ಲಕ್ನೋ: ಅಪ್ರಾಪ್ತ ಮಗಳ ಮೇಲೆ ತಂದೆಯೇ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಪ್ರೇಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಂದೆಯ ಕಿರುಕುಳದಿಂದ ನೊಂದ 15 ವರ್ಷದ ಪುತ್ರಿ ಪ್ರೇಮನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ಸಂತ್ರಸ್ತೆಯ ತಾಯಿ ಎರಡು ವರ್ಷಗಳ ಹಿಂದೆ ಸಾವನ್ನಪ್ಪಿದ್ದರಿಂದ ಬಾಲಕಿ ತಂದೆಯ ಜೊತೆಯಲ್ಲಿಯೇ ವಾಸವಾಗಿದ್ದಳು. ಆರು ತಿಂಗಳಿನಿಂದ ತಂದೆ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕಳೆದ ಒಂದು ತಿಂಗಳಿನಿಂದ ಮಗಳ ಜೊತೆ ಅಶ್ಲೀಲವಾಗಿ ನಡೆದುಕೊಳ್ಳುವದನ್ನ ಕಾಮುಕ ಅಪ್ಪ ಹೆಚ್ಚು ಮಾಡಿದ್ದನು.

Father-on-daughter

ಪ್ರಕರಣದ ಕುರಿತು ಮಾಹಿತಿ ನೀಡಿರುವ ಪೊಲೀಸ್ ವರಿಷ್ಠ ಅಧಿಕಾರಿ ರೋಹಿತ್ ಸಿಂಗ್, ಅತ್ಯಾಚಾರದ ವಿಷಯವನ್ನ ಹೊರಗಿನವರಿಗೆ ತಿಳಿಸಿದ್ರೆ ಕೊಲ್ಲುವದಾಗಿ ತಂದೆ ಬೆದರಿಕೆ ಹಾಕಿದ್ದನು. ಕೊನೆಗೆ ಬಾಲಕಿ ಸಂಬಂಧಿಯೊಬ್ಬರ ಸಹಾಯ ಪಡೆದು ಠಾಣೆಗೆ ಆಗಮಿಸಿ ದೂರು ದಾಖಲಿಸಿದ್ದಾಳೆ. ದೂರು ದಾಖಲಾಗುತ್ತಿದ್ದಂತೆ ಆರೋಪಿ ತಂದೆ ಪರಾರಿಯಾಗಿದ್ದಾನೆ. ಶೀಘ್ರದಲ್ಲೇ ಆರೋಪಿಯನ್ನ ಬಂಧಿಸಲಾಗುವುದು ಎಂದು ಹೇಳಿದ್ದಾರೆ.

ಬಾಲಕಿಯನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಲೈಂಗಿಕ ದೌರ್ಜನ್ಯ ನಡೆದಿರೋದನ್ನ ವೈದ್ಯರು ದೃಢಪಡಿಸಿದ್ದಾರೆ. ಪೊಲೀಸರು ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ್ದು, ಬಾಲಕಿಯಿಂದ ಹೆಚ್ಚಿನ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

ನಿಮ್ಮ ಸ್ನೇಹಿತರಿಗೂ/ಫೇಸ್ಬುಕ್ ಗ್ರೂಪ್ ಗೆ ಶೇರ್ ಮಾಡಿ...
  •  
  •  
  •  
  •  
  •  
  •  
  •  
  •