ನಮಸ್ಕಾರ ಸ್ನೇಹಿತರೇ, ಇತ್ತೀಚಿನ ದಿನಗಳಲ್ಲಿ ಅದರಲ್ಲಿಯೂ ಮಳೆಗಾಲದಲ್ಲಿ ಹೆಚ್ಚಿನ ಜನರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗಿ ಜ್ವರ, ಶೀತ, ಕೆಮ್ಮು ಮತ್ತು ಕಫದಂತಹ ಹಲವಾರು ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಇಂತಹ ಸಮಸ್ಯೆಗಳಿಂದ ದೂರ ಉಳಿಯಲು ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಸರಿಯಾದ ಪ್ರಮಾಣದಲ್ಲಿ ಇರಬೇಕು. ಹೀಗೆ ರೋಗ ನಿರೋಧಕ ಶಕ್ತಿ ಸರಿಯಾದ ಪ್ರಮಾಣದಲ್ಲಿ ಇರಲು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಏನು ಮಾಡಬೇಕೆಂಬುದನ್ನು ನಾವು ಇಲ್ಲಿ ತಿಳಿಯೋಣ.

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕಷಾಯ ಪುಡಿ ಮಾರುಕಟ್ಟೆಗೆ | kashaya Powder introduced To Market in Mysuru

ನಮ್ಮ ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಪ್ರತಿದಿನ ಬಿಸಿ ನೀರನ್ನು ಕುಡಿಯಬೇಕು. ಮತ್ತು ಸುಮಾರು 30 ನಿಮಿಷಗಳ ಕಾಲ ಯೋಗಾಸನ ಪ್ರಾಣಾಯಾಮ ಮತ್ತು ಧ್ಯಾನವನ್ನು ಮಾಡಬೇಕು. ಇನ್ನು ನಾವು ಸೇವಿಸುವ ಆಹಾರ ಪದಾರ್ಥಗಳಲ್ಲಿ ಪ್ರತಿದಿನ ಅರಶಿನ,ಜೀರಿಗೆ,ಕೊತ್ತುಂಬರಿ ಮತ್ತು ಬೆಳ್ಳುಳ್ಳಿಯನ್ನು ಬಳಸಬೇಕು. ಹಾಗೂ ಲವಂಗದ ಪುಡಿಯನ್ನು ಜೇನುತುಪ್ಪದ ಜೊತೆ ಸೇರಿಸಿ ತಿನ್ನುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುವುದರ ಜೊತೆಗೆ ಒಣ ಕೆಮ್ಮು ಹಾಗೂ ಗಂಟಲು ಕೆರೆತದಂತಹ ಸಮಸ್ಯೆಗಳು ನಿವಾರಣೆಯಾಗುತ್ತದೆ.

ರೋಗ ನಿರೋಧಕ ಶಕ್ತಿಯನ್ನು ದುರ್ಬಲಗೊಳಿಸುವ ಪದಾರ್ಥಗಳು - Saaksha TV

ಇನ್ನು ಉಗುರು ಬೆಚ್ಚಗಿನ ಹಾಲಿಗೆ ಸ್ವಲ್ಪ ಅರಶಿನ ಹಾಗೂ ಸಕ್ಕರೆಯನ್ನು ಸೇರಿಸಿ ಕುಡಿಯಬೇಕು. ಇದರಿಂದ ಅರಶಿನದಲ್ಲಿ ಇರುವ ಆ್ಯಂಟಿ ಆಕ್ಸಿಡೆಂಟ್ ಗುಣವೂ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗಿದೆ. ಮತ್ತು ತುಳಸಿ, ದಾಲ್ಚಿನ್ನಿ, ಕಾಳುಮೆಣಸನ್ನು ಸೇರಿಸಿ ಚಾಹಾ ಮಾಡಿ ಅದಕ್ಕೆ ರುಚಿಗೆ ತಕ್ಕಷ್ಟು ಬೆಲ್ಲ ಹಾಗೂ ಸ್ವಲ್ಪ ನಿಂಬೆ ರಸವನ್ನು ಸೇರಿಸಿ ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಕಿತ್ತಳೆ, ಅನಾನಸ್,ಪಪ್ಪಾಯ,ಕಿವಿ ಪ್ರೂಟ್, ಸಿಬೇಹಣ್ಣು, ಸಪೋಟ ಮುಸುಂಬಿ, ನೆಲ್ಲಿಕಾಯಿ, ಟೊಮೆಟೊ, ಬೀಟ್ರೂಟ್, ಕ್ಯಾರೆಟ್, ಸೊಪ್ಪುಗಳನ್ನು ಹಾಗೂ ಡ್ರೈ ಫ್ರೂಟ್ಸ್ ಗಳನ್ನು ತಿನ್ನುವುದರಿಂದ ಕೂಡ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.
ನಿಮ್ಮ ಸ್ನೇಹಿತರಿಗೆ ಮತ್ತು ಫೇಸ್ಬುಕ್ ಗ್ರೂಪ್ ಗೆ ಶೇರ ಮಾಡಿ...
DMCA.com Protection Status
error: Fuck you !!