ನಮಸ್ಕಾರ ಸ್ನೇಹಿತರೇ ಇತ್ತೀಚಿನ ದಿನಗಳಲ್ಲಿ ದಕ್ಷಿಣ ಭಾರತ ಚಿತ್ರರಂಗದಲ್ಲಿ ಪ್ಯಾನ್ ಇಂಡಿಯಾ ಚಿತ್ರಗಳ ಹಾವಳಿ ಜಾಸ್ತಿಯಾಗಿದೆ. ಮೊದಲ ಪ್ಯಾನ್ ಇಂಡಿಯಾ ಚಿತ್ರವಾಗಿ ರಾಜಮೌಳಿ ಹಾಗೂ ಪ್ರಭಾಸ್ ಕಾಂಬಿನೇಷನ್ ನಲ್ಲಿ ಮೂಡಿ ಬಂದಂತಹ ಬಾಹುಬಲಿ ಚಿತ್ರ ಸರಣಿಗಳು ನಿರೀಕ್ಷೆಗೂ ಮೀರಿ ಯಶಸ್ಸನ್ನು ಸಾಧಿಸಿದವು. ಇತ್ತೀಚಿನ ದಿನಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರದ ಮಾದರಿಯಲ್ಲಿ ಸದ್ದು ಮಾಡುತ್ತಿರುವ ಚಿತ್ರವೆಂದರೆ ಸ್ಟೈಲಿ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಪುಷ್ಪ ಚಿತ್ರ.
ಹೌದು ಸ್ನೇಹಿತರೆ ಸ್ಟೈಲಿ ಸ್ಟಾರ್ ಅಲ್ಲು ಅರ್ಜುನ್ ಹಾಗೂ ರಶ್ಮಿಕ ಮಂದಣ್ಣ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ, ಸುಕುಮಾರ್ ನಿರ್ದೇಶನದ ಪುಷ್ಪ ಚಿತ್ರ ಈಗಾಗಲೇ ಟೀಚರ್ ನಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಹಿಂದಿ ಚಿತ್ರಗಳಲ್ಲಿ ನಟಿಸದೇ ಅಲ್ಲು ಅರ್ಜುನ್ ರವರಿಗೆ ಉತ್ತರಭಾರತದಲ್ಲಿ ಸಾಕಷ್ಟು ಅಭಿಮಾನಿಗಳ ದಂಡೇ ಇದೆ. ಇನ್ನು ಪುಷ್ಪ ಚಿತ್ರದ ಹಿಂದಿ ಬಿಡುಗಡೆ ನಂತರ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಇನ್ನು ಈ ಪುಷ್ಪ ಚಿತ್ರದಲ್ಲಿ ಕನ್ನಡದ ಮತ್ತೊಬ್ಬ ನಟ ಧನಂಜಯ ಕೂಡ ನಟಿಸುತ್ತಿದ್ದಾರೆ.
ಇನ್ನು ಇತ್ತೀಚಿನ ದಿನಗಳಲ್ಲಿ ಕೇಳಿಬರುತ್ತಿರುವ ಪ್ರಕಾರ ಪುಷ್ಪ ಚಿತ್ರದಲ್ಲಿ ಸ್ಪೆಷಲ್ ಸಾಂಗ್ ಒಂದು ಇರಲಿದ್ದು ಈ ಸಾಂಗಿಗೆ ಗ್ಲಾಮರಸ್ ಬೆಡಗಿ ಸನ್ನಿ ಲಿಯೋನ್ ರವರು ಸೊಂಟ ಬಳುಕಿಸಲಿದ್ದಾರೆ ಎಂಬುದು ಖಾತ್ರಿಯಾಗಿದೆ. ಇನ್ನು ಪುಷ್ಪ ಚಿತ್ರದ ಈ ಸ್ಪೆಷಲ್ ಸಾಂಗ್ ಗೆ ಸನ್ನಿ ಲಿಯೋನ್ ರೋರು ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ ಸ್ನೇಹಿತರೆ. ಹೌದು ಸ್ನೇಹಿತರ ಪ್ಯಾನ್ ಇಂಡಿಯಾ ಚಿತ್ರವಾಗಿ ಮೂಡಿಬರುತ್ತಿರುವ ಅಲ್ಲು ಅರ್ಜುನ್ ನಟನೆಯ ಬಹುನಿರೀಕ್ಷಿತ ಪುಷ್ಪ ಚಿತ್ರದ ಸ್ಪೆಷಲ್ ಸಾಂಗ್ ಗೆ ಸನ್ನಿಲಿಯೋನ್ ರವರು ಬರೋಬ್ಬರಿ 50 ಲಕ್ಷ ರೂಪಾಯಿ ಸಂಭಾವನೆಯ ಬೇಡಿಕೆ ಇಟ್ಟಿದ್ದಾರೆ. ಈ ಕುರಿತಂತೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ತಪ್ಪದೇ ಕಾಮೆಂಟ್ ಬಾಕ್ಸ್ ಅಲ್ಲಿ ಕಾಮೆಂಟ್ ಮಾಡುವ ಮೂಲಕ ನಮ್ಮೊಂದಿಗೆ ತಪ್ಪದೆ ಹಂಚಿಕೊಳ್ಳಿ.