ರಾಜ್ಯದಲ್ಲಿ ನಿನ್ನೆ 35,297 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, 344 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ನಿನ್ನೆ 34,057 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ 14,74,678 ಮಂದಿ ಚೇತರಿಸಿಕೊಂಡಿದ್ದರೆ, ರಾಜ್ಯದಲ್ಲಿ 5,93,078 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸೋಂಕಿತರ ಸಂಖ್ಯೆ 20,88,488 ಕ್ಕೆ ಏರಿಕೆಯಾಗಿದ್ದು, ಈವರೆಗೆ 20,712 ಜನ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಬೆಂಗಳೂರು ನಗರದಲ್ಲಿ 15,191 ಜನರಲ್ಲಿ ಕೋವಿಡ್ ದೃಢಪಟ್ಟಿದ್ದು, 161 ಜನ ಮೃತಪಟ್ಟಿದ್ದಾರೆ.

ಇನ್ನು ದೇಶದ ವಿಚಾರಕ್ಕೆ ಬಂದರೆ ದಾರುಣ ಕೊರೊನಾ ಪರಿಸ್ಥಿತಿಗೆ ಸಾಕ್ಷಿಯಾಗಿರುವ ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಮತ್ತೆ ಹೊಸದಾಗಿ 3,43,144 ಸೋಂಕಿತರು ಪತ್ತೆಯಾಗಿದ್ದು, 4,000 ಜನರು ಅಸುನೀಗಿದ್ದಾರೆ. ಈ ಮೂಲಕ ದೇಶದಲ್ಲಿನ ಕೋವಿಡ್​ ಕೇಸ್​ಗಳ ಸಂಖ್ಯೆ 2,40,46,809ಕ್ಕೆ ಏರಿಕೆಯಾಗಿದ್ದು, ಈವರೆಗೆ ಒಟ್ಟು 2,62,317 ಮಂದಿ ಬಲಿಯಾಗಿದ್ದಾರೆ. 2.40 ಕೋಟಿ ಪ್ರಕರಣಗಳ ಪೈಕಿ 37,04,893 ಕೇಸ್​​ಗಳು ಸಕ್ರಿಯವಾಗಿವೆ. ಗುರುವಾರ ಒಂದೇ ದಿನ 3,44,776 ಸೋಂಕಿತರು ಗುಣಮುಖರಾಗಿದ್ದು, ಇಲ್ಲಿಯವರೆಗೆ 2,00,79,599 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Rajasthan: Bio-metric cards to help you get ration anywhere

 

ಇನ್ನು ಈ ಸಂಕಷ್ಟದ ಸಮಯ ಎದುರಿಸಲು ಸರ್ಕಾರ ಇದೀಗ ಧಿಡೀರ್ ನಿರ್ಧಾರ ಕೈಗೊಂಡಿದೆ. ಜನರಿಗೆ ಆಹಾರದ ಕೊರತೆ ಆಗಬಾರದು ಎನ್ನುವ ಕಾರಣಕ್ಕಾಗಿ ಇದೀಗ ಹೊಸ ನಿಯಮ ಜಾರಿಗೆ ತಂದಿದೆಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಕಾರ್ಡ್ ಇಲ್ಲದಿದ್ದರೂ ಉಚಿತವಾಗಿ ಪಡಿತರ ನೀಡಲು ಸರ್ಕಾರ ನಿರ್ಧರಿಸಿದೆ. ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಸಿದವರಿಗೆ ಉಚಿತವಾಗಿ ಪಡಿತರ ನೀಡಲಿದ್ದು, ಎಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಪ್ರತಿ ಕೆಜಿಗೆ 15 ರೂಪಾಯಿ ದರದಲ್ಲಿ 10 ಕೆಜಿ ಅಕ್ಕಿ ವಿತರಿಸಲಾಗುತ್ತದೆ.

ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿರುವುದರಿಂದ ಬಡವರಿಗೆ ಅನುಕೂಲವಾಗುವಂತೆ ಸರ್ಕಾರ ಕ್ರಮಕೈಗೊಂಡಿದೆ. ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಎರಡು ತಿಂಗಳು ಉಚಿತವಾಗಿ ಪಡಿತರ ನೀಡಲಿದ್ದು, ಮೇ ಮತ್ತು ಜೂನ್ ತಿಂಗಳಲ್ಲಿ ಅರ್ಜಿದಾರರಿಗೆ ತಲಾ 10 ಕೆಜಿ ಅಕ್ಕಿ ನೀಡಲಾಗುವುದು. ಎಪಿಎಲ್ ಕಾರ್ಡ್ ದಾರರಿಗೆ ಕೆಜಿಗೆ 15 ರೂಪಾಯಿ ದರದಲ್ಲಿ 10 ಕೆಜಿ ಅಕ್ಕಿ ನೀಡಲಾಗುವುದು.Kudumbashree to manage ration supply in state | Ration supply in Kerala  Kudumbashree to run ration shops

ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರು ಅರ್ಜಿ ಸಲ್ಲಿಸಿದ ಸ್ವೀಕೃತಿಯೊಂದಿಗೆ ಸಂಬಂಧಿತ ನ್ಯಾಯಬೆಲೆ ಅಂಗಡಿಗೆ ತೆರಳಿ ಬಯೋಮೆಟ್ರಿಕ್ ಅಥವಾ ಆಧಾರ್, ಓಟಿಪಿ ಮೂಲಕ ರೇಷನ್ ಪಡೆದುಕೊಳ್ಳುವಂತೆ ಆಹಾರ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

ನಿಮ್ಮ ಸ್ನೇಹಿತರಿಗೂ/ಫೇಸ್ಬುಕ್ ಗ್ರೂಪ್ ಗೆ ಶೇರ್ ಮಾಡಿ...
  •  
  •  
  •  
  •  
  •  
  •  
  •  
  •