LINK-ADHAAR-TO-PAN

ಕೇಂದ್ರ ಸರ್ಕಾರ ಜೂನ್ 30 ರವರೆಗೂ ಪ್ಯಾನ್ ಆಧಾರ್ ಕಾರ್ಡ್​ ಲಿಂಕ್ ಗಡುವು ಮತ್ತೆ ವಿಸ್ತರಣೆ.

Free Govt Schemes/ಸರ್ಕಾರಿ ಉಚಿತ ಯೋಜನೆಗಳು

ಆಧಾರ್ ಕಾರ್ಡ್-ಪ್ಯಾನ್ ಕಾರ್ಡ್ ಲಿಂಕ್

ಆಧಾರ್-ಪ್ಯಾನ್ ಕಾರ್ಡ್ ಲಿಂಕ್ ಮಾಡಲು ಕೇಂದ್ರವು ಈಗಾಗಲೇ ಹಲವು ಬಾರಿ ಗಡುವನ್ನು ವಿಸ್ತರಿಸಿದೆ. ಈಗ ರೂ.1000 ದಂಡದೊಂದಿಗೆ ಮಾರ್ಚ್ 31, 2023 ರ ತನಕ ಗಡುವು ಇದೆ. ಗಡುವು ಮುಗಿದರೆ ನಿಮ್ಮ ಪ್ಯಾನ್ ಕಾರ್ಡ್ ರದ್ದುಗೊಳಿಸಲಾಗುವುದು ಎಂದು ಆದಾಯ ತೆರಿಗೆ ಇಲಾಖೆ ಎಚ್ಚರಿಕೆ ನೀಡಿದೆ.

ಆದರೆ ಯಾವುದೇ ದಂಡ ಶುಲ್ಕವಿಲ್ಲದೆ ಮಾರ್ಚ್ 31, 2022 ರ ಮೊದಲು ಪ್ಯಾನ್ ಅನ್ನು ಲಿಂಕ್ ಮಾಡಲು ಅವಕಾಶ ನೀಡಲಾಗಿತ್ತು. ಆದರೆ ಅದರ ನಂತರ ದಂಡವನ್ನು ಪಾವತಿಸಬೇಕಾಯಿತು. ಪ್ಯಾನ್ ಸಂಖ್ಯೆಯನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಲು 500 ರೂಪಾಯಿ ದಂಡವನ್ನು ಸಹ ಪಾವತಿಸಬೇಕಾಯಿತು. ನಂತರ ಸರ್ಕಾರವು ಪ್ಯಾನ್-ಆಧಾರ್ ಲಿಂಕ್‌ಗೆ ಗಡುವನ್ನು ಮಾರ್ಚ್ 31, 2023 ರವರೆಗೆ ವಿಸ್ತರಿಸಿತು. ಆದರೆ ರೂ. 1000 ದಂಡ ಪಾವತಿಸಿ ಲಿಂಕ್ ಮಾಡಬೇಕಾಗುತ್ತದೆ.

ಇಂತಹ ಪರಿಸ್ಥಿತಿಯಲ್ಲಿ, ಸರ್ಕಾರವು ಪ್ಯಾನ್-ಆಧಾರ್ ಲಿಂಕ್ ಮಾಡುವ ಗಡುವನ್ನು ಕೆಲವು ತಿಂಗಳುಗಳವರೆಗೆ ವಿಸ್ತರಿಸಬಹುದು ಮತ್ತು ಆದಾಯ ತೆರಿಗೆ ಇಲಾಖೆ ಶೀಘ್ರದಲ್ಲೇ ಅಧಿಸೂಚನೆಯನ್ನು ಹೊರಡಿಸಬಹುದು ಎಂದು ಆದಾಯ ತೆರಿಗೆ ಅಧಿಕಾರಿಗಳು ಹೇಳುತ್ತಾರೆ. ಪ್ರಸ್ತುತ ಗಡುವು ಮಾರ್ಚ್ 31, 2023 ರಂದು ಮುಕ್ತಾಯಗೊಳ್ಳುವ ಮೊದಲು ತೆರಿಗೆದಾರರಿಗೆ ಆಧಾರ್‌ನೊಂದಿಗೆ ಪ್ಯಾನ್ ಲಿಂಕ್ ಮಾಡಲು ಹೆಚ್ಚಿನ ಸಮಯವನ್ನು ನೀಡುವ ನಿರ್ಧಾರ ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಜೋಡಣೆಗೆ ನೀಡಿದ್ದ ಅಂತಿಮ ಗಡುವನ್ನು ಕೇಂದ್ರ ಸರ್ಕಾರ ಜೂನ್ 30 ರವರೆಗೂ ವಿಸ್ತರಿಸಿದೆ.

  • ಜೂನ್ 30ರ ಗಡುವಿನ ಒಳಗೆ ಪಾನ್ ಮತ್ತು ಆಧಾರ್ ಸಂಖ್ಯೆ ಜೋಡಣೆ ಮಾಡುವಲ್ಲಿ ವಿಫಲರಾದರೆ, ಜುಲೈ 1ರ ಬಳಿಕ ತೆರಿಗೆದಾರರು ಕಾನೂನಾತ್ಮಕ ದಂಡದ ಕ್ರಮಗಳನ್ನು ಎದುರಿಸಬೇಕಾಗುತ್ತದೆ.

ನಿಮ್ಮ ಸ್ನೇಹಿತರಿಗೆ ಹಾಗು ವಾಟ್ಸಪ್ಪ್ / ಫೇಸ್ಬುಕ್ ಗ್ರೂಪ್ ಗಳಿಗೆ ಶೇರ ಮಾಡಿ...