ಕಲ್ಬುರ್ಗಿಯ ವಿವಿಧ ತಾಲೂಕು ಕೇಂದ್ರಗಳು ಮತ್ತು ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ ಮೇಲ್ವಿಚಾರಕರ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡುವ ಪ್ರಕ್ರಿಯೆ ಹೇಗೆ, ದೊರೆಯುವ ಸಂಬಳ ಎಷ್ಟು, ಅರ್ಹತೆಗಳು ಏನು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಈ ಎಲ್ಲಾ ವಿಷಯಗಳ ಕುರಿತಾಗಿ ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.

ಕಲ್ಬುರ್ಗಿಯ ವಿವಿಧ ತಾಲೂಕು ಕೇಂದ್ರಗಳು ಮತ್ತು ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳಲ್ಲಿ ಖಾಲಿಯಿರುವ ಮೇಲ್ವಿಚಾರಕರ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಈ ಕುರಿತು ಕಲ್ಬುರ್ಗಿ ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ಇನ್ನು ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇರಬೇಕಾದಂತಹ ಅರ್ಹತೆಗಳು ಯಾವುದು ಎಂದು ನೋಡುವುದಾದರೆ, ಅರ್ಜಿ ಸಲ್ಲಿಸುವಂತೆ ಅಭ್ಯರ್ಥಿಯು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು, ಅಭ್ಯರ್ಥಿಯು ಸ್ಥಳೀಯ ಪಂಚಾಯಿತಿ ವ್ಯಾಪ್ತಿಗೆ ವ್ಯಾಪ್ತಿಗೆ ಒಳಪಟ್ಟಿದ್ದು, ಈ ಕುರಿತು ದೃಢೀಕರಣ ಪತ್ರವನ್ನು ಅಂಟಿಸಬೇಕು , ನಿಗದಿತ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು 18 ವರ್ಷ ವಯಸ್ಸನ್ನು ಪೂರೈಸಿರಬೇಕು, ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

library-supervisor

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೀಡುವ ಸಂಬಳ ಎಷ್ಟು ಅಂತ ನೋಡುವುದಾದರೆ, ಪ್ರತಿ ತಿಂಗಳು 7000 ರೂ.ಗಳ ಗೌರವ ಸಂಭಾವನೆ ನೀಡಲಾಗುತ್ತದೆ. ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಇನ್ನು ಎಲ್ಲ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹೇಗಿರುವುದು ಎಂದು ನೋಡುವುದಾದರೆ. ನಿಗದಿತ ಅರ್ಜಿ ನಮೂನೆಯನ್ನು ಕಲಬುರ್ಗಿ ಮಿನಿವಿಧಾನ ಸೌಧದ ಮೂರನೇ ಮಹಡಿಯ ಕೊಠಡಿ ಸಂಖ್ಯೆ 26 ರಲ್ಲಿನ ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರ ಕಚೇರಿಯಿಂದ ನಮೂನೆಯನ್ನು ಪಡೆದು ಕೊಳ್ಳಬೇಕು. ನಂತರ ಭರ್ತಿ ಮಾಡಿ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳನ್ನು ಸ್ವಯಂ ದೃಢೀಕರಿಸಿ ಲಗತ್ತಿಸಿ ಸಂಬಂಧಪಟ್ಟ ಆಯಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 17 ಡಿಸೆಂಬರ್ 2020ರ ಸಂಜೆ 5.30 ರ ಒಳಗೆ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಹುದ್ದೆಗಳ ಮೀಸಲಾತಿ, ವಯೋಮಿತಿ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಲು ಕಚೇರಿ ದೂರವಾಣಿ ಸಂಖ್ಯೆ 08472-221069 ಅನ್ನು ಸಂಪರ್ಕಿಸಬಹುದು.

ನಿಮ್ಮ ಸ್ನೇಹಿತರಿಗೆ ಮತ್ತು ಫೇಸ್ಬುಕ್ ಗ್ರೂಪ್ ಗೆ ಶೇರ ಮಾಡಿ...
  •  
  •  
  •  
  •  
  •  
  •  
  •