ಚಿಕ್ಕಮಗಳೂರಿನ ರೆಸಾರ್ಟ್ ನಲ್ಲಿ ಕುಮಾರಸ್ವಾಮಿ ಅವರು ಹುಟ್ಟುಹಬ್ಬ ಆಚರಿಸಿಕೊಂಡಿದ್ದು ಯಾರ ಜೊತೆ ಗೊತ್ತಾ?

ಇಂದು ಮಾಜಿ‌ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹುಟ್ಟುಹಬ್ಬ.. ಆದರೆ ಕೊರೊನಾ ಕಾರಣದಿಂದಾಗಿ ಅದ್ಧೂರಿ ಆಚರಣೆಗೆ ಬ್ರೇಕ್ ಹಾಕಿದ್ದಾರೆ.. ಮನೆಯ ಬಳಿ ಬರುವ ನೂರಾರು ಅಭಿಮಾನಿಗಳಿಗೆ ಹುಟ್ಟುಹಬ್ಬದ ಆಚರಣೆ ಬೇಡವೆಂದಿದ್ದಾರೆ.. ಇನ್ನು ಎಂದಿನಂತೆ ಜೆಡಿಎಸ್ ಪಕ್ಷದ ಕಾರ್ಯಕರ್ತರು ಆ ಆ ಜಿಲ್ಲೆಗಳಲ್ಲಿ ತಾಲೂಕುಗಳಲ್ಲಿ ಹಾಗೂ ಹಳ್ಳಿಗಳಲ್ಲಿ ತಾವು ಇದ್ದಲ್ಲಿಯೇ ಕುಮಾರಸ್ವಾಮಿ ಅವರ ಹುಟ್ಟುಹಬ್ಬ ಆಚರಿಸಿ ಸಾಮಾಜಿಕ ಕಾರ್ಯಗಳನ್ನು ಮಾಡಿದ್ದಾರೆ..

ಅಲ್ಲಲ್ಲಿ ಸಾರವಜನಿಕ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಕಾರ್ಯ ನಡೆದಿದ್ದು ಮತ್ತೆ ಕೆಲವು ಕಡೆ ರಕ್ತದಾನವೂ ನಡೆದಿದೆ.. ಜೊತೆಗೆ ಕೆಲವೊಂದು ಕಡೆ ಸಾರ್ವಜನಿಕರಿಗೆ ಊಟದ ವ್ಯವಸ್ಥೆಯನ್ನೂ ಸಹ ಮಾಡಿದ್ದು ತಾವು ಇದ್ದಲ್ಲಿಯೇ ನೆಚ್ಚಿನ ನಾಯಕನ ಹುಟ್ಟುಹಬ್ಬವನ್ನು ಆಚರಿಸಿದ್ದಾರೆನ್ನಬಹುದು.. ಇನ್ನು ಈ ಮೊದಲೇ ತಿಳಿಸಿದಂತೆ ಕುಮಾರಸ್ವಾಮಿ ಅವರು ಹುಟ್ಟುಹಬ್ಬದ ದಿನ ಬೆಂಗಳೂರಿನಲ್ಲಿ‌‌ ಇರುವುದಿಲ್ಲ ಎನ್ನುವ ವಿಚಾರ ಎಲ್ಲರಿಗೂ ತಿಳಿದಿತ್ತು.. ಆದರೆ ಹುಟ್ಟುಹಬ್ಬದ ದಿನ ಕುಮಾರಸ್ವಾಮಿ ಅವರು ಎಲ್ಲಿಗೆ ಹೋಗಿದ್ದಾರೆಂಬ ಸಣ್ಣ ಕುತೂಹಲ ಇದ್ದೇ ಇತ್ತು.. ಇದಕ್ಕೆ ಉತ್ತರ ಇಲ್ಲಿದೆ ನೋಡಿ..

ಹೌದು ಕುಮಾರಸ್ವಾಮಿ ಅವರು ಕಳೆದ ಎರಡು ದಿನದ ಹಿಂದೆಯೇ ಬೆಂಗಳೂರಿನಿಂದ ಹೊರ ಬಂದು ಚಿಕ್ಕಮಗಳೂರಿನಲ್ಲಿ ವಾಸ್ತವ್ಯ ಹೂಡಿದ್ದರು.. ಹೌದು ಚಿಕ್ಕಮಗಳೂರಿನ ರೆಸಾರ್ಟ್ ಒಂದರಲ್ಲಿ ಕುಮಾರಸ್ವಾಮಿ ಅವರು ತಂಗಿದ್ದು ಇಂದು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ರೆಸಾರ್ಟ್ ನಲ್ಲಿಯೇ ಸರಳವಾಗಿ ಆಚರಿಸಿಕೊಂಡಿದ್ದಾರೆ.. ಆದರೆ ಕುಟುಂಬದ ಜೊತೆಯಲ್ಲಾ.. ಬದಲಿಗೆ

ಬದಲಿಗೆ ಜೆಡಿಎಸ್ ಕಾರ್ಯಕರ್ತರ ಜೊತೆ.. ಹೌದು ಕುಮಾರಸ್ವಾಮಿ ಅವರು ತಮ್ಮ ಹುಟ್ಟುಹಬ್ಬವನ್ನು ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಭಾಗದಲ್ಲಿರೋ ಜಾವರಿನ್ ರೆಸಾರ್ಟ್‍ನಲ್ಲಿ ಜೆಡಿಎಸ್ ಕಾರ್ಯಕರ್ತರೊಂದಿಗೆ ಸರಳವಾಗಿ ಆಚರಿಸಿಕೊಂಡಿದ್ದಾರೆ..

kumaraswamy-resort

ಸೋಮವಾರ ರಾತ್ರಿಯೇ ಚಿಕ್ಕಮಗಳೂರಿಗೆ ಆಗಮಿಸಿದ ಕುಮಾರಸ್ವಾಮಿ ಅವರು ಎರಡು ದಿನಗಳ ಕಾಲ ರೆಸಾರ್ಟ್ ನಲ್ಲಿಯೇ ಕಾಲ ಕಳೆದಿದ್ದಾರೆ.. ಕುಮಾರಸ್ವಾಮಿ ಅವರು ಜಿಲ್ಲೆಗೆ ಬಂದಿರೋ ವಿಚಾರ ಜಿಲ್ಲೆಯ ಬಹುತೇಕ ಜೆಡಿಎಸ್ ಕಾರ್ಯಕರ್ತರಿಗೆ ತಿಳಿದಿರಲಿಲ್ಲ.. ಎರಡು ದಿನಗಳ ಕಾಲ ರೆಸಾರ್ಟ್ ನಲ್ಲಿಯೇ ವಿಶ್ರಾಂತಿ ಪಡೆದು ಇಂದು ಸರಳವಾಗಿ ಜೆಡಿಎಸ್ ಕಾರ್ಯಕರ್ತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ..

ಇತ್ತ ನಿಖಿಲ್ ಕುಮಾರಸ್ವಾಮಿ ಅವರು ಅಪ್ಪನ ಜೊತೆಗಿನ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಹುಟ್ಟುಹಬ್ಬದ ಶುಭಾಶಯಗಳು ಅಪ್ಪ ಎಂದು ಬರೆದು ಪೋಸ್ಟ್ ಮಾಡುವ ಮೂಲಕ ಅಪ್ಪನಿಗೆ ಹುಟ್ಟಿದ ಹಬ್ಬದ ಶುಭಾಶಯ ತಿಳಿಸಿದ್ದು.. ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಹ ಸಾಮಾಜಿಕ ಜಾಲತಾಣದಲ್ಲಿ ಕುಮಾರಸ್ವಾಮಿ ಅವರಿಗೆ ಶುಭಾಶಯ ತಿಳಿಸಿದ್ದಾರೆ..

ಅಷ್ಟೇ ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರೂ ಸಹ ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿ ಶುಭ ಹಾರೈಸಿದ್ದಾರೆ.. ಹೌದು ಟ್ವಿಟ್ಟರ್ ನಲ್ಲಿ ಶುಭಾಶಯ ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು “ಕುಮಾರಸ್ವಾಮಿ ಅವರಿಗೆ ಜನ್ಮ ದಿನದ ಶುಭಾಶಯಗಳು.. ದೇವರು ಆಯುಷ್ಯ ಆರೋಗ್ಯ ಕರುಣಿಸಲಿ” ಎಂದು ಟ್ವೀಟ್ ಮಾಡಿದ್ದಾರೆ..

ನಿಮ್ಮ ಸ್ನೇಹಿತರಿಗೂ/ಫೇಸ್ಬುಕ್ ಗ್ರೂಪ್ ಗೆ ಶೇರ್ ಮಾಡಿ...
  •  
  •  
  •  
  •  
  •  
  •  
  •  
  •