ಸ್ಯಾಂಡಲ್ ವುಡ್ ನಟಿ ರಿಷಿಕಾ ಸಿಂಗ್ ಅವರು ಆಸ್ಪತ್ರೆಯಲ್ಲಿ ಎರಡು ವರೆ ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಯೋಣ.

ಅಪಘಾತದಲ್ಲಿ ಸ್ಯಾಂಡಲ್ ವುಡ್ ನಟಿ ರಿಷಿಕಾ ಸಿಂಗ್ ಗಂಭೀರವಾಗಿ ಗಾಯಗೊಂಡು ಎರಡುವರೆ ತಿಂಗಳಿನಿಂದ ವೈಟ್ ಫೀಲ್ಡ್ ಬಳಿಯ ಸಕ್ರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ನಿರ್ದೇಶಕ ಎಸ್. ವಿ ರಾಜೇಂದ್ರಸಿಂಗ್ ಬಾಬು ಅವರ ಪುತ್ರಿ. ಇವರು ಜುಲೈ 30 ಬೆಳಗ್ಗೆ 6 ಗಂಟೆಗೆ ಕುಟುಂಬದವರೊಂದಿಗೆ ಬರ್ತಡೇ ಪಾರ್ಟಿ ಮುಗಿಸಿ ವಾಪಸಾಗುವಾಗ ಯಲಹಂಕದ ಮಾವಳಿ ಬಳಿ ಅಪಘಾತವಾಗಿ ಗಾಯಗೊಂಡಿದ್ದಾರೆ. ಅಪಘಾತವಾದ ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆಗ ಆಕೆಯ ಬೆನ್ನು ಹುರಿಗೆ ಪೆಟ್ಟು ಬಿದ್ದಿರುವುದು ತಿಳಿಯುತ್ತದೆ. ನಂತರ ಸಕ್ರಾ ಆಸ್ಪತ್ರೆಗೆ ದಾಖಲಿಸಲಾಯಿತು. ಈಗಾಗಲೇ ಶಸ್ತ್ರ ಚಿಕಿತ್ಸೆ ಮಾಡಿದ್ದು ಯಶಸ್ವಿಯಾಗಿದೆ. ಕಾರಿನಲ್ಲಿ ಆಕೆ ಸೀಟ್ ಬೆಲ್ಟ್ ಹಾಕಿರಲಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ. ಆಕೆಯ ಕುಟುಂಬದವರು ಈಗಾಗಲೇ ಲಕ್ಷಾಂತರ ರೂಪಾಯಿ ಹಣವನ್ನು ಖರ್ಚು ಮಾಡಿದ್ದಾರೆ.

Rishika-Singh

ರಿಷಿಕಾ ಅವರು ಮಾಣಿಕ್ಯ, ಕಳ್ಳ ಮಳ್ಳ ಸುಳ್ಳ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಬಿಗ್ ಬಾಸ್ ಸೀಸನ್ 13 ರಲ್ಲಿ ಕಾಣಿಸಿಕೊಂಡಿದ್ದರು. ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ನಿರಂತರವಾಗಿ ಆಕೆ ಚಿಕಿತ್ಸೆ ತೆಗೆದುಕೊಳ್ಳಬೇಕು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಆಕೆ ಎರಡು ಪ್ರೊಜೆಕ್ಟ್ ಒಪ್ಪಿಕೊಂಡಿದ್ದು ಚಿಕಿತ್ಸೆ ಪಡೆಯುತ್ತಿರುವುದರಿಂದ ಆಕೆಯನ್ನು ಕೈ ಬಿಟ್ಟಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ. ಸ್ಪರ್ಶಾ ಆಸ್ಪತ್ರೆಯ ವೈದ್ಯರನ್ನು ಸಹ ಕುಟುಂಬಸ್ಥರು ಸಂಪರ್ಕಿಸಿದ್ದಾರೆ. ಸ್ಪೈನಲ್ ಕಾರ್ಡ್ ಗೆ ಪೆಟ್ಟು ಬಿದ್ದಿರುವುದರಿಂದ ಸುಧಾರಿಸಿಕೊಳ್ಳಲು ಬಹಳಷ್ಟು ದಿನ ಬೇಕಾಗುತ್ತದೆ, ಹೀಲಿಂಗ್ ಚಿಕಿತ್ಸೆಯ ಮೂಲಕ ನಿಧಾನವಾಗಿ ಗುಣವಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಆಕೆಯ ಕುಟುಂಬದವರಲ್ಲಿ ಆತಂಕ ವ್ಯಕ್ತವಾಗಿದೆ. ಆದಷ್ಟು ಬೇಗ ರಿಷಿಕಾ ಸಿಂಗ್ ಅವರು ಗುಣಮುಖರಾಗಲಿ ಎಂದು ಹಾರೈಸೋಣ.

ನಿಮ್ಮ ಸ್ನೇಹಿತರಿಗೂ/ಫೇಸ್ಬುಕ್ ಗ್ರೂಪ್ ಗೆ ಶೇರ್ ಮಾಡಿ...
  •  
  •  
  •  
  •  
  •  
  •  
  •  
  •