟಿನಿಂದ ಅಂಗೀಕೃತ ಯಾವುದೇ ಆಸ್ಪತ್ರೆಗಳಲ್ಲಿ ನಗದುರಹಿತವಾಗಿ ಪಡೆಯಬಹುದು .

ಯಶಸ್ವಿನಿ ಕಾರ್ಡ್ ಪಡೆದ 15 ದಿನಗಳ ನಂತರ ಈ ಯೋಜನೆಯ ಸೌಲಭ್ಯವನ್ನು ಪಡೆಯಲು ಫಲಾನುಭವಿಗಳು ಅರ್ಹರಾಗುತ್ತಾರೆ. ಸರ್ಕಾರಿ ಮತ್ತು  ಖಾಸಗಿ ನೌಕರರು ಯಾವುದೇ ವಿಮಾ ಯೋಜನೆಯಲ್ಲಿದ್ದರೆ ಈ ಯೋಜನೆಗೆ ಅರ್ಹರಲ್ಲವೆಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಯೋಜನೆಯಲ್ಲಿ ಹಿಂದೆ ಇದ್ದ ಗರಿಷ್ಠ 2 ಲಕ್ಷ ರೂ. ಮಿತಿಯನ್ನು 5 ಲಕ್ಷ ರೂ.ಗಳಿಗೆ ಏರಿಸಲಾಗಿದೆ. ಆದರೆ 1 ಕುಟುಂಬದಲ್ಲಿ 4 ಜನರು ಸೇರಿದಂತೆ 5 ಲಕ್ಷಕ್ಕೆ ಮೀರದಂತೆ ಮಾತ್ರ ಆಸ್ಪತ್ರೆ ಸೌಲಭ್ಯ ಪಡೆದುಕೊಳ್ಳಬಹುದು. ಕುಟುಂಬದಲ್ಲಿ ಒಬ್ಬರೇ 5 ಲಕ್ಷ ರೂ.ವರೆಗೆ ಸೌಲಭ್ಯ ಪಡೆದುಕೊಳ್ಳಲು ಅವಕಾಶವಿದೆ. 1 ವರ್ಷದೊಳಗೆ ಒಮ್ಮೆ ಮಾತ್ರ ಈ ಸೌಲಭ್ಯ ಪಡೆಯಬಹುದಾಗಿದೆ.

ಸೌಲಭ್ಯ ಪಡೆಯುವುದು ಹೇಗೆ ?

