ನಗರದಲ್ಲಿ ಕೋವಿಡ್ ಮಹಾಮಾರಿಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶನಿವಾರ ಹೊಸದಾಗಿ 630 ಮಂದಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ. ಕಳೆದ ಕೆಲ ದಿನಗಳಿಂದೀಚೆಗೆ ಇಷ್ಟೊಂದು ಪ್ರಕರಣಗಳು ಒಂದೇ ದಿನ ಪತ್ತೆಯಾಗಿರುವುದು ಇದೇ ಮೊದಲು. ಇದರ ಹಿನ್ನೆಲೆಯಲ್ಲಿ ಕಾಲೇಜು ಶಿಕ್ಷಣ ನಿರ್ದೇಸಕರು ಸರ್ಕಾರೀ ಮತ್ತು ಖಾಸಗಿ ಹಾಗು ಅನುದಾನಿತ ಶಾಲಾ ಕಾಲೇಜುಗಳಿಗೆ ತಾರಿಕ್ 15-3-2021 ರಿಂದ 15 ದಿನ ರಜೆ ಘೋಷಣೆ ಮಾಡಿದ್ದಾರೆ . ಕರೋನ ಮತ್ತೆ ವಿದ್ಯಾರ್ಥಿಗಳಿಗೆ ಹೆಚ್ಚಾಗ ಬಾರದು ಎಂದು ಈ ಕ್ರಮ ತೆಗೆದು ಕೊಳ್ಳಾಗಿದೆ ಎಂದು ತಿಳಿದು ಬಂದಿದೆ .
ಹಾಗಾಗಿ ವಿದಾರ್ಥಿಗಳ ಪೋಷಕರು ನೆಮ್ಮದಿಯ ನಿಟ್ಟಿಸುರು ಬಿಡುವಂತೆ ಆಗಿದೆ .ಅದರ ನೋಟಿಫಿಕೇಶನ್ ಸರ್ಕ್ಯುಲರ್ ಇಲ್ಲಿ ಕೆಳಗಡೆ ಇದೆ ನೋಡಿ
ಕಳೆದ ಫೆಬ್ರವರಿ ತಿಂಗಳ ಅಂತ್ಯದಿಂದ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಇರುವುದು ಆತಂಕ ಮೂಡಿಸಿದೆ. 2020ರ ಮಾ. 8ರಿಂದ ಇಲ್ಲಿಯವರೆಗೆ ಒಟ್ಟು 4,10,811 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 4,00,441 ಮಂದಿ ಗುಣಮುಖರಾಗಿದ್ದಾರೆ. ಉಳಿದ 5,853 ರೋಗಿಗಳು ನಿಗದಿತ ಆಸ್ಪತ್ರೆ, ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕೋವಿಡ್ ಪೀಡಿತರ ಪೈಕಿ ಈವರೆಗೆ ಒಟ್ಟಾರೆ 4,516 ಮಂದಿ ಸಾವನ್ನಪ್ಪಿದ್ದಾರೆ.ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಸೋಮವಾರ ಹಿರಿಯ ಅಧಿಕಾರಿಗಳು ಹಾಗೂ ತಜ್ಞರ ಜೊತೆಗೆ ಸಭೆ ನಡೆಸಲಿದ್ದಾರೆ.
ಸೋಮವಾರ ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ತಜ್ಞರು ಹಾಗೂ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ಕೈಗೊಳ್ಳಬೆಕಾಗಿರುವ ಕ್ರಮಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.