ಹಿರಿಯ ನಟ ದೊಡ್ಡಣ್ಣ ಆರೋಗ್ಯದಲ್ಲಿ ವ್ಯತ್ಯಯ ಆಸ್ಪತ್ರೆಗೆ ದಾಖಲು,ವೈದ್ಯರು ಹೇಳಿದ್ದೇನು ಗೊತ್ತಾ?

Cinema/ಸಿನಿಮಾ Health/ಆರೋಗ್ಯ Home Kannada News/ಸುದ್ದಿಗಳು

ದೊಡ್ಡಣ್ಣ ಅವರು 11 ನವೆಂಬರ್ 1949 ರಂದು ಜನಿಸಿದರು. ಕುಟುಂಬದ ಕಿರಿಯ ಮಗನಿಗೆ ಅವರ ಅಜ್ಜ ಕಡಲೆ ದೊಡ್ಡಪ್ಪ ಎಂದು ಹೆಸರಿಡಲಾಗಿತ್ತು. ಅವರು ಭದ್ರಾವತಿಯಲ್ಲಿ ವಿಘ್ನೇಶ್ವರ ಕಲಾ ಸಂಘ ಎಂಬ ನಾಟಕ ಶಾಲೆಯಿಂದ ತಮ್ಮ ವೃತ್ತಿಜೀವನವನ್ನು ರಂಗಭೂಮಿ ನಟನಾಗಿ ಪ್ರಾರಂಭಿಸಿದರು, ಆ ಸಮಯದಲ್ಲಿ ಅವರು ಉಕ್ಕಿನ ಕಾರ್ಖಾನೆಯಲ್ಲಿ ಕೆಲಸ ಮಾಡಿದರು. ಇವರು ಗಂಧರ್ವ ರಂಗ ಎಂಬ ಹೆಸರಿನ ರಂಗಭೂಮಿ ತಂಡವನ್ನು ತಮ್ಮ ಸ್ನೇಹಿತರೊಂದಿಗೆ ಪ್ರಾರಂಭಿಸಿದರು.

ನಂತರ ಅವರು ಕನ್ನಡ ಮತ್ತು ತಮಿಳು ಚಲನಚಿತ್ರೋದ್ಯಮಕ್ಕೆ ಪ್ರವೇಶಿಸಿದರು. ದೊಡ್ಡಣ್ಣ ಒಬ್ಬ ಬಹುಮುಖ ಪ್ರತಿಭೆಯ ನಟ. ಅವರು ಖಳನಾಯಕರು, ಪೊಲೀಸ್ ಮತ್ತು ಇತರ ಪಾತ್ರಗಳನ್ನು ಚಿತ್ರಿಸಿದ್ದಾರೆ. ಹಾಸ್ಯ ನಟರಾಗಿ ಇವರು ವಿಶೇಷವಾಗಿ ಯಶಸ್ವಿಯಾಗಿದ್ದಾರೆ. ಇದೀಗ ಹಿರಿಯ ನಟ ದೊಡ್ಡಣ್ಣನವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಬೆಳಗ್ಗೆಯೇ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ನಾನು ಬದುಕಿದ್ದೇನೆ, ಸತ್ತಿಲ್ಲ. ದಯವಿಟ್ಟು ಸುಳ್ಳು ಸುದ್ದಿ ಹಬ್ಬಿಸಬೇಡಿ : ನಟ ದೊಡ್ಡಣ್ಣ | udayavani

ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಯಾವುದೇ ತೊಂದರೆ ಇಲ್ಲ ಎಂದು ಆಸ್ಪತ್ರೆ ಮೂಲಗಳಿಂದ ಮಾಹಿತಿ ಲಭಿಸಿದೆ. ನಟ ದೊಡ್ಡಣ್ಣ ಅವರು ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಸೂಕ್ತ ಚಿಕಿತ್ಸೆ ಪಡೆಯಲು ಬುಧವಾರ ಬೆಳಗ್ಗೆ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟ ದೊಡ್ಡಣ್ಣವರ ಆರೋಗ್ಯ ಕುರಿತಾಗಿ ಜಯದೇವ ಹೃದ್ರೋಗ ಆಸ್ಪತ್ರೆಯ ಎಂಡಿ ಡಾ.ಮಂಜುನಾಥ್ ಪ್ರತಿಕ್ರಿಯೆ ನೀಡಿದ್ದಾರೆ

ಹಿಂದೆ ನಟ ದೊಡ್ಡಣ್ಣ ಅವರ ಸಾವಿನ ಬಗ್ಗೆ ಅನೇಕ ಊಹಾಪೋಹಾಗಳು ಹಬ್ಬಿದ್ದವು. ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಇನ್ನಿಲ್ಲ ಎಂಬ ಪೋಸ್ಟ್​​ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವುದೊಡ್ಡಣ್ಣ ಅವರಿಗೆ ಪೇಸ್​ ಮೇಕರ್​ ಅಳವಡಿಸಲಾಗಿದೆ. ಮೂರು ದಿನಗಳ ಕಾಲ ಅವರು ಆಸ್ಪತ್ರೆಯಲ್ಲೇ ಇರಲಿದ್ದಾರೆ. ಬಳಿಕ ಡಿಸ್ಚಾರ್ಜ್​ ಮಾಡಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ದೊಡ್ಡಣ್ಣ ಅವರು ಹೆಚ್ಚು ಸಿನಿಮಾಗಳಲ್ಲಿ ನಟಿಸುತ್ತಿಲ್ಲ. ಅಂಬರೀಷ್​ ಅಭಿನಯದ ‘ಅಂಬಿ ನಿಂಗ್​ ವಯಸ್ಸಾಯ್ತೋ’ ಚಿತ್ರದ ಬಳಿಕ ದೊಡ್ಡಣ್ಣ ಬೇರೆ ಯಾವುದೇ ಚಿತ್ರದಲ್ಲೂ ಕಾಣಿಸಿಕೊಂಡಿಲ್ಲ. ಅನಾರೋಗ್ಯದ ಸುದ್ದಿಯಿಂದ ಅವರ ಅಭಿಮಾನಿಗಳಿಗೆ ಆತಂಕ ಉಂಟಾಗಿದೆ. ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ನಿಮ್ಮ ಸ್ನೇಹಿತರಿಗೆ ಮತ್ತು ಫೇಸ್ಬುಕ್ ಗ್ರೂಪ್ ಗೆ ಶೇರ ಮಾಡಿ...