ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬ ಸದಸ್ಯರು ಇಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.ಇನ್ನೂ ಮುಂದೆ ಇಕೆವೈಸಿ ಮಾಡಿಸಿದರೆ ಮಾತ್ರ ಅನ್ನಭಾಗ್ಯದ ಹಣ ಹಾಗೂ ಅಕ್ಕಿ ಸಿಗಲಿದೆ.
ಹೌದು, ಸರ್ಕಾರವು ಪಾರದರ್ಶಕತೆ ತರಲು ಹಾಗೂ ಫಲಾನುಭವಿಗಳ ಗುರುತಿಸಲು ಇಕೆವೈಸಿ ಮಾಡಿಸುವುದನ್ನು ಕಡ್ಡಾಯಗೊಳಿಸಿದೆ. ಪಡಿತರ ಚೀಟಿಯಲ್ಲಿ ಹೆಸರಿರುವ ಎಲ್ಲಾ ಸದಸ್ಯರ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ.. ಇಲ್ಲಿದೆ ನೋಡಿ ಮಾಹಿತಿ.
ಪಡಿತರ ಚೀಟಿದಾರರ ಇಕೆವೈಸಿ ಆಗಿದೆಯೋ ಇಲ್ಲವೋ ಮೊಬೈಲ್ ನಲ್ಲೇ ಚೆಕ್ ಮಾಡುವುದು ಹೇಗೆ?
ಪಡಿತರ ಚೀಟಿದಾರರ ಸದಸ್ಯರ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡಲು ಈ
https://ahara.kar.nic.in/lpg/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮಗೆ ವಿಭಾಗಾವಾರು ಜಿಲ್ಲೆಗಳು ಕಾಣಿಸುತ್ತವೆ. ನೀವು ಯಾವ ಜಿಲ್ಲೆಯವರೋ ಆ ವಿಭಾಗದ ಮೇಲ್ಗಡೆ ಇರುವ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಪಡಿತರ ಚೀಟಿ ವಿವರ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ with OTP ಹಾಗೂ without OTP ಇವರೆಡು ಆಯ್ಕೆಗಳು ಕಾಣಿಸುತ್ತವೆ. ಅಲ್ಲಿ ನೀವು ಓಟಿಪಿ ಸಹಾಯದಿಂದಲೂ ಚೆಕ್ ಮಾಡಬಹುದು.
ಓಟಿಪಿಯಿಲ್ಲದೆಯೂ ಚೆಕ್ ಮಾಡಬಹುದು. ಓಟಿಪಿ ಇಲ್ಲದೆಯೇ ಚೆಕ್ ಮಾಡಲು without OTP ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಪಡಿತರ ಚೀಟಿ ಆರ್ ಸಿ ನಂಬರ್ ನಮೂದಿಸಬೇಕು. ನಂತರ ಗೋ ಮೇಲೆ ಕ್ಲಿಕ್ ಮಾಡಬೇಕು. ಆಗ ಪಡಿತರ ಚೀಟಿಯ ಮೊದಲ ಪುಟ ಕಾಣಿಸುತ್ತದೆ.
ಅಲ್ಲಿ ನಿಮ್ಮ ಪಡಿತರ ಚೀಟಿ ಆ್ಯಕ್ಟಿವ್ ಇದೆಯೋ ಇಲ್ಲವೋ ಎಂಬುದನ್ನ ಚೆಕ್ ಮಾಡುವುದರೊಂದಿಗೆ ಎಷ್ಟು ಜನ ಸದಸ್ಯರ ಇಕೆವೈಸಿ ಆಗಿದೆ ಎಂಬುದು ಕಾಣಿಸುತ್ತದೆ.
ಪಡಿತರ ಚೀಟಿದಾರರು ಆಗಸ್ಟ್ 31 ರೊಳಗೆ ಇಕೆವೈಸಿ ಮಾಡಿಸಿಕೊಳ್ಳಲು ಸೂಚನೆ
ಸರ್ಕಾರದ ನಿರ್ದೇಶನದಂತೆ ಪಡಿತರ ಚೀಟಿಯಲ್ಲಿನ ಪ್ರತಿಯೊಬ್ಬ ಸದಸ್ಯರ ಇಕೆವೈಸಿ (ಜೀವ ಮಾಪಕ/ ಹೆಬ್ಬಟ್ಟು ಗುರುತಿನ ದೃಢೀಕರಣ) ಮಾಡಿಸಿಕೊಳ್ಳುವುದು ಅತೀ ಅವಶ್ಯವಿರುತ್ತದೆ. ಆದ್ದರಿಂದ ಇನ್ನುಳಿದ ಕಲಬುರಗಿ ತಾಲೂಕಿನ ಪಡಿತರ ಚೀಟಿದಾರರು ಆಗಸ್ಟ್ 31 ರೊಳಗೆ ತಮ್ಮ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಇಕೆವೈಸಿ ಮಾಡಿಸಿಕೊಳ್ಳಬೇಕು.