ಯಶಸ್ವಿನಿ ಫಲಾನುಭವಿಗಳು ಶಸ್ತ್ರಚಿಕಿತ್ಸೆ ಬೇಕಾದಲ್ಲಿ ತಮ್ಮ ಯೂನಿಕ್ ಐ.ಡಿ. ಸಂಖ್ಯೆ ಹೊಂದಿರುವ ಸದಸ್ಯರ ಉಪಯೋಗಕ್ಕಾಗಿ ನೀಡಲಾದ ಮೂಲ ಗುರುತಿನ ಕಾರ್ಡ್ ಮತ್ತು ಮೂಲ ಹಣ ಪಾವತಿ ರಸೀದಿಯೊಂದಿಗೆ ಯೋಜನೆಯಡಿಯಲ್ಲಿ ಅಂಗೀಕೃತವಾದ ಆಸ್ಪತ್ರೆಗೆ ಭೇಟಿ ನೀಡಬೇಕು. ಆಸ್ಪತ್ರೆಯ ವೈದ್ಯಾಧಿಕಾರಿಗಳು ಅಂತಹ ಫಲಾನುಭವಿಗಳ ಆರೋಗ್ಯ ತಪಾಸಣೆ ಮಾಡಿ, ಶಸ್ತ್ರಚಿಕಿತ್ಸೆ ಅವಶ್ಯಕಂಡು ಬಂದಲ್ಲಿ ಮತ್ತು ಸದರಿ ಶಸ್ತ್ರಚಿಕಿತ್ಸೆಯ ಯೋಜನೆಯಲ್ಲಿ ಒಳಗೊಂಡಿದ್ದಲ್ಲಿ, ವಿವರಗಳೊಂದಿಗೆ ಅನುಷ್ಟಾನ ಸಂಸ್ಥೆಗೆ ಇಂಟರ್ ನೆಟ್ ಮುಖಾಂತರ ಪ್ರಸ್ತಾಪ ಕಳಿಸುವರು.ಅನುಷ್ಟಾನ ಸಂಸ್ಥೆಯವರು ಪ್ರಸ್ತಾಪವನ್ನು ಪರಿಶೀಲಿಸಿ ಚಿಕಿತ್ಸಾ ಪೂರ್ವಾ ನುಮತಿ ನೀಡಿದ ನಂತರ ಆಸ್ಪತ್ರೆಯವರು ಶಸ್ತ್ರಚಿಕಿತ್ಸೆಯನ್ನು ನಿರ್ವಹಿಸುವರು.ಯಶಸ್ವಿನಿ ಫಲಾನುಭವಿಗಳು ಆಸ್ಪತ್ರೆಗೆ ಸೇರಿದಾಗ ಶಸ್ತ್ರಚಿಕಿತ್ಸೆಗೆ ಹಣ ಪಾವತಿ ಮಾಡಬೇಕಾಗಿಲ್ಲ. ಈ ಯೋಜನೆಯಲ್ಲಿ ಗುರುತಿಸಿದ ಶಸ್ತ್ರಚಿಕಿತ್ಸೆಗಳು ಕೆಲವೊಂದು ಷರತ್ತುಗಳಿಗೊಳಪಟ್ಟ ನಗದು ರಹಿತವಾಗಿರುತ್ತದೆ. ಈ ಶಸ್ತ್ರಚಿಕಿತ್ಸೆಯ ವೆಚ್ಚವನ್ನು ಆಸ್ಪತ್ರೆಗೆ ಟ್ರಸ್ಟ್ ಭರಿಸುತ್ತದೆ.

ಬಿಲ್ಲಿನ ಪಾವತಿ ಹೇಗೆ ಆಗುತ್ತದೆ ?

ಯಶಸ್ವಿನಿ ಫಲಾನುಭವಿಗಳು, ಆಸ್ಪತ್ರೆಗೆ ಬಿಲ್ಲಿನ ಹಣವನ್ನು ಪಾವತಿ ಮಾಡಬೇಕಾಗಿಲ್ಲ,ಆಸ್ಪತ್ರೆಯವರು ಚಿಕಿತ್ಸಾ ಪೂರ್ವಾನುಮತಿಯಲ್ಲಿ ಮಂಜೂರು ಮಾಡಿದ ಮೊತ್ತಕ್ಕೆ ಬಿಲ್ಲನ್ನು ಅನುಷ್ಟಾನ ಸಂಸ್ಥೆಗೆ ಕಳಿಸುವರು. ಅನುಷ್ಟಾನ ಸಂಸ್ಥೆ ಯವರು ಬಿಲ್ಲನ್ನು ಪರಿಶೀಲನೆ ಮಾಡಿ ಅವು ಯೋಜನೆಯ ಪ್ರಕಾರ ಇದ್ದಲ್ಲಿ ಅವುಗಳನ್ನು ಪಾಸು ಮಾಡಲು ಯಶಸ್ವಿನಿ ಟ್ರಸ್ಟಗೆ ಕಳಿಸುವರು. ಯಶಸ್ವಿನಿ ಟ್ರಸ್ಟ್ ಆಸ್ಪತ್ರೆಗಳ ಬಿಲ್ಲನ್ನು ಮಂಜೂರು ಮಾಡಿದ ನಂತರ ಬಿಲ್ಲಿನ ಮೊತ್ತವನ್ನು ಅನುಷ್ಟಾನ ಸಂಸ್ಥೆಯ ಮೂಲಕ ಆಸ್ಪತ್ರೆಗೆ ಪಾವತಿಸಲಾಗುವುದು.

You might also like

Comments are closed.