
ಕಾಂಗ್ರೆಸ್ನ ಮೊದಲ ಗ್ಯಾರಂಟಿ ಗೃಹ ಜ್ಯೋತಿ ಯೋಜನೆ. ಇದರಡಿ ಪ್ರತಿ ಮನೆಗೆ ತಿಂಗಳಿಗೆ 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಬೇಕಾಗುತ್ತದೆ. ಪಕ್ಷವು ಘೋಷಿಸಿದ ಐದು ‘ಗ್ಯಾರಂಟಿ’ಗಳು ನಮ್ಮ ಪರವಾಗಿ ಕೆಲಸ ಮಾಡಿವೆ ಮತ್ತು ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಪಡೆಯಲು ಸಹಾಯ ಮಾಡಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ.
ಈ ಮಧ್ಯೆ, ನೂತನ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಎಲ್ಲ ಐದು ಭರವಸೆಗಳನ್ನು ಜಾರಿಗೊಳಿಸಲಾಗುವುದು ಎಂದು ಕಾಂಗ್ರೆಸ್ ನಾಯಕರು ಭರವಸೆ ನೀಡಿದ್ದಾರೆ. ಈ ವರ್ಷದ ಜನವರಿಯಲ್ಲಿ ಪಕ್ಷವು ಘೋಷಿಸಿದ ಮೊದಲ ಗ್ಯಾರಂಟಿ ಗೃಹ ಜ್ಯೋತಿ ಯೋಜನೆ. ಇದರಡಿ ಪ್ರತಿ ಮನೆಗೆ ತಿಂಗಳಿಗೆ 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಬೇಕಾಗುತ್ತದೆ. ಈ ವರ್ಷದ ಜನವರಿಯಲ್ಲಿ ಕಾಂಗ್ರೆಸ್ ‘ಪ್ರಜಾಧ್ವನಿ ಯಾತ್ರೆ’ಯ ಆರಂಭಿಸಿದಾಗ, ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ ತಿಂಗಳಿಗೆ 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿತ್ತು.
ಇದು ಕಾಂಗ್ರೆಸ್ನ ಮೊದಲ ಗ್ಯಾರಂಟಿಯಾಗಿತ್ತು. ನಮ್ಮ ಮೊದಲ ಗ್ಯಾರಂಟಿ ಗೃಹ ಜ್ಯೋತಿ ಯೋಜನೆಯಿಂದ ಪ್ರತಿ ಮನೆಯನ್ನು ಬೆಳಕಿನಿಂದ ಬೆಳಗಿಸಲು ಬಯಸುತ್ತೇವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಈಚೆಗೆ ಬೆಳಗಾವಿಯಲ್ಲಿ ಹೇಳಿದ್ದರು. ಉಚಿತ ವಿದ್ಯುತ್ ದಲಿತರು, ಒಬಿಸಿಗಳು ಮತ್ತು ಅಲ್ಪಸಂಖ್ಯಾತರಿಗೆ ಸೀಮಿತವಾಗಿರದೆ ಎಲ್ಲರಿಗೂ ನೀಡಲಾಗುವುದು. ಯಾವುದೇ ಬೆಲೆ ತೆತ್ತಾದರೂ ಭರವಸೆ ಈಡೇರಿಸುತ್ತೇವೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಹೇಳಿದ್ದಾರೆ.
ಆದರೆ, 200 ಯೂನಿಟ್ ಮೇಲ್ಪಟ್ಟು ವಿದ್ಯುತ್ ಬಳಸಿದಲ್ಲಿ ಹೆಚ್ಚಿನ ಯೂನಿಟ್ಗೆ ಮಾತ್ರ ದರ ವಿಧಿಸುತ್ತಾರೆಯೇ ಅಥವಾ 200ಕ್ಕಿಂತ ಕಡಿಮೆ ಬಳಸಿದವರಿಗೆ ಮಾತ್ರ ಉಚಿತ ಭರವಸೆ ಅನ್ವಯವಾಗುತ್ತದೆಯೇ ಎಂಬುದನ್ನು ಪಕ್ಷ ಇನ್ನೂ ಸ್ಪಷ್ಟಪಡಿಸಿಲ್ಲ.
Comments are closed.