ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಂತ್ರಸ್ತ ಯುವತಿಗೆ ಕೆಲಸದ ಅಮಿಷ ತೋರಿ ಲೈಂಗಿಕವಾಗಿ ದೌರ್ಜನ್ಯ ಎಸಗಿಲ್ಲ. ಬದಲಿಗೆ ಜಾರಕಿಹೊಳಿಯನ್ನು ಖೆಡ್ಡಾಗೆ ಬೀಳಿಸಿ ಸುಲಿಗೆಗೆ ಯತ್ನಿಸಿದ ಸಂಬಂಧ ಸಂತ್ರಸ್ತ ಯುವತಿ ಸೇರಿ ಮೂವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಎಸ್ಐಟಿ ತನಿಖಾ ತಂಡ ಮುಂದಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ನನಗೆ ಕೆಲಸದ ಅಮಿಷ ತೋರಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದರು ಎಂದು ಸಂತ್ರಸ್ತ ಯುವತಿ ಆರೋಪಿಸಿ ದೂರು ನೀಡಿದ್ದರು. ಅಶ್ಲೀಲ ಸಿಡಿ ತಯಾರಿಸಿ ನನಗೆ ಬ್ಲಾಕ್ ಮೇಲ್ ಮಾಡಿದ್ದರು ಎಂದು ಆರೋಪಿಸಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ದೂರು ನೀಡಿದ್ದರು. ರಾಸಲೀಲೆ ಸಿಡಿ ಹೊರ ಬರುತ್ತಿದ್ದಂತೆ ಜಲ ಸಂಪನ್ಮೂಲ ಖಾತೆಗೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದರು.

ಸಂತ್ರಸ್ತ ಯುವತಿಗೆ ಸರ್ಕಾರಿ ಕೆಲಸ ಕೊಡಿಸುವ ಬಗ್ಗೆ ಆಸೆ ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಸಾಕ್ಷ್ಯಾಧಾರ ಸಿಕ್ಕಿಲ್ಲ. ಸಂತ್ರಸ್ತ ಯುವತಿ ಇಂಜಿನಿಯರಿಂಗ್ ಪದವಿಯನ್ನೇ ಪೂರ್ಣಗೊಳಿಸಿಲ್ಲ. ಎರಡನೇ ವರ್ಷದಲ್ಲಿಯೇ ಇಂಜಿನಿಯರಿಂಗ್ ಪದವಿ ನಿಲ್ಲಿಸಿದ್ದಾಳೆ. ಜಲ ಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿಯನ್ನು ಡ್ಯಾಮ್ ಶ್ಯೂಟ್ ಮಾಡುವ ವಿಚಾರವಾಗಿ ಭೇಟಿ ಮಾಡಿದ್ದಾರೆ. ಈ ಪ್ರಸ್ತಾಪ ಕುರಿತು ಪರಿಶೀಲನೆ ಮಾಡಲು ಜಾರಕಿಹೊಳಿ ತಮ್ಮ ಆಪ್ತ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ಡ್ರೋನ್ ಹಾಗೂ ಡಾಕ್ಯುಮೆಂಟರಿ ಬಗ್ಗೆ ಯುವತಿಗೆ ಸಾಮಾನ್ಯ ಜ್ಞಾನ ಹೊಂದಿರಲಿಲ್ಲ.
ನಿಮ್ಮ ಸ್ನೇಹಿತರಿಗೆ ಮತ್ತು ಫೇಸ್ಬುಕ್ ಗ್ರೂಪ್ ಗೆ ಶೇರ ಮಾಡಿ...
  •  
  •  
  •  
  •  
  •  
  •  
  •