ಒಂದು ವೇಳೆ ನಿಗದಿತ ದಿನಾಂಕದೊಳಗೆ ಇಕೆವೈಸಿ ಮಾಡಿಸಿಕೊಳ್ಳದೆ ಇದ್ದಲ್ಲಿ ಅಂತಹ ಪಡಿತರ ಚೀಟಿಗಳ ಸದಸ್ಯರುಗಳ ಪಡಿತರ ಚೀಟಿಗಳನ್ನು ಅಮಾನತುಗೊಳಿಸಲಾಗುವುದು ಹಾಗೂ 2023 ರ ಸೆಪ್ಟೆಂಬರ್ ತಿಂಗಳಿಂದ ಆಹಾರ ಧಾನ್ಯ ಮತ್ತು ಡಿಬಿಟಿ ನಗದು ಸೌಲಭ್ಯವನ್ನು ಸಹ ಸ್ಥಗಿತಗೊಳಿಸಲಾಗುವುದೆಂದು ಕಲಬುರಗಿ ತಹಶೀಲ್ದಾರರಾದ ನಾಗಮ್ಮ ಎಂ. ಕಟ್ಟಿಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರ್ಕಾರದ ನಿರ್ದೇಶನದಂತೆ ಕಲಬುರಗಿ ತಾಲೂಕಿನ ಎಲ್ಲಾ ಪಡಿತರ ಚೀಟಿದಾರರು ತಮಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ, ಬಯೋಮೆಟ್ರಿಕ್ ನೀಡಿ ಇಕೆವೈಸಿ (ಜೀವಮಾಪಕ ಹೆಬ್ಬಟ್ಟು ಗುರುತಿನ ದೃಢೀಕರಣ) ಮಾಡಿಕೊಳ್ಳಬೇಕು. ಕಲಬುರಗಿ ತಾಲೂಕಿನಲ್ಲಿ 79 ನ್ಯಾಯಬೆಲೆ ಅಂಗಡಿಗಳು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ನ್ಯಾಯ ಬೆಲೆ ಅಂಗಡಿಗಳಲ್ಲಿ ಆಯಾ ಜಿಲ್ಲಾ ವ್ಯಾಪ್ತಿಯಲ್ಲಿರುವ ಫಲಾನುಭವಿಗಳು ಅಲ್ಲೇ ಪಿಒಎಸ್ ವ್ಯವಸ್ಥೆಯ ಮೂಲಕ ಉಚಿತವಾಗಿ ಇಕೆವೈಸಿ ಮಾಡುವ ಕಾರ್ಯವು ಪ್ರಗತಿಯಲ್ಲಿರುತ್ತದೆ.
ತಮಗೆಲ್ಲಾ ಗೊತ್ತಿದ್ದ ಹಾಗೆ ಈಗ ಪಡಿತರ ಚೀಟಿಯಲ್ಲಿರುವ ಸದಸ್ಯರನುಗುಣವಾಗಿ ಐದು ಕೆಜಿ ಅಕ್ಕಿ ನೀಡಲಾಗುತ್ತಿದೆ.ಇದರೊಂದಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಾಗಿ ಹಣವನ್ನು ನೇರವಾಗಿ ಫಲಾನುಭವಿಯ ಖಾತೆಗೆ ಜಮೆ ಮಾಡಲಾಗುತ್ತಿದೆ. ಹಾಗಾಗಿ ಆಗಸ್ಟ್ 31 ರೊಳಗೆ ಇಕೆವೈಸಿ ಮಾಡಿಸದಿದ್ದರೆ ಇಕೆವೈಸಿ ಮಾಡಿಸಿಕೊಳ್ಳಬಹುದು. ನಿಮ್ಮ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಬಹುದು.