ಬೆಂಗಳೂರು-ಕೆಎಎಸ್ ಅಧಿಕಾರಿ ಡಾ. ಬಿ. ಸುಧಾ ನಿವಾಸದ ಮೇಲೆ ಎಸಿಬಿ ಪೊಲೀಸರು ಶನಿವಾರ ದಾಳಿ ಮಾಡಿದ್ದರು. ಅಕ್ರಮ ಆಸ್ತಿಗಳಿಕೆ ಆರೋಪದ ಮೇಲೆ ದಾಳಿ ಮಾಡಲಾಗಿತ್ತು.

ಡಾ. ಬಿ. ಸುಧಾ ಅವರ ಮನೆಯಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ, ಹಣಪತ್ತೆಯಾಗಿತ್ತು. ಎಸಿಬಿ ಕೈಗೆ ಸಿಕ್ಕ ಆಸ್ತಿಗಳ ಮೌಲ್ಯ ಎಷ್ಟು ಎಂಬುದು ಈಗ ಬಹಿರಂಗವಾಗಿದೆ. ಸುಧಾ ಅವರ ಮನೆಯಲ್ಲಿಯೇ 36 ಲಕ್ಷ ರೂ. ಹಣ ಸಿಕ್ಕಿದೆ.

ಸುಧಾ ಅವರ ಕೊಡಿಗೆಹಳ್ಳಿ ಮನೆ, ಯಲಹಂಕದಲ್ಲಿರುವ ಫ್ಲ್ಯಾಟ್, ಶಾಂತಿ ನಗರದಲ್ಲಿರುವ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯ ಪ್ರಧಾನ ಕಚೇರಿಯ ಆಡಳಿತಾಧಿಕಾರಿ ಕಚೇರಿ ಮೇಲೆ ದಾಳಿ ನಡೆದಿತ್ತು.

KAS-Officer-Sudha

ಮೈಸೂರಿನ ಶ್ರೀರಾಂಪುರ, ಉಡುಪಿಯ ತೆಂಕ ಮಿಜಾರಿನಲ್ಲಿರುವ ಸುಧಾ ಅವರ ಪತಿಯ ನಿವಾಸದ ಮೇಲೆಯೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆಯನ್ನು ನಡೆಸಿದ್ದರು. 2013ರಿಂದ ಇತ್ತೀಚಿನ ತನಕ ಸುಧಾ ಅವರು ಬಿಡಿಎ ವಿಶೇಷ ಭೂಸ್ವಾಧೀನಾಧಿಕಾರಿ ಹುದ್ದೆಯಲ್ಲಿದ್ದರು.

ಕೆಲವು ತಿಂಗಳ ಹಿಂದೆ ಐಟಿ-ಬಿಟಿ ಇಲಾಖೆಯ ಪ್ರಧಾನ ಕಚೇರಿ ಆಡಳಿತಾಧಿಕಾರಿ ಹುದ್ದೆಗೆ ವರ್ಗಾವಣೆಗೊಂಡಿದ್ದರು. ಸಾಮಾಜಿಕ ಕಾರ್ಯಕರ್ತ ಟಿ. ಜೆ. ಅಬ್ರಾಹಂ ಜೂನ್ 18ರಂದು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಸುಧಾ ಅವರ ವಿರುದ್ಧ ಅಕ್ರಮ ಆಸ್ತಿಗಳಿಕೆ ದೂರನ್ನು ಸಲ್ಲಿಸಿದ್ದರು. ನ್ಯಾಯಾಲಯ ಈ ಕುರಿತು ತನಿಖೆ ನಡೆಸುವಂತೆ ಎಸಿಬಿಗೆ ಸೂಚನೆ ನೀಡಿತ್ತು. ಆಗಸ್ಟ್ 27ರಂದು ಎಫ್‌ಐಆರ್ ದಾಖಲು ಮಾಡಿಕೊಂಡು ತನಿಖೆಯನ್ನು ಆರಂಭಿಸಲಾಗಿತ್ತು. ಈ ಎಫ್‌ಐಆರ್ ಅನ್ವಯ ಶನಿವಾರ ಸುಧಾ ಅವರ ನಿವಾಸದ ಮೇಲೆ ದಾಳಿ ಮಾಡಲಾಗಿತ್ತು.

ಸುಧಾ ಅವರ ನಿವಾದಲ್ಲಿ ಎಸಿಬಿ ಅಧಿಕಾರಿಗಳು 3.5 ಕೆಜಿ ಚಿನ್ನ, 7 ಕೆಜಿ ಬೆಳ್ಳಿ, 36 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ. 250 ಕೋಟಿ ರೂ. ಮೌಲ್ಯದ ಆಸ್ತಿಗಳು ಪತ್ತೆಯಾಗಿವೆ.

ನಿಮ್ಮ ಸ್ನೇಹಿತರಿಗೂ/ಫೇಸ್ಬುಕ್ ಗ್ರೂಪ್ ಗೆ ಶೇರ್ ಮಾಡಿ...
  •  
  •  
  •  
  •  
  •  
  •  
  •  
  •