ವರಮಹಾಲಕ್ಷ್ಮಿ ಹಬ್ಬ. ನಾಡಿನ ಎಲ್ಲಾ ಕಡೆಗಳಲ್ಲಿ ಲಕ್ಷ್ಮಿ ಹಬ್ಬದ ಸಂಭ್ರಮ ಜೋರಾಗಿದೆ. ಹಾಗೆಯೇ ಕನ್ನಡ ಚಿತ್ರರಂಗದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಧ್ರುವ ಸರ್ಜಾ ದಂಪತಿ ಈಗ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ.ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವೃತ್ತಿ ಬದುಕು ಅದ್ಭುತವಾಗಿ ಸಾಗಿದೆ. ಅದೇ ಇನ್ನೊಂದು ಕಡೆ ವೈಯಕ್ತಿಕ ಜೀವನದಲ್ಲೂ ಸಂಭ್ರಮ ಮನೆ ಮಾಡಿದೆ. ಸದ್ಯ ಧ್ರುವ ಸರ್ಜಾ ಎರಡು ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಒಂದು ಸಿನಿಮಾ ಬಿಡುಗಡೆ ಸಜ್ಜಾಗಿದ್ದಾರೆ. ಇನ್ನೊಂದು ನಿರ್ಮಾಣದ ಹಂತದಲ್ಲಿದೆ.
ಕಳೆದ ವರ್ಷ ಅಕ್ಟೋಬರ್‌ನಲ್ಲಿ ಧ್ರುವ ಸರ್ಜಾ ಮತ್ತು ಪ್ರೇರಣಾ ದಂಪತಿ ಮನೆಗೆ ಹೆಣ್ಣು ಮಗುವಿನ ಆಗಮನವಾಗಿತ್ತು. ಇದೀಗ ಆ ಕುಟುಂಬಕ್ಕೆ ಮತ್ತೊಬ್ಬರು ಎಂಟ್ರಿ ಆಗಲಿರುವ ಶುಭ ಸುದ್ದಿಯನ್ನ ತಮ್ಮ ಸೋಷಿಯಲ್ ಮೀಡಿಯಾ ಅಕೌಂಟ್‌ನಲ್ಲಿ ಹಂಚಿಕೊಂಡಿದ್ದಾರೆ.
ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಅಭಿಮಾನಿಗಳಿಗೆ ಶುಭ ಸುದ್ದಿಯನ್ನು ಕೊಟ್ಟಿದ್ದಾರೆ. ಸ್ಪೆಷಲ್ ವಿಡಿಯೋವನ್ನು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿರುವ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾ ದಂಪತಿ ತಮ್ಮ ಎರಡನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ.
View this post on Instagram