ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಉತ್ತಮ ಪ್ರದರ್ಶನದ ಹೊರತಾಗಿಯೂ ಐಪಿಎಲ್ ನಲ್ಲಿ ಪ್ರಶಸ್ತಿ ಗೆಲ್ಲಲು ವಿಫಲವಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವಿರಾಟ್ ಕೊಹ್ಲಿಗೆ ನಾಯಕ ಸ್ಥಾನದಿಂದ ಕೊಕ್ ನೀಡುವ ಸಾಧ್ಯತೆ ಇದೆ.
ಭಾರತ ತಂಡದ ನಾಯಕರಾಗಿರುವ ವಿರಾಟ್ ಕೊಹ್ಲಿ ಸಾರಥ್ಯದಲ್ಲಿ 10ಕ್ಕೂ ಅಧಿಕ ಆವೃತ್ತಿಗಳಲ್ಲಿ ಆರ್ ಸಿಬಿ ತಂಡವನ್ನು ಮುನ್ನಡೆಸಿರುವ ವಿರಾಟ್ ಕೊಹ್ಲಿಯನ್ನು ನಾಯಕ ಸ್ಥಾನದಿಂದ ಕೆಳಗಿಳಿಸಲು ಆರ್ ಸಿಬಿ ತಂಡದ ಆಡಳಿತ ಮಂಡಳಿ ಚಿಂತನೆ ನಡೆಸಿದೆ ಎನ್ನಲಾಗಿದೆ.
ಐಪಿಎಲ್ ಆಟಗಾರರನ್ನು ಉಳಿಸಿಕೊಳ್ಳಲು ಹಾಗೂ ಬಿಡುಗಡೆ ಮಾಡಲು ನೀಡಿದ್ದ ಗಡುವು ಮುಗಿಯುತ್ತಾ ಬಂದಿದ್ದು, ಮೂವರು ಆಟಗಾರರನ್ನು ಬಿಟ್ಟುಕೊಡುವ ಸಾಧ್ಯತೆ ಇದೆ. ಇದರಲ್ಲಿ ಅತೀ ದುಬಾರಿ ಆಟಗಾರರಾಗಿರುವ ವಿರಾಟ್ ಕೊಹ್ಲಿ ಕೂಡ ಸೇರಿದ್ದಾರೆ ಎಂದು ಹೇಳಲಾಗಿದೆ.
ವಿರಾಟ್ ಕೊಹ್ಲಿಯನ್ನು ಬ್ಯಾಟ್ಸ್ ಮನ್ ಆಗಿ ಉಳಿಸಿಕೊಂಡು ನಾಯಕತ್ವದಿಂದ ಕೆಳಗಿಳಿಸುವ ಬಗ್ಗೆ ಚರ್ಚೆಗಳು ನಡೆದಿದ್ದು, ಉಮೇಶ್ ಯಾದವ್, ಮೊಯಿನ್ ಅಲಿ ಮತ್ತು ಶಿವಂ ದುಬೆಯನ್ನು ಆರ್ ಸಿಬಿ ಬಿಟ್ಟುಕೊಡುವ ಸಾಧ್ಯತೆ ಇದೆ ಎನ್ನಲಾಗಿದೆ.