BPL Card: ಬಿಪಿಎಲ್ ಕಾರ್ಡ್ ಇರುವವರಿಗೆ ಬಂತು ಹೊಸ ನಿಯಮ

Free Govt Schemes/ಸರ್ಕಾರಿ ಉಚಿತ ಯೋಜನೆಗಳು RATION CARD/ರೇಷನ್ ಕಾರ್ಡ್ ಮಾಹಿತಿ Today News / ಕನ್ನಡ ಸುದ್ದಿಗಳು

ಪಡಿತರ ಚೀಟಿ (Ration Card) ಹೊಂದಿರುವವರು ಆಧಾರ್ ಕಾರ್ಡ್ (Aadhaar Card) ಜೊತೆಗೆ ಲಿಂಕ್ ಮಾಡಿಕೊಳ್ಳುವುದು ಕಡ್ಡಾಯ ಎಂದು ಕೇಂದ್ರ ಸರ್ಕಾರ ಈಗಾಗಲೇ ಸೂಚಿಸಿದೆ. ಒಂದು ವೇಳೆ ಪಡಿತರ ಚೀಟಿ ಜೊತೆ ಆಧಾರ್ ಕಾರ್ಡ್ ಲಿಂಕ್ ಆಗದೆ ಇದ್ದಲ್ಲಿ ಪಡಿತರ ಚೀಟಿಯನ್ನು ರದ್ದು ಮಾಡುವುದಾಗಿ ಆದೇಶ ಹೊರಡಿಸಲಾಗಿದೆ ಈ ನಿಯಮವು ಕಡ್ಡಾಯವಾಗಿ ಪಡಿತರ ಚೀಟಿ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದರ ಕುರಿತಾಗಿದೆ.

ಪಡಿತರ ಚೀಟಿಯೊಂದಿಗೆ ಆಧಾರ್ ಕಾರ್ಡ್ ಲಿಂಕ್ ಮಾಡದೆ ಇದ್ರೆ ಏನಾಗುತ್ತೆ?

ಈ ಪ್ರಶ್ನೆ ಸಹಜವಾಗಿಯೇ ಪಡಿತರ ಚೀಟಿ ಹೊಂದಿರುವವರಿಗೆ ಉದ್ಭವಿಸಬಹುದು. ಆದರೆ ಜುಲೈ ಒಂದರಿಂದ ಪಡಿತರ ಚೀಟಿ (BPL Card) ಯಲ್ಲಿ ಸಿಗುವ ಉಚಿತ ಅಕ್ಕಿ ಅಥವಾ ಇತರ ಸೌಲಭ್ಯ ಸಿಗಬೇಕು ಅಂದ್ರೆ ಆಧಾರ್ ಕಾರ್ಡ್ ಜೊತೆಗೆ ಪಡಿತರ ಚೀಟಿಯನ್ನು ಲಿಂಕ್ ಮಾಡಿಕೊಳ್ಳುವುದು ಕಡ್ಡಾಯವಾಗಿದೆ.

Ration card news: Check out THESE new services available online

ಅಕ್ರಮವಾಗಿ ಪಡಿತರ ಚೀಟಿ ಬಳಸಿ ಸರ್ಕಾರದ ದವಸ ಧಾನ್ಯಗಳನ್ನು ಪಡೆದುಕೊಳ್ಳುವ ವ್ಯವಹಾರವನ್ನು ತಪ್ಪಿಸುವುದಕ್ಕಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ. ಅರ್ಹರಿಗೆ ಪಡಿತರ ಚೀಟಿಯ ಲಾಭ ಸಿಗುವಂತೆ ಸರ್ಕಾರ ನಿಯಮ ರೂಪಿಸಿದೆ.

ಇತ್ತೀಚಿಗೆ ನಕಲು ಪಡಿತರ ಚೀಟಿಗಳು ಹೆಚ್ಚಾಗುತ್ತಿವೆ. ಹಾಗಾಗಿ ಇವುಗಳನ್ನು ತಪ್ಪಿಸಲು ಆಯಾ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ಹೊಸ ಅರ್ಜಿಗಳನ್ನು ನೀಡಿ ನಿಯಮಾನುಸಾರ ಹೊಸ ಪಡಿತರ ಚೀಟಿಯನ್ನು ಪಡೆದುಕೊಳ್ಳಬಹುದು ಅದಕ್ಕಾಗಿ ಆಧಾರ್ ಕಾರ್ಡ್ ಜೊತೆಗೆ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಜೊತೆಗೆ ಯಾರು ಪಡಿತರ ಚೀಟಿ ಹೊಂದಿದ್ದಾರೋ ಅವರು ತಮ್ಮ ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡಿಕೊಳ್ಳಬೇಕು. ರಿಜಿಸ್ಟರ್ ಆಗಿರುವ ಮೊಬೈಲ್ ನಂಬರ್ ಗೆ ಲಿಂಕ್ ಆದ ಮಾಹಿತಿ ಬರುತ್ತದೆ.

ನಿಮ್ಮ ಸ್ನೇಹಿತರಿಗೆ ಹಾಗು ವಾಟ್ಸಪ್ಪ್ / ಫೇಸ್ಬುಕ್ ಗ್ರೂಪ್ ಗಳಿಗೆ ಶೇರ ಮಾಡಿ...