ಕನ್ನಡ ಚಿತ್ರರಂಗದಲ್ಲಿ ಅದೆಷ್ಟೋ ನಟಿಯರು ಕೆಲವೇ ಕೆಲವು ಸಿನಿಮಾಗಳಲ್ಲಿ ಅಭಿನಯಿಸಿ ನಂತರದ ದಿನಗಳಲ್ಲಿ ಚಿತ್ರರಂಗದಿಂದ ದೂರವಾಗುತ್ತಾರೆ. ಕೆಲವರು ಮದುವೆಯಾಗಿ ಸಿನಿಮಾರಂಗದಿಂದ ದೂರ ಉಳಿದರೆ, ಮತ್ತೆ ಕೆಲವರು ಅವಕಾಶಗಳು ಇಲ್ಲದೆ ಬೇರೆ ಕೆಲಸಗಳಲ್ಲಿ ನಿರತರಾಗಿರುತ್ತಾರೆ. ಇನ್ನು ಕನ್ನಡ ಚಿತ್ರರಂಗದಲ್ಲಿ ಯಶಸ್ಸು ಕಂಡಿದ್ದ ನಟೀಮಣಿಯರಲ್ಲಿ ನಿಖಿತಾ ಕೂಡ ಒಬ್ಬರು. ಹೌದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಹಲವಾರು ಸಿನಿಮಾಗಳಲ್ಲಿ ಅಭಿನಯಿಸಿದ್ದ ನಿಖಿತಾ ಅವರು ಸಿನಿಪ್ರಿಯರಿಗೆ ತುಂಬಾ ಇಷ್ಟವಾಗಿದ್ದರು.

ಇನ್ನು ಸಿನಿಮಾದಲ್ಲಿ ದರ್ಶನ್ ಹಾಗೂ ನಿಖಿತಾ ಅವರ ಜೋಡಿ ಎಂದರೆ ಅಭಿಮಾನಿಗಳಿಗೆ ಸಖತ್ ಇಷ್ಟ. ಆದರೆ ನಂತರದ ದಿನಗಳಲ್ಲಿ ಹಲವಾರು ಊಹಾಪೋಹಗಳು ಎದ್ದು ನಿಖಿತಾ ಅವರು ಚಿತ್ರರಂಗದಿಂದ ದೂರ ಉಳಿದರು. ನಿಖಿತಾ ಅವರು ಕನ್ನಡದಲ್ಲಿ ಹಾಗೂ ಇತರೆ ಭಾಷೆಯ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಇನ್ನು ಅವರು ಚಿತ್ರರಂಗದಿಂದ ದೂರ ಉಳಿದ ನಂತರ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳಲಿಲ್ಲ. ಆದರೆ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಹಾಗಾದರೆ ಆ ಸುದ್ದಿ ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು, ಇದನ್ನು ಸಂಪೂರ್ಣವಾಗಿ ಓದಿ.

ಹೌದು ಕನ್ನಡ ಚಿತ್ರರಂಗದಲ್ಲಿ ಯೋಧ, ವಂಶಿ, ರಾಜಕುಮಾರಿ, ಸಂಗೊಳ್ಳಿ ರಾಯಣ್ಣ, ದುಬೈ ಬಾಬು ಹೀಗೆ ಹತ್ತು ಹಲವಾರು ಚಿತ್ರಗಳಲ್ಲಿ ಅಭಿನಯಿಸಿದ ನಿಖಿತಾ ಅವರು ಇದೀಗ ಟಿಕ್ ಟಾಕ್ ಹಾಗೂ ಇನ್ಸ್ಟಾಗ್ರಾಮ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಹೌದು ನಿಖಿತಾ ಅವರು ತಮ್ಮ ಮಗಳೊಂದಿಗೆ ಹಲವಾರು ವಿಡಿಯೋಗಳನ್ನು ಮಾಡುತ್ತಾ ಅವುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ನಿಖಿತಾ ಅವರು ಮದುವೆಯಾದ ಬಳಿಕ ಸಿನಿಮಾರಂಗದಿಂದ ಸಂಪೂರ್ಣವಾಗಿ ದೂರ ಸರಿದಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಅವರಂತೆ ನಟ ಐಂದ್ರಿತಾ ರೈ ಕೂಡ ನಟ ದಿಗಂತ್ ಅವರನ್ನು ಮದುವೆಯಾದ ಬಳಿಕ ಸಿನಿಮಾರಂಗದಿಂದ ದೂರ ಉಳಿದಿದ್ದರು. ಆ ಸಮಯದಲ್ಲಿ ಅವರು ಇಂತಹ ಟಿಕ್ ಟಾಕ್ ಹಾಗೂ ಇನ್ಸ್ಟಾಗ್ರಾಂ ಮೂಲಕ ವಿಡಿಯೋ ಮಾಡುತ್ತಾ ತಮ್ಮ ಅಭಿಮಾನಿಗಳ ಮುಂದೆ ಪ್ರತ್ಯಕ್ಷರಾಗಿದ್ದರು. ಇವರಂತೆ ಸಾಕಷ್ಟು ನಟಿಯರು ಇದೀಗ ಸಿನಿಮಾರಂಗದಿಂದ ದೂರ ಉಳಿದು, ಇಂತಹ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ತಮ್ಮ ವಿಡಿಯೋಗಳನ್ನು ಹಾಗೂ ಫೋಟೋಗಳನ್ನು ಹಂಚಿಕೊಳ್ಳುತ್ತಾ ಕಾಣಿಸಿಕೊಳ್ಳುತ್ತಾರೆ. ಇನ್ನು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವಿಡಿಯೋವನ್ನು ವೀಕ್ಷಿಸಬಹುದು. ಇನ್ನು ಈ ಸುದ್ದಿ ನಿಮಗೆ ಇಷ್ಟವಾದಲ್ಲಿ ಶೇರ್ ಮಾಡಿ ಹಾಗೂ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ತಪ್ಪದೇ ಕಮೆಂಟ್ ಮಾಡಿ ತಿಳಿಸಿ.

ನಿಮ್ಮ ಸ್ನೇಹಿತರಿಗೆ ಮತ್ತು ಫೇಸ್ಬುಕ್ ಗ್ರೂಪ್ ಗೆ ಶೇರ ಮಾಡಿ...
  •  
  •  
  •  
  •  
  •  
  •  
  •