ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಟೈಟಲ್ ಲೋಗೋ ಹಾಗೂ ಟೀಸರ್ ಗೆ ಭರ್ಜರಿ ಪ್ರತಿಕ್ರಿಯೆ ಬಂದಿದೆ.ಪ್ರಪಂಚದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಟೈಟಲ್ ಲೋಗೋ ಬಿಡುಗಡೆಯಾಗಿದೆ. ಚಿತ್ರರಂಗಕ್ಕೆ ಬಂದು 25 ವರ್ಷ ಪೂರೈಸಿದ ಹಿನ್ನೆಲೆ ದುಬೈನ ಬುರ್ಜ್ ಖಲೀಫಾದಲ್ಲಿ ಬೆಳ್ಳಿ ಮಹೋತ್ಸವ ಸಂಭ್ರಮಾಚರಣೆ ಮಾಡಲಾಗಿದೆ. ಸುದೀಪ್ ಅವರ ಬೆಳ್ಳಿ ಮಹೋತ್ಸವದ ಹಿನ್ನೆಲೆ 2000 ಅಡಿಗೂ ಎತ್ತರದ ವಿಶ್ವವಿಖ್ಯಾತ ಕಟ್ಟಡದ ಮೇಲೆ ಕಿಚ್ಚನ ಕಟೌಟ್ ಪ್ರದರ್ಶನವಾಗಿದೆ. ಅದರ ಜೊತೆ ಕಿಚ್ಚ ಸುದೀಪ್ ಅವರ ಕಟೌಟ್ ಸಹ ಪ್ರದರ್ಶನವಾಗಿದೆ.

Vikrant-Rona

ಬುರ್ಜ್ ಖಲೀಫಾ ಕಟ್ಟಡದ ಮೇಲೆ ಸುದೀಪ್ ಅವರ ಕಟೌಟ್ ನೋಡಿದ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಇನ್ನು ಸುದೀಪ್ ನಟಿಸಿದ ಚಿತ್ರಗಳ ಝಲಕ್, ಕ್ರಿಕೆಟ್, ಗಾಯನ ಸೇರಿದಂತೆ ಕಿಚ್ಚ ನಡೆದು ಬಂದ ಹಾದಿಯನ್ನು ಟೀಸರ್ ಮೂಲಕ ಬಿತ್ತರಿಸಲಾಯಿತು.

ದುಬೈನಲ್ಲಿದ್ದ ಕಿಚ್ಚ ಅಭಿಮಾನಿಗಳು ಕಿಚ್ಚ ಕಿಚ್ಚ ಎಂದು ಕೂಗಿ ಜೈಕಾರ ಹಾಕಿದ್ದಾರೆ.ಹೌದು ಸಿನಿಮಾದ ಟೈಟಲ್ ಲೋಗೋ ಟೀಸರ್ ಅದ್ದೂರಿಯಾಗಿ ಬಿಡುಗಡೆಯಾಗಿದ್ದನ್ನು ಗಮನಿಸಿದರೆ ಸಿನಿಮಾ ಕೂಡ ಚಿತ್ರ ಮಂದಿರದಲ್ಲಿ ಭಾರಿ ಸದ್ದು ಮಾಡಲಿದೆ ಎಂಬುದಂತೂ ಖಚಿತ. ಈ ವಿಕ್ರಾಂತ್ ರೋಣ ಸಿನಿಮಾ ಆರಂಭಿಕ ಹಂತದಿಂದಲೂ ನಿರೀಕ್ಷೆ ಮೂಡಿಸಿಕೊಂಡು ಬಂದಿದ್ದು, ಅಭಿಮಾನಿಗಳಿಗೆ ಈ ಸಿನಿಮಾದ ಕುರಿತು ಕುತೂಹಲ ದುಪ್ಪಟ್ಟಾಗಿದೆ. ವಿಕ್ರಾಂತ್ ರೋಣ ಸಿನಿಮಾ ಯಾವಾಗ ಬಿಡುಗಡೆಯಾಗುತ್ತೆ ಎನ್ನುವುದಕ್ಕೆ ಸ್ಪಷ್ಟವಾದ ಉತ್ತರ ಇನ್ನು ಸಿಕ್ಕಿಲ್ಲ.

vikrant-rona

ಇನ್ನು ಮೊದಲು ಕೋಟಿಗೊಬ್ಬ 3 ಸಿನಿಮಾ ತೆರೆಕಾಣಬೇಕಿದೆ. ಆಮೇಲೆ ವಿಕ್ರಾಂತ್ ರೋಣ ಚಿತ್ರಮಂದಿರಕ್ಕೆ ಬರಲಿದೆ. ಆದರೆ ವಿಕ್ರಾಂತ್ ರೋಣ ಸಿನಿಮಾದ ಕುರಿತು ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ. ವಿಕ್ರಾಂತ್ ರೋಣ ಚಿತ್ರದ ಪ್ರಚಾರ ಜೋರಾಗಿ ಶುರುವಾಗಿದ್ದು ಸಿನಿಮಾದ ಕುರಿತು ಅಭಿಮಾನಿಗಳ ಕಾತುರ ಹೆಚ್ಚಿದೆ. ಇನ್ನು ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ವಿಕ್ರಾಂತ್ ರೋಣ ತೆರೆಗೆ ಅಬ್ಬರಿಸಲಿದೆ. ಭಾರತದಲ್ಲಿ ಮಾತ್ರವಲ್ಲ ಜಗತ್ತಿನಾದ್ಯಂತ 50ಕ್ಕೂ ಹೆಚ್ಚು ದೇಶಗಳಲ್ಲಿ ಸುದೀಪ್ ಸಿನಿಮಾ ಪ್ರದರ್ಶನವಾಗಲಿದೆ ಎಂದು ಅಧಿಕೃತವಾಗಿ ಪ್ರಕಟವಾಗಿದೆ. ಇನ್ನು ಸಿನಿಮಾದ ಕುರಿತು ಸ್ವತಃ ಕಿಚ್ಚ ಸುದೀಪ್ ಮಾಹಿತಿ ನೀಡಿದ್ದಾರೆ.

ಕಿಚ್ಚ ಸುದೀಪ್, ಆರು ಭಾಷೆಯಲ್ಲಿ ವಿಕ್ರಾಂತ್ ರೋಣ ಚಿತ್ರ ಬರಲಿದೆ ಎನ್ನುವುದನ್ನು ಸ್ವತಃ ಸುದೀಪ್ ಅವರೇ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.ಆರು ಭಾಷೆಯ ಟೈಟಲ್ ಪೋಸ್ಟರ್ ಪೋಸ್ಟ್ ಮಾಡಿಕೊಂಡಿದ್ದಾರೆ. ಇನ್ನುಳಿದಂತೆ ಈ ಸಿನಿಮಾಕ್ಕೆ ಅನೂಪ್ ಭಂಡಾರಿ ಆಕ್ಷನ್ ಕಟ್ ಹೇಳಿದ್ದು, ಜಾಕ್ ಮಂಜು ನಿರ್ಮಾಣದಲ್ಲಿ ಸಿನಿಮಾ ಮೂಡಿಬರಲಿದೆ.ನಿರೂಪ್ ಭಂಡಾರಿ, ನೀತು ಅಶೋಕ್, ಮಧುಸೂದನ್ ರಾವ್, ರವಿಶಂಕರ್ ಗೌಡ ಸೇರಿದಂತೆ ಹಲವರು ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.ಅಜನೀಶ್ ಲೋಕನಾಥ್ ಸಂಗೀತವಿದ್ದು, ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದ್ದು, ಬಿಡುಗಡೆಯವರೆಗೂ ಕಾಯಬೇಕು ಅಷ್ಟೇ.

ನಿಮ್ಮ ಸ್ನೇಹಿತರಿಗೆ ಮತ್ತು ಫೇಸ್ಬುಕ್ ಗ್ರೂಪ್ ಗೆ ಶೇರ ಮಾಡಿ...
  •  
  •  
  •  
  •  
  •  
  •  
  •