ಬಳ್ಳಾರಿ: ಲಂಚ ಸ್ವೀಕಾರ; ಪಾಲಿಕೆ ಆಯುಕ್ತೆ ಅಮಾನತು

ಬಳ್ಳಾರಿ: ಮಹಾನಗರ ಪಾಲಿಕೆ ಆಯುಕ್ತೆ ಎಂ.ವಿ.ತುಷಾರಮಣಿ ಅವರನ್ನು ಅಮಾನತುಗೊಳಿಸಿ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಪಾಲಿಕೆ ಕಚೇರಿಯಲ್ಲಿ ಆಯುಕ್ತರ ಪಿಎ ಮಲ್ಲಿಕಾರ್ಜುನ ಪಾಟೀಲ್ ಮತ್ತು ಅಟೆಂಡರ್ ಲಂಚ ಪಡೆಯುವಾಗ ಎಸಿಬಿ ಬಲೆಗೆ ಸಿಕ್ಕಿದ್ದಿದ್ದರು. ಇದಲ್ಲದೇ ಪಾಲಿಕೆ ಆಯುಕ್ತರೇ ಫಾರ್ಮ್ ನಂ.3 ನೀಡಲು 5 ಲಕ್ಷ ರೂ. ಲಂಚ ಪಡೆದಿರುವ ಬಗ್ಗೆ ವೀಡಿಯೋ,

BELLARY-TUSHARAMANI

ಆಡಿಯೋ ಸಿಕ್ಕಿರುವ ಹಿನ್ನೆಲೆಯಲ್ಲಿ ತುಷಾರಮಣಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಕಾಯ್ದಿರಿಸಿ, ತುಷಾರಮಣಿಯವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಅಲ್ಲಿಯವರೆಗೆ ಬುಡಾ ಆಯುಕ್ತ ಈರಪ್ಪ ಬಿರಾದಾರ್ ಅವರನ್ನು ಪ್ರಭಾರಿ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ...