ಕನ್ನಡ ಚಿತ್ರರಂಗದ ‘ನಾಗಮಂಡಲ’ ವಿಜಯಲಕ್ಷ್ಮಿ ಅವರ ತಾಯಿ ವಿಜಯ ಸುಂದರಂ ಸೆ.27ರಂದು ಕೊನೆ ಉಸಿರೆಳೆದಿದ್ದಾರೆ. ಕಾರವಾರದ ಮನೆ ಒಂದರಲ್ಲಿ ವಾಸವಿದ್ದ ವಿಜಯಲಕ್ಷ್ಮಿ ಮೂರು ದಿನಗಳಿಂದ ಬೆಂಗಳೂರಿನ (Bengaluru) ಗಾಂಧಿನಗರದಲ್ಲಿರುವ ಸಂತೃಪ್ತಿ ರೆಸಿಡೆನ್ಸಿ ಹೊಟೇಲ್‌ನಲ್ಲಿ ತಂಗಿದ್ದರು. ತಾಯಿ ಅವರ ದಿಢೀರ್ ನಿಧನದಿಂದ ವಿಜಯಲಕ್ಷ್ಮಿ (Vijayalakshmi) ಶಾಕ್ ಆಗಿದ್ದಾರೆ.

ವಿಜಯಲಕ್ಷ್ಮಿ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿಲ್ಲವಾದರೂ, ಇಂತಹ ವಿಡಿಯೋಗಳಿಂದಾಗಿ ಸುದ್ದಿಯಲ್ಲಿದ್ದಾರೆ. ಅವರ ಸಹೋದರಿ ಉಷಾ ಅವರಿಗೆ ಅನಾರೋಗ್ಯ ಕಾಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇತ್ತೀಚೆಗೆ ವಿಜಯಲಕ್ಷ್ಮಿಯವರಿಗೂ ಕೊವಿಡ್​ ಅಂಟಿತ್ತು. ಇದರಿಂದ ಅವರ ಆರೋಗ್ಯ ಗಂಭೀರವಾಗಿತ್ತು. ಈ ಬಗ್ಗೆ ವಿಡಿಯೋ ಮಾಡಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

‘ನಾನು ತುಂಬಾ ನರಳುತ್ತಿದ್ದೇನೆ. ಐದು ದಿನದಿಂದ ಜ್ವರ ಬಂದಿದೆ. ಕಷ್ಟಪಟ್ಟು ಆಸ್ಪತ್ರೆಗೆ ಬಂದಿದ್ದೇನೆ. ನಾನು ಕೊವಿಡ್​ ಸೆಂಟರ್​ಗೆ ಹೋಗಬೇಕು. ಈ ಬಗ್ಗೆ ಕಲಾವಿದರ ಸಂಘಕ್ಕೆ ಮನವಿ ಮಾಡಿದ್ದೇನೆ. ನಾನು ಎಲ್ಲರ ಜತೆಯೂ ಮಾತನಾಡುತ್ತಾ ಇದ್ದೇನೆ. ಆದರೆ, ಪ್ರಯೋಜನ ಆಗುತ್ತಿಲ್ಲ. ನನಗೆ ಕೊವಿಡ್​ ನ್ಯುಮೋನಿಯಾ ಅಟ್ಯಾಕ್​ ಆಗಿದೆ. ನಾನು ಉಳಿಯುವ ರೀತಿ ಕಾಣುತ್ತಿಲ್ಲ. ಐದು ದಿನದಿಂದ ಊಟ ಸರಿಯಾಗಿ ಸಿಗುತ್ತಿಲ್ಲ. ನಾನು ಎಲ್ಲಿಯೂ ಹೋಗಿಲ್ಲ. ಕರ್ನಾಟಕದಲ್ಲೇ ಇದ್ದೇನೆ’ ಎಂದಿದ್ದರು.
ನಿಮ್ಮ ಸ್ನೇಹಿತರಿಗೆ ಮತ್ತು ಫೇಸ್ಬುಕ್ ಗ್ರೂಪ್ ಗೆ ಶೇರ ಮಾಡಿ...
  •  
  •  
  •  
  •  
  •  
  •  
  •