ಎಲ್ಲರಿಗು ತಿಳಿದಂತೆ ಕಳೆದ ಒಂದೂವರೆ ವರ್ಷದಿಂದ ಯಾವುದೇ ಶಾಲಾ ಚಟುವಟಿಕೆ ಇಲ್ಲದೆ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ ಅದರಲ್ಲೂ ಒಂದರಿಂದ ಎಂಟನೇ ತರಗತಿ ಮಕ್ಕಳಂತೂ ಶಾಲೆಯ ಮುಖ ನೋಡದೆ ವರ್ಷಗಳೇ ಕಳೆದಿವೆ . ಇಂತಹ ಸಮಯದಲ್ಲಿ ರಾಜ್ಯ ಸರ್ಕಾರಗಳು ಶಾಲೆ ತೆರಯಲು ಹಲವಾರು ಕ್ರಮ ಕೈಗೊಂಡರು ಸಹ ಯಾವುದು ಕೂಡ ಸರಿಯಾದ ರೀತಿಯಲ್ಲಿ ಆಗುತ್ತಿಲ್ಲ. ಇದಕ್ಕಾಗಿಯೇ ಸರ್ಕಾರ ಇದೀಗ ನಾನಾ ಯೋಜನೆಗಳನ್ನು ಗಮನದಲ್ಲಿಟ್ಟು ಮಕ್ಕಳ ಪೋಷಕರಿಗೆ ಸಿಹಿಸುದ್ದಿ ನೀಡಿದೆ.

1 ರಿಂದ 8ನೇ ತರಗತಿಯವರೆಗಿನ ಫಲಾನುಭವಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಉಪಹಾರ ಯೋಜನಯಡಿಯಲ್ಲಿ 2021ರ ಮೇ, ಜೂನ್ ಮಾಹೆಗಳ 50 ದಿನಗಳ ಬೇಸಿಗೆ ರಜಾ ಅವಧಿಗೆ ಆಹಾರಭದ್ರತಾ ಭತ್ಯೆಯ ಪರಿವರ್ತನಾ ವೆಚ್ಚದ ನಗದು ಮೊಬಲಗನ್ನು ಪಡೆಯಲು, ಅರ್ಹ ಶಾಲಾ ವಿದ್ಯಾರ್ಥಿಗಳು ಬ್ಯಾಂಕ್ ಖಾತೆ ಜಮಾ ಮಾಡಲಾಗುತ್ತದೆ. ಹೀಗಾಗಿ ಆಯಾ ವಿದ್ಯಾರ್ಥಿಗಳ ಹೆಸರಿನಲ್ಲಿ ವಿದ್ಯಾರ್ಥಿ ಬ್ಯಾಂಕ್ ಖಾತೆ ತೆರೆಯುವಂತಿ ಪೋಷಕರಿಗೆ ಶಿಕ್ಷಣ ಇಲಾಖೆ ಸೂಚಿಸಿದೆ.1 ರಿಂದ 9 ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಯಿಲ್ಲದೇ ಪಾಸ್ : ಶಿಕ್ಷಣ ಇಲಾಖೆ ಅಧಿಕೃತ ಆದೇಶ | udayavani

ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾದಂತ ವಿ ಅನ್ಬುಕುಮಾರ್ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯ್ತಿಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಪತ್ರ ಬರೆದಿದ್ದು, ಕೇಂದ್ರ ಸರ್ಕಾರದ ಶಿಕ್ಷಣ ಮಂತ್ರಾಲಯದ ನಿರ್ದೇಶನದಂತೆ ರಾಜ್ಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1 ರಿಂದ 8ನೇ ತರಗತಿಯವರೆಗಿನ ಫಲಾನುಭವಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಉಪಹಾರ ಯೋಜನೆಯಡಿಯಲ್ಲಿ 2021ರ ಮೇ, ಜೂನ್ ಮಾಹೆಗಳ 50 ದಿನಗಳ ಬೇಸಿಗೆ ರಜಾ ಅವಧಿಗೆ ಕೋವಿಡ್-19ರ ಹಿನ್ನಲೆಯಲ್ಲಿ ನೀಡಬೇಕಿರುವ One Time Welfare Measure ಗೆ ಸಂಬಂಧಿಸಿದ ಆಹಾರ ಭದ್ರತಾ ಭತ್ಯೆಯ ಪರಿವರ್ತನಾ ವೆಚ್ಚದ ( Cooking Cost) ನಗದು ಮೊಬಲಗನ್ನು ಆಯಾ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲು ( Direct Benefit Transfer -DBT) ಅವರ ಬ್ಯಾಂಕ್ ಖಾತೆ ಅಗತ್ಯವಾಗಿರುತ್ತದೆ.After CBSE and CISCE, Haryana state board cancels Class 12 exams | India News | Zee News

ವಿದ್ಯಾರ್ಥಿಗಳು ಹೊಂದಿರುವ ಬ್ಯಾಂಕ್ ಖಾತೆ ವಿವರಗಳನ್ನು ಪಡೆದು ಆಯಾ ಶಾಲೆಯ ಮುಖ್ಯ ಶಿಕ್ಷಕರು ಇಲಾಖೆಯ SATS MDM ತಂತ್ರಾಂಶದಲ್ಲಿ ಇಂದೀಕರಿಸಲು ( Data Feeding ) ಅಗತ್ಯ ಕ್ರಮ ವಹಿಸಲು ನಿರ್ಧರಿಸಲಾಗಿದೆ.ಶಾಲೆಗಳಲ್ಲಿ ವಿದ್ಯಾರ್ಥಿ ವೇತನ ಪಡೆಯುವ ಸಲುವಾಗಿ ಹಲವು ವಿದ್ಯಾರ್ಥಿಗಳು ಬ್ಯಾಂಕ್ ಖಾತೆ ಹೊಂದಿರುತ್ತಾರೆ. ಆದಾಗ್ಯೂ 1ನೇ ತರಗತಿಗೆ ದಾಖಲಾಗುವ ವಿದ್ಯಾರ್ಥಿಗಳೂ ಸೇರಿದಂತೆ ಹಲವು ವಿದ್ಯಾರ್ಥಿಗಳು ಬ್ಯಾಂಕ್ ಖಾತೆ ಇನ್ನೂ ಹೊಂದಿಲ್ಲದಿರುವುದರಿಂದ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೂ ಶೂನ್ಯ ಬ್ಯಾಂಕ್ ಠೇವಣಿ ಖಾತೆ ( Zero Balance A/C) ತೆರೆಯಲು ಸಮೀಪದ ರಾಷ್ಟ್ರೀಕೃತ ಬ್ಯಾಂಕ್, ಗ್ರಾಮೀಣ ಬ್ಯಾಂಕ್ ಹಾಗೂ ಅಂಚೆ ಕಚೇರಿ ಸೇರಿದಂತೆ.ICSE board class 10 12 exams update decision soon reviewing situation CBSE board latest news | Education News – India TV

ತಮ್ಮ ಜಿಲ್ಲಾ ವ್ಯಾಪ್ತಿಯ ಎಲ್ಲಾ ಬ್ಯಾಂಕ್ ಗಳಿಗೆ ಸೂಕ್ತ ನಿರ್ದೇಶನ ನೀಡುವ ಮೂಲಕ ಕೇಂದ್ರ ಸರ್ಕಾರದ ಆಶಯದಂತೆ ಮಧ್ಯಾಹ್ನ ಉಪಾಹಾರ ಯೋಜನೆಯ ಬೇಸಿಗೆ ರಜಾ ಅವಧಿಯ ಆಹಾರ ಭದ್ರತಾ ಸೌಲಭ್ಯವು ಎಲ್ಲಾ ಫಲಾನುಭವಿ ವಿದ್ಯಾರ್ಥಿಗಳಿಗೆ ಡಿಬಿಟಿ ಮೂಲಕ ತಲುಪುವ ನಿಟ್ಟಿನಲ್ಲಿ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರಿಗೆ ಸೂಚಿಸುವ ಸಂಬಂಧ ಅಗತ್ಯ ಕ್ರಮ ವಹಿಸಲು ತಿಳಿಸಿದೆ.ತಮ್ಮ ಜಿಲ್ಲೆಯ ಎಲ್ಲಾ ಅಕ್ಷರ ದಾಸೋಹ ಶಿಕ್ಷಣಾಧಿಕಾರಿಗಳು, ಉಪನಿರ್ದೇಶಕರು ಹಾಗೂ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಈ ಕಾರ್ಯವನ್ನು ನಿರ್ವಹಿಸಿ ಪೂರೈಸುವ ಕುರಿತು ಸೂಕ್ತ ಮಾರ್ಗದರ್ಶನ ನೀಡಲು ತಿಳಿಸಿದ್ದಾರೆ.

ನಿಮ್ಮ ಸ್ನೇಹಿತರಿಗೆ ಮತ್ತು ಫೇಸ್ಬುಕ್ ಗ್ರೂಪ್ ಗೆ ಶೇರ ಮಾಡಿ...
  •  
  •  
  •  
  •  
  •  
  •  
  •