ಬಾಲಿವುಡ್ ನಟಿ ಮೇಘನಾರಾಯ್ ಅವರು ಹೃದಯಾಘಾತ ದಿಂದಾಗಿ ವಿಧಿವಶರಾಗಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲು ತ್ತಿದ್ದ ಮೇಘನಾ ಚಿಕಿತ್ಸೆ ಪಡೆಯುತ್ತಿದ್ದರಾದರೂ ನಿನ್ನೆ ರಾತ್ರಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಜಯ ಸಂತೋಷಿ ಮಾ ಸೇರಿದಂತೆ ಹಲವು ಬಾಲಿವುಡ್ ಚಿತ್ರಗಳಲ್ಲಿ ನಟಿಸಿದ್ದ ಮೇಘನಾ ಕಿರುತೆರೆಯಲ್ಲೂ ಗುರುತಿಸಿಕೊಂಡು ಏಕ್ ಮಹಲ್ ಹೋ ಸಪನೋ ಕಾ, ಹಸ್ರತ್, ತೀನ್ಬಹುರಾಣಿಯಾ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಬಣ್ಣ ಹಚ್ಚಿದ್ದರು.
ಗುಜರಾತಿ ಚಿತ್ರರಂಗ ಹಾಗೂ ರಂಗಭೂಮಿಯಲ್ಲಿ ಗುರುತಿಸಿಕೊಂಡಿದ್ದ ಮೇಘನಾರ ಸಾವಿಗೆ ಬಾಲಿವುಡ್ ಹಾಗೂ ಗುಜರಾತಿ ಚಿತ್ರರಂಗ, ರಂಗಭೂಮಿ ಹಾಗೂ ಕಿರುತೆರೆಯ ಹಲವು ಕಲಾವಿದರು ಹಾಗೂ ತಂತ್ರಜ್ಞರು ಕಂಬನಿ ಮಿಡಿದಿದ್ದಾರೆ.