ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಮೃತನನ್ನು 22 ವರ್ಷದ ಅವಿನಾಶ್ ಎಂದು ಗುರುತಿಸಲಾಗಿದೆ. ಅವಿನಾಶ್ ಮೂಲತಃ ಮೂಡಿಗೆರೆ ತಾಲೂಕಿನ ಮಾಳಿಗನಾಡು ಗ್ರಾಮದವನಾಗಿದ್ದು, ಬಿ. ಹೊಸಳ್ಳಿ ಕೆರೆಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದಾಗ ಈ ಅವಘಡ ಸಂಭವಿಸಿದೆ.

ಯುವಕನ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವಕನ ಮೃತದೇಹಕ್ಕಾಗಿ ಪೊಲೀಸ್ ಹಾಗೂ ಸ್ಥಳಿಯರು ಹುಡುಕಾಟ ನಡೆಸಿದ್ದಾರೆ.
ನಿಮ್ಮ ಸ್ನೇಹಿತರಿಗೆ ಮತ್ತು ಫೇಸ್ಬುಕ್ ಗ್ರೂಪ್ ಗೆ ಶೇರ ಮಾಡಿ...
  •  
  •  
  •  
  •  
  •  
  •  
  •