ಬೈಕ್,ಟಿವಿ,ಫ್ರಿಡ್ಜ್ ಇದ್ದವರ BPL ಕಾರ್ಡ್​ ರದ್ದು;ಸ್ಪಷ್ಟನೆ ನೀಡಿದ ಆಹಾರ ಇಲಾಖೆ ಆಯುಕ್ತೆ.

Home Kannada News/ಸುದ್ದಿಗಳು ಸರ್ಕಾರೀ ಉಚಿತ ಯೋಜನೆಗಳು

ಬೈಕ್, ಟಿವಿ, ಫ್ರಿಡ್ಜ್ ಇದ್ದವರ ಬಿಪಿಎಲ್ ಕಾರ್ಡ್​ಗಳನ್ನು ರದ್ದು ಮಾಡುವುದಿಲ್ಲ ಎಂದು ಬೆಂಗಳೂರಿನಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಆಯುಕ್ತೆ ಶಮ್ಲಾ ಇಕ್ಬಾಲ್ ಸ್ಪಷ್ಟೀಕರಣ ನೀಡಿದ್ದಾರೆ. ಈ ಕುರಿತು ವದಂತಿಗಳನ್ನು ಜನ ನಂಬುವುದು ಬೇಡ. BPL ಕಾರ್ಡ್ ರದ್ದು ಮಾಡುವ ಸುದ್ದಿಗಳು ಆಧಾರ ರಹಿತ. ಅಂತಹ ಯಾವುದೇ ಆದೇಶ ಇಲಾಖೆಯಿಂದ ಹೊರಡಿಸಿಲ್ಲ. ಬೈಕ್, ಟಿವಿ, ಫ್ರಿಡ್ಜ್ ಇದ್ದವರ BPL ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಅವರು ಸ್ಪಷ್ಟೀಕರಣ ನೀಡಿದ್ದಾರೆ.

ಬಡತನ ರೇಖೆಗಿಂತ ಕೆಳಗಿರುವವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುತ್ತದೆ. ಈಮುನ್ನ ಬಿಪಿಎಲ್ ಪಡಿತರು ಮೂರು ಹೆಕ್ಟೇರ್ ಭೂಮಿಯನ್ನು ಹೊಂದಿದ್ದರೆ ಅಥವಾ ವಾರ್ಷಿಕ ಆದಾಯವು 1.28 ಲಕ್ಷ ರೂ. ಇದ್ದವರ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತಿತ್ತು. ಈಮುನ್ನ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಉಮೇಶ್ ಕತ್ತಿ ಕಾರ್ಯಕ್ರಮವೊಂದರಲ್ಲಿ ಬಿಪಿಎಲ್​ ಕಾರ್ಡ್​ ಹೊಂದಿದ್ದವರು ಟಿವಿ,ಬೈಕ್ ಅಥವಾ ಪ್ರಿಡ್ಜ್ ಹೊಂದಿದ್ದಲ್ಲಿ ಬಿಪಿಎಲ್ ಕಾರ್ಡ್​ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿದ್ದರು. ಅವರ ಈ ಹೇಳಿಕೆ ನಂತರ ರಾಜ್ಯದ ಅಲ್ಲಲ್ಲಿ ಬಿಪಿಎಲ್ ಕಾರ್ಡ್ ರದ್ದುಗೊಂಡ ಸುದ್ದಿಗಳು ಸಹ ವರದಿಯಾಗಿದ್ದವು.

ಅಕ್ರಮ ಬಿಪಿಎಲ್ ಕಾರ್ಡ್​ಗಳನ್ನು ರದ್ದುಗೊಳಿಸುವ ಭರದಲ್ಲಿ ರಾಜ್ಯ ಸರ್ಕಾರ ಆತುರದ ಹೆಜ್ಜೆಯಿಟ್ಟಿದೆಯೇ ಎಂಬ ಅನುಮಾನಗಳು ಸಹ ಮೂಡಿದ್ದವು. ಹೀಗಾಗಿ ಬಿಪಿಎಲ್​ ಕಾರ್ಡ್ ಇರುವ ಟಿವಿ,ಬೈಕ್ ಅಥವಾ ಪ್ರಿಡ್ಜ್ ಹೊಂದಿದ್ದವರಿಗೆ ಆತಂಕ ಕಾರಣವಾಗಿತ್ತು. ಆದರೆ ಇದೀಗ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಆಯುಕ್ತೆ ಶಮ್ಲಾ ಇಕ್ಬಾಲ್ ನೀಡಿರುವ ಸ್ಪಷ್ಟೀಕರಣ ಎಲ್ಲ ಗುಮಾನಿಗಳಿಗೂ ತೆರೆ ಎಳೆದಿದೆ.

ನಿಮ್ಮ ಸ್ನೇಹಿತರಿಗೆ ಮತ್ತು ಫೇಸ್ಬುಕ್ ಗ್ರೂಪ್ ಗೆ ಶೇರ ಮಾಡಿ